August 1, 2026

ಇಂಡೋ-ಪಾಕ್‌ ವಿಶ್ವ ಸಮರ: ʻಗೆದ್ದು ಬಾ ಭಾರತʼ 

ಅಹಮದಾಬಾದ್: ಭಾರತ ಈಗ ನವರಾತ್ರಿ ಸಂಭ್ರಮಕ್ಕೆ ಅಣಿಯಾಗುತ್ತಿದೆ. ಬದ್ಧವೈರಿ ಪಾಕಿಸ್ತಾನ ತಂಡವನ್ನು ಟೀಂ ಇಂಡಿಯಾ ಶನಿವಾರ (ಅ.14) ವಿಶ್ವಕಪ್ ಸಮರದಲ್ಲಿ ಹುರಿದು ಮುಕ್ಕಿದರೆ ದೇಶದೆಲ್ಲೆಡೆ ಸಂಭ್ರಮ ಇಮ್ಮಡಿಗೊಳ್ಳಲಿದೆ. ಜೊತೆಗೆ ಅಭಿಮಾನಿಗಳಿಗೆ ನವರಾತ್ರಿಗೆ ಗೆಲುವಿನ ಉಡುಗೊರೆಯೂ ಸಿಗಲಿದೆ. ಈ ಪಂದ್ಯಕ್ಕಾಗಿ ಕೇವಲ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲ, ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದೆ. 1.32 ಲಕ್ಷ ಆಸನಗಳ ಸಾಮರ್ಥ್ಯ ಹೊಂದಿರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣದಲ್ಲಿ ಬದ್ಧ ವೈರಿಯನ್ನು ಬಗ್ಗು ಬಡಿದು ಭಾರತ ಸಂಭ್ರಮಿಸಲಿ ಅನ್ನೋದು 140 ಕೋಟಿ ಭಾರತೀಯರ ಪ್ರಾರ್ಥನೆ. […]

ಬೆಳ್ಳಂಬೆಳಗ್ಗೆ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ: ಬೆಳ್ಳಂಬೆಳಗ್ಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ನಡೆದಿದೆ. ಹಿಂಬದಿಯಿಂದ ಓಮ್ನಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಓಮ್ನಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಓಮ್ನಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಗುದ್ದಿದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ […]

ವಿಭಜಿತ ಜಗತ್ತಿನಿಂದ ಭಯೋತ್ಪಾದನೆ ವಿರುದ್ಧ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ: ಮೋದಿ

ನವದೆಹಲಿ: ಭಯೋತ್ಪಾದನೆ ವಿಚಾರದಲ್ಲಿ ಜಗತ್ತು ಒಮ್ಮತವನ್ನು ಸಾಧಿಸದಿರುವುದು ದುಃಖಕರವಾಗಿದೆ. ಶತ್ರುಗಳು ಇದರ ಲಾಭವನ್ನು ಪಡೆಯುತ್ತಿದ್ದಾರೆ. ಭಯೋತ್ಪಾದನೆಯನ್ನು ಎದುರಿಸಲು ನಾವು ಹೇಗೆ ಒಟ್ಟಾಗಿ ಕೆಲಸ ಮಾಡಬೇಕು ಎಂಬುದರ ಕುರಿತು ವಿಶ್ವದಾದ್ಯಂತ ಎಲ್ಲ ದೇಶದ ಸರ್ಕಾರಗಳು ಯೋಚಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ P-20 ಸಭೆಯಲ್ಲಿ ಇಸ್ರೇಲ್- ಪ್ಯಾಲೇಸ್ಟೈನ್ ಯುದ್ಧದ ಬಗ್ಗೆ ಮಾತನಾಡಿದ ಅವರು, ಭಾರತವು ದಶಕಗಳಿಂದ ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುತ್ತಿದೆ, ಭಯೋತ್ಪಾದಕರು ಸಾವಿರಾರು ಅಮಾಯಕರನ್ನು ಕೊಂದಿದ್ದಾರೆ. ಭಯೋತ್ಪಾದನೆ ದೊಡ್ಡ ಸವಾಲಾಗಿದೆ, ಅದು ಮಾನವೀಯತೆಯ ವಿರುದ್ಧವಾಗಿದೆ ಎಂದರು.  […]

ಬಿಜೆಪಿ ಅಧಿಕಾರ ಇರುವ ರಾಜ್ಯಗಳಲ್ಲಿ ಐಟಿ ದಾಳಿಯಾಗಲ್ಲ

ಬೆಂಗಳೂರು: ಬಿಜೆಪಿ ಅಧಿಕಾರ ಇರುವ ರಾಜ್ಯಗಳಲ್ಲಿ ಐಟಿ ದಾಳಿ ಆಗಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಐಟಿ ದಾಳಿ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಇಲ್ಲದೆ ಐಟಿ ದಾಳಿ ಇರಲ್ಲ. ರಾಜಕೀಯ ಲಿಂಕ್ ಇರುತ್ತೆ. ಛತ್ತೀಸಗಢ್ ದಲ್ಲೂ ದಾಳಿ ಆಗಿದೆ ಎಂದರು. ಐಟಿ ದಾಳಿಯಲ್ಲಿ ಸಿಕ್ಕ ಹಣ ಪಂಚ ರಾಜ್ಯಗಳ ಫಂಡಿಂಗ್‍ಗೆ ಸಂಗ್ರಹ ಎಂಬ ಬಿಜೆಪಿ ಆರೋಪ ವಿಚಾರ ಪ್ರತಿಕ್ರಿಯಿಸಿ, ಅವರಿಗೆಲ್ಲ