August 1, 2026

ಪ್ರಿಯಕರನ ಜೊತೆ ಸೇರಿ ಉಸಿರುಗಟ್ಟಿಸಿ ಅತ್ತೆ ಕೊಂದಿದ್ದ ಸೊಸೆ ಅರೆಸ್ಟ್

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಅತ್ತೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಸೊಸೆ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಶ್ಮಿ, ಪುರುಷೋತ್ತಮ್, ಅಕ್ಷಯ್ ಬಂಧಿತ ಆರೋಪಿಗಳು. ಈ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಘಟನೆ ಏನು..?: ರಶ್ಮಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತನ ಜೊತೆ ಸೇರಿ ಅತ್ತೆ ಲಕ್ಷ್ಮಮ್ಮನನ್ನ ಕೊಂದಿದ್ದಳು.  ಆರೋಪಿ ರಶ್ಮಿಯು ಮಂಜುನಾಥ್ ಎಂಬಾತನನ್ನು ಮದುವೆಯಾಗಿದ್ದಳು. ಆದರೆ ಕ್ರಮೇಣ ತಮ್ಮ ಮನೆಯ ಮೇಲೆ ಬಾಡಿಗೆಗೆ ಇದ್ದ ಅಕ್ಷಯ್ ಜೊತೆ ಸಂಪರ್ಕ ಹೊಂದಿದ್ದಳು. ಇತ್ತ ಮನೆಯ ಹಣದ ವ್ಯವಹಾರ ಸಂಬಂಧ […]

ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ

ಉಡುಪಿ: ಸಿದ್ದರಾಮಯ್ಯ  ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿವೆ. ಆಡಳಿತಾತ್ಮಕ ಸಮಸ್ಯೆ ಊಹೆಗೆ ನಿಲುಕದಷ್ಟು ಹದಗೆಟ್ಟಿದೆ. ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ ಎಂದು ಬಿಜೆಪಿ ಎಂಎಲ್​ಸಿ ಕೋಟ ಶ್ರೀನಿವಾಸ್ ಪೂಜಾರಿ ಆರೋಪಿಸಿದ್ದಾರೆ. ಯಾವ ಕಾರಣಕ್ಕೆ ಇಂಥ ಅನಾಹುತಗಳನ್ನು ಮಾಡುತ್ತಿದ್ದೀರಿ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 12,500 ಮದ್ಯದಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ. ಅಂಗಡಿಯ ವರ್ಗಾವಣೆಗೆ 18 ಲಕ್ಷ ರೂಪಾಯಿ ಸರಕಾರಕ್ಕೆ ಪಾವತಿಸುವ ನಿಯಮವಿದೆ. ಹೆಚ್ಚುವರಿ 25 […]

ದೇವೇಗೌಡ, ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ಸಿಎಂ ಇಬ್ರಾಹಿಂ

ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ , ನಾನು ಅಧ್ಯಕ್ಷ, ನನ್ನನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಪಕ್ಷ ಕುಟುಂಬದ ಸ್ವತ್ತಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ಪಕ್ಷದ್ದು ಜಾತ್ಯತೀತ ಸಿದ್ಧಾಂತ. ಬಿಜೆಪಿ ಸಿದ್ಧಾಂತವೇ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟ ಸೋಲಬೇಕಿದೆ. ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅಂತಾನೂ ಹೇಳಿದ್ದಾರೆ. ಜೆಡಿಎಸ್ […]

