August 1, 2026

ಎಕ್ಸ್‌ಪ್ರೆಸ್ ವೇಯಲ್ಲಿ ಸರಣಿ ಅಪಘಾತ – ಹಲವರಿಗೆ ಗಾಯ

ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಮೂರು ಕಾರುಗಳ ನಡುವೆ ಸರಣಿ ಅಪಘಾತ (Accident) ಸಂಭವಿಸಿದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಶ್ರೀರಂಗಪಟ್ಟಣ ಬಳಿಯ ಗೌರಿಪುರದ ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೂ ವಾಹನಗಳು ನಿಂತಿದ್ದವು. ಸರಣಿ ಅಪಘಾತದಿಂದ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಹಲವು ನಿಮಿಷಗಳ ಬಳಿಕ ಮತ್ತೆ ರಸ್ತೆ […]

ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ

ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ  ಮುಕ್ತಾಯವಾಗಿದೆ. ನಗರದ ಮಾನ್ಯತಾ ಟೆಕ್​ಪಾರ್ಕ್‌ನಲ್ಲಿರುವ ನಿವಾಸದಲ್ಲಿ ಕಳೆದ 42 ಗಂಟೆಗಳಿಂದ ನಡೆದ ಪರಿಶೀಲನೆ ಅಂತ್ಯವಾಗಿದೆ. ಮಹತ್ವದ ದಾಖಲೆಗಳೊಂದಿಗೆ ಪಂಚನಾಮೆ ಕಾರ್ಯ ಪೂರ್ಣಗೊಳಿಸಿ ಐಟಿ ಅಧಿಕಾರಿಗಳು ಹೊರಟಿದ್ದಾರೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಮೆಟ್ರೋ ಕಾರ್ಪ್ ಕಂಪನಿ ಪಾಲುದಾರರಾಗಿರುವ ಪ್ರಮೋದ್, ಪ್ರದೀಪ್​​ಗೆ ಐಟಿಯಿಂದ ನೋಟಿಸ್​ ನೀಡಲಾಗಿದೆ. ಐಟಿ ದಾಳಿ ಅಂತ್ಯ ಬಳಿಕ ಅಂಬಿಕಾಪತಿ ಪುತ್ರ ಪ್ರದೀಪ್​​ ಪ್ರತಿಕ್ರಿಯೆ ನೀಡಿದ್ದು, 15 ವರ್ಷಗಳಿಂದ ರಿಯಲ್ ಎಸ್ಟೇಟ್ ಹಾಗೂ ಬ್ಯುಸಿನೆಸ್ ಮಾಡುತ್ತಿದ್ದೇವೆ. ಹಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು […]

ಶೀಘ್ರದಲ್ಲೇ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ, ಸಿಎಂ ಭರವಸೆ

ಬೆಂಗಳೂರು ಅ.14: ರಾಜ್ಯ ಸರ್ಕಾರದಿಂದ ಇನ್ನೂ 20 ಸಾವಿರ ಕೋಟಿ ರೂ. ಬಾಕಿ ಬರಬೇಕಿದೆ. ಇಂದಿನಿಂದ ಸರ್ಕಾರಕ್ಕೆ 30 ದಿನ ಗಡವು ನೀಡುವುತ್ತೇವೆ. ಕರೆದು ಮಾತನಾಡಿ ಬಗೆ ಹರಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದು ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿತ್ತು. ರಾಜ್ಯ ಗುತ್ತಿಗೆದಾರರ (Contractors) ಸಂಘದ ಅಧ್ಯಕ್ಷ ಕೆಂಪಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರನ್ನು ಭೇಟಿಯಾಗಿ ಬಾಕಿ ಬಿಲ್​​ ಬಿಲ್​​ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಂಪಣ್ಣ ಅವರು ಬಿಬಿಎಂಪಿ ಕಮಿಷನರ್ ಮತ್ತು ಕೆಲವು […]

ಕರ್ನಾಟಕದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗ

ಬೆಂಗಳೂರು, ಅ.14: ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಅಶ್ವತ್ತಮ್ಮ ಪತಿ ಅಂಬಿಕಾಪತಿ ಹಾಗೂ ಸಹೋದರ ಪ್ರದೀಪ್ ಮನೆ ಮೇಲೆ ನಡೆದ ಐಟಿ ದಾಳಿ  ರಾಜಕೀಯ ತಿರುವು ಪಡೆದುಕೊಂಡಿದ್ದು, ಲೋಕಸಭೆ ಹೊಸ್ತಿಲಲ್ಲಿ ವಿಪಕ್ಷ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದೆ. ಅಲ್ಲದೆ, ಈ ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಡುತ್ತಿದ್ದ ಕಮಿಷನ್ ಆರೋಪವನ್ನು ಮುಂದುವರಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಬಿಲ್​ಗಾಗಿ ರಾಜ್ಯಪಾಲರಿಗೆ ದೂರು ನೀಡಿದ್ದರು. ಆಗ ಬಿಲ್ ಹಣ […]

ಕೊಡಲಿಯಿಂದ ಹಲ್ಲೆಗೈದು ಹೊರಹಾಕಿ ಮನೆಯೊಳಗೆ ಮಲಗಿದ- ಬೆಳಗೆದ್ದು ನೋಡಿದಾಗ ಪತ್ನಿ ಸಾವು

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಮೃತಳನ್ನ ಪದ್ಮಾಕ್ಷಿ (40) ಎಂದು ಗುರುತಿಸಲಾಗಿದೆ. ಕಿರಗುಂದ ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ-ಪದ್ಮಾಕ್ಷಿ ದಂಪತಿ ಮಧ್ಯೆ ಕುಡಿತ ಹಾಗೂ ಪದ್ಮಾಕ್ಷಿಯ ಅನೈತಿಕ ಸಂಬಂಧದ ಬಗ್ಗೆ ಗಲಾಟೆ ನಡೆಯುತ್ತಲೇ ಇತ್ತು. ಕಳೆದ ರಾತ್ರಿ ಕಂಠ ಪೂರ್ತಿ ಕುಡಿದು ಬಂದ ಪತಿ ಚಂದ್ರ ಪತ್ನಿ ಜೊತೆ ಜಗಳವಾಡಿದ್ದಾನೆ ಕುಡಿದ ಮತ್ತಿನಲ್ಲಿ ಅನೈತಿಕ ಸಂಬಂಧವನ್ನ ಶಂಕಿಸಿ […]

ಕೋಟಿ ಕೋಟಿ ಹಣ ಎಣಿಸುತ್ತಾ ಇರೋ ಅಧಿಕಾರಿಗಳು

ಬೆಂಗಳೂರು: ಬಿಬಿಎಂಪಿ ಗುತ್ತಿಗಾರರ ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ಮನೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಇಂದು (ಶನಿವಾರ) ಕೂಡ ಪರಿಶೀಲನೆ ಮುಂದುವರಿಸಿದ್ದಾರೆ. 42 ಕೋಟಿ ಎಣಿಸುತ್ತಾ ಕುಳಿತಿರೋ ಐಟಿ ಅಧಿಕಾರಿಗಳ ಎಕ್ಸ್ ಕ್ಲೂಸೀವ್ ಫೋಟೋ ಇಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಫೋಟೋದಲ್ಲಿ ವಿಚಾರಣೆ ನಡೆಸಿದ ಬಳಿಕ ಐಟಿ ಅಧಿಕಾರಿಗಳು ಹಣ ಎಣಿಸುತ್ತಾ ಕುಳಿತ್ತಿರುವುದನ್ನು ಕಾಣಬಹುದಾಗಿದೆ. ಲಾಕರ್ ಒಡೆದಿದ್ದ ಐಟಿ: ನಿನ್ನೆಯಿಂದ ಅಧಿಕಾರಿಗಳು ಅಂಬಿಕಾಪತಿಯವರ ಮಾನ್ಯತಾ ಟೆಕ್ ಪಾರ್ಕ್ ನಿವಾಸದಲ್ಲಿ ತಲಾಶ್ ನಡೆಸುತ್ತಿದ್ದಾರೆ. ಅಂತೆಯೇ ಮನೆಯಲ್ಲಿಯೇ ಬೀಡು ಬಿಟ್ಟಿರೋ ಮೂವರು ಐಟಿ […]

ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರೊ. ಭಗವಾನ್ ಮನೆಗೆ ಮುತ್ತಿಗೆಗೆ ಯತ್ನ

ಮೈಸೂರು: ನಗರದಲ್ಲಿ ಶುಕ್ರವಾರ (ಅ.13) ನಡೆದ ಮಹಿಷ ಉತ್ಸವದ ವೇಳೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿಂದು ಪ್ರೊ.ಭಗವಾನ್ ನಿವಾಸಕ್ಕೆ ಮೈಸೂರು ಚಾಮರಾಜ ಕ್ಷೇತ್ರದ ಒಕ್ಕಲಿಗರ ಸಂಘದಿಂದ ಮುತ್ತಿಗೆಗೆ ಯತ್ನಿಸಲಾಯಿತು. ಅವಹೇಳನಕಾರಿ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಪ್ರತಿಭಟನಾಕಾರರು ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು. ಬ್ಯಾರಿಕೇಡ್ ಕಿತ್ತು ಭಗವಾನ್ ಮನೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು (Mysuru City Police) ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ಹಾಗೂ ತಳ್ಳಾಟ ನೂಕಾಟವೂ ನಡೆದಿದ್ದು, […]