ಕಿತ್ತಾಡಿಕೊಂಡ ಶಿವಲಿಂಗೇಗೌಡ, ಹೆಚ್​​ಕೆ ಸುರೇಶ್

ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮದ್ಯದ ಅಂಗಡಿ ತೆರೆದ ವಿಚಾರವಾಗಿ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಮತ್ತು ಬಿಜೆಪಿ ಶಾಸಕ ಹೆಚ್​.ಕೆ.ಸುರೇಶ್  ಕಿತ್ತಾಡಿಕೊಂಡಿದ್ದಾರೆ. ಶಾಸಕರ ವಾಗ್ವಾದ ಕಂಡು ಸಚಿವ ಕೆ.ಎನ್.​ ರಾಜಣ್ಣ ಅವರು ಕಕ್ಕಾಬಿಕ್ಕಿಯಾದ ಪ್ರಸಂಗವೂ ನಡೆಯಿತು. ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಶಾಸಕ ಸುರೇಶ್ ಅವರು, ಮದ್ಯದಂಗಡಿ ತೆರೆದು ಹೆಣ್ಣುಮಕ್ಕಳ ತಾಳಿ ಕಿತ್ತುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಉತ್ತರ ನೀಡಿದ ಶಿವಲಿಂಗೇಗೌಡ, ಜನ ಸೇರಿಸುವವನು ನಾನು, ನೀನು‌ ಹದಿನೈದು […]

ಸ್ನೇಹಿತರೊಂದಿಗೆ ದೈಹಿಕ ಸಂಪರ್ಕಕ್ಕೆ ಪತಿಯಿಂದ ಒತ್ತಾಯ – ಠಾಣೆ ಮೆಟ್ಟಿಲೇರಿದ ಮಹಿಳೆ

ಬೆಂಗಳೂರು: ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ವಿಕೃತ ಪತಿಯೊಬ್ಬ ಪತ್ನಿಗೆ ಹಿಂಸೆ ನೀಡುತ್ತಿದ್ದ ವಿಚಿತ್ರ ಪ್ರಕರಣ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಡನ ವಿಚಿತ್ರ ಬೇಡಿಕೆ ನಿರಾಕರಿಸಿದ್ದಕ್ಕೆ ಆತ ಪತ್ನಿಯ ಮೇಲೆ ಹಲ್ಲೆ ಸಹ ಮಾಡಿದ್ದಾನೆ. ಅಲ್ಲದೇ ಮಾನಸಿಕ ಹಿಂಸೆ ನೀಡಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾಳೆ. ಇದೀಗ ಆಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.  ಮಂಗಳೂರು ಮೂಲದ ವಿಕೃತ ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ ಪತಿ ತನ್ನ ಮೂರು ಜನ ಸ್ನೇಹಿತರ ಜೊತೆ ದೈಹಿಕ […]

ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ; ಅವರು ಆಡಿದ್ದೇ ಆಟ

ಧಾರವಾಡ: ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ. ಅವರು ಆಡಿದ್ದೇ ಆಟ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ ಎಂದು ಟಾಂಗ್ ನೀಡಿದರು.  ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. […]

ನಂಜುಂಡೇಶ್ವರನ ಸನ್ನಿಧಾನದಲ್ಲಿ ಹೆಚ್‍ಡಿಕೆ ಕುಟುಂಬದಿಂದ ಬೆಲ್ಲದ ತುಲಾಭಾರ

ಮೈಸೂರು: ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಇಂದು ಮೈಸೂರು ಜಿಲ್ಲೆಯ ನಂಜನಗೂಡು ಶ್ರೀಕ್ಷೇತ್ರ ನಂಜುಂಡೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವತಿ ಅವರು ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹೆಚ್‍ಡಿಕೆಯವರು ದೇವೇಗೌಡರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ನಂಜುಡೇಶ್ವರನ ಸನ್ನಿಧಿಯಲ್ಲಿ ಅನಿತಾ ಕುಮಾರಸ್ವಾಮಿಯವರು ತಕ್ಕಡಿಯಲ್ಲಿ ಕೂತು ಬೆಲ್ಲದ ತುಲಾ ಭಾರ ನಡೆಸಿದ್ದಾರೆ. ಇದಕ್ಕೂ ಮುನ್ನ ಕುಟುಂಬ ತುಲಾ ಭಾರಕ್ಕೆ ಪೂಜೆ ಸಲ್ಲಿಸಿದೆ. ಪತ್ನಿ ಬಳಿಕ ಕುಮಾರಸ್ವಾಮಿ, ನಿಖಿಲ್ ಪುತ್ರ ಅವ್ಯಾನ್ ಕೂಡ ತುಲಾಭಾರ ನಡೆಸಿದ್ದಾರೆ. […]