ಪ್ರಿಯಕರನಿಂದ ವಂಚನೆ, ಕೊಲೆ ಬೆದರಿಕೆ ಆರೋಪ- ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ: ಪ್ರೀತಿಸುವುದಾಗಿ ನಂಬಿಸಿ ಮೋಸ ಮಾಡಿದ್ದಲ್ಲದೇ, ಆತನೊಂದಿಗೆ ಇದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಹೆದರಿಸಿದ್ದರಿಂದ ಮನನೊಂದ ವಿದ್ಯಾರ್ಥಿನಿ ಕಾಲೇಜು ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೆಳ್ಳೊಟ್ಟೆ ಗ್ರಾಮದಲ್ಲಿ ನಡೆದಿದೆ. ಆಶಾ (20) ಮೃತ ಯುವತಿ. ಬೇಲೂರು ಪಟ್ಟಣದ ಕಾಲೇಜುವೊಂದರಲ್ಲಿ ದ್ವಿತೀಯ ಬಿಕಾಂ ಓದುತ್ತಿದ್ದ ಆಶಾಳನ್ನು ಅದೇ ಕಾಲೇಜಿನಲ್ಲಿ ದ್ವಿತೀಯ ಬಿಎ ಓದುತ್ತಿದ್ದ ಆಲೂರು ತಾಲೂಕು ಕಾಟೀಹಳ್ಳಿ ಗ್ರಾಮದ ಮಂಜುನಾಥ ಎಂಬಾತ ಪ್ರೀತಿಸುತ್ತಿದ್ದ. […]

ಪ್ರಿಯಕರನಿಂದ ಕಿರುಕುಳ – ವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ

ಹಾಸನ: ವಿವಾಹಿತೆ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ರಾಜ್‌ಕುಮಾರ್ ನಗರದಲ್ಲಿ ನಡೆದಿದೆ. ರಾಜ್‌ಕುಮಾರ್‌ ನಗರದ ನಿವಾಸಿ ಇರ್ಫಾನ್ ಎಂಬಾತನ ಪತ್ನಿ ಶಬಾನಂ ಸುನಾಂ (32) ಮೃತ ಮಹಿಳೆ.  ಶಬಾನಂ ಸುನಾಂ ಕಳೆದ 15 ದಿನಗಳ ಹಿಂದೆ ಪತಿಯನ್ನು ತೊರೆದು ಇಸ್ಮಾಯಿಲ್ ಎಂಬಾತನೊಂದಿಗೆ ತೆರಳಿ ಪ್ರತ್ಯೇಕ ವಾಸವಿದ್ದಳು. ಆದ್ರೆ ಪತ್ನಿ ಕಾಣೆಯಾಗಿರುವುದಾಗಿ ಪತಿ ಇರ್ಫಾನ್ ನಗರದ ಪೆನ‌್ಷನ್ ಮೊಹಲ್ಲಾ ಪೊಲೀಸ್ ಠಾಣೆಗೆ (Police Station) ದೂರು ನೀಡಿದ್ದಋು. ಈ ಹಿನ್ನೆಲೆಯಲ್ಲಿ ನಾಪತ್ತೆ ಪ್ರಕರಣ […]

ಗುತ್ತಿಗೆದಾರರಿಂದ ಮತ್ತೆ ಬಿಲ್ ಕ್ಲಿಯರ್ ಫೈಟ್! ಸಿಎಂ ಸಿದ್ದು ಸರ್ಕಾರಕ್ಕೆ 30 ದಿನ ‘ಬಾಕಿ’ ಡೆಡ್‌‌ಲೈನ್

ಬೆಂಗಳೂರು: ಒಂದ್ಕಡೆ ಗುತ್ತಿಗೆದಾರನ ಕೋಟಿ ಕೋಟಿ ಖಜಾನೆ ಸಿಕ್ಕಿದ್ದರೆ ಇತ್ತ ಗುತ್ತಿಗೆದಾರರ ಸಂಘ ಬಾಕಿ ಬಿಲ್‌‌ಗಾಗಿ ಸರ್ಕಾರದ ವಿರುದ್ಧ ಮತ್ತೆ ಗುಡುಗಿದೆ. ಸರ್ಕಾರಕ್ಕೆ ಡೆಡ್‌‌ಲೈನ್ ಅನ್ನೂ ಕೊಟ್ಟಿದೆ. ಹೌದು, ಬಿಬಿಎಂಪಿ ಕಂಟ್ರಾಕ್ಟರ್‌ಗಳು ಮತ್ತೊಮ್ಮೆ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಇಡೀ ರಾಜ್ಯದಲ್ಲಿರೋ ಎಲ್ಲ ಕಂಟ್ರಾಕ್ಟರ್‌‌ಗಳ ಬಾಕಿ ಮೊತ್ತವನ್ನ 30 ದಿನೊಳಗೆ ಕ್ಲಿಯರ್ ಮಾಡ್ಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡ್ತೀವಿ ಅಂತ ಎಚ್ಚರಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ ರಾಜ್ಯದ ಗುತ್ತಿಗೆದಾರರಿಗೆ ಸಂಕಷ್ಟ ಎದುರಾಗಿದೆ. ದೊಡ್ಡ ದೊಡ್ಡ ಗುತ್ತಿಗೆಗಳನ್ನು ಪರರಾಜ್ಯದ […]