ಹೈಕಮಾಂಡ್ ನಯಾ ಪೈಸೆ ಕೇಳಿಲ್ಲ

ಮೈಸೂರು: ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣ ಕೇಳಿಲ್ಲ ಎಂದು ಹೇಳುವ ಮೂಲಕ ಚುನಾವಣೆಗೆ ಕಾಂಗ್ರೆಸ್ ಹಣ ಸಂಗ್ರಹಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನಿಡಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮಾಡುತ್ತಿರುವ ಎಲ್ಲಾ ಆರೋಪಗಳು ಸುಳ್ಳು. ಅವೆಲ್ಲವೂ ನಿರಾಧಾರ. ಗುತ್ತಿಗೆದಾರನನ್ನ ಬಿಜೆಪಿ, ಕಾಂಗ್ರೆಸ್ ಗುತ್ತಿಗೆದಾರ ಅಂಥ ಹೇಳೊದಕ್ಕೆ ಆಗುತ್ತಾ..?, ಈಗ ನಾನು ಹೇಳುತ್ತೇನೆ. ಅವನು ಬಿಜೆಪಿ ಗುತ್ತಿಗೆದಾರ ಅಂಥ. ಅದನ್ನ ಯಾರಾದರೂ ಒಪ್ಪಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು. 5 ರಾಜ್ಯ ಚುನಾವಣೆಗೂ ನಮಗೂ […]

ಲೋಡ್ ಶೆಡ್ಡಿಂಗ್‌ಗೆ ಬೇಸತ್ತು ಡಿಕೆಶಿಗೆ ಹೋಟೆಲ್‌ಗಳಿಂದ ಪತ್ರ

ಬೆಂಗಳೂರಿಗೆ: ಅನಧಿಕೃತ ಲೋಡ್ ಶೆಡ್ಡಿಂಗ್ ಕಾಟದಿಂದಾಗಿ ಹಳ್ಳಿಯ ರೈತರ ಜೊತೆಗೆ ಈಗ ಬೆಂಗಳೂರಿಗೂ ವಿದ್ಯುತ್ ಕ್ಷಾಮದ ಶಾಕ್ ಮುಟ್ಟಿದೆ. ರಾಜ್ಯದಲ್ಲಿ ತೀವ್ರ ವಿದ್ಯುತ್ ಕ್ಷಾಮ ಉಂಟಾಗಿದೆ. ಒಂದೆಡೆ ಲೋಡ್ ಶೆಡ್ಡಿಂಗ್‌ನಿಂದ ಕೈಗಾರಿಕೆಗಳು ಕಿಡಿಯಾದರೆ ಬೆಂಗಳೂರಿಗೂ ಕರೆಂಟ್ ಅಭಾವ ಉಂಟಾಗಿದೆ. ಲೋಡ್ ಶೆಡ್ಡಿಂಗ್‌ಗೆ ಬೇಸತ್ತು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದ ಗೌರವ ಕಾರ್ಯದರ್ಶಿ ವೀರೇಂದ್ರ ಎನ್ ಕಾಮತ್ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಮುನ್ಸೂಚನೆ ಇಲ್ಲದೇ ಲೋಡ್ ಶೆಡ್ಡಿಂಗ್ ಮಾಡುವುದರಿಂದ ಹೋಟೆಲ್ ಉದ್ಯಮಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಕೋಲ್ಡ್ […]

ಬಸ್, ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿ ಐವರು ಸ್ಥಳದಲ್ಲೇ ಸಾವು

ಗದಗ: ಬಸ್ ಹಾಗೂ ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನೆರೇಗಲ್ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಟಾಟಾ ಸುಮೋದಲ್ಲಿ ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕಿರೇಶ್ವರ ಮಠಕ್ಕೆ ತೆರಳುತ್ತಿದ್ದರು. ಈ ವೇಳೆ ಗದಗದಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಟಾಟಾ ಸುಮೋದಲ್ಲಿದ್ದ ಐವರು ಸಾವಿಗೀಡಾಗಿದ್ದಾರೆ. ಮೃತರನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಿ ನಿವಾಸಿಗಳು ಎಂದು ತಿಳಿದು ಬಂದಿದೆ. ಗಾಯಗೊಂಡ ಮಕ್ಕಳನ್ನು […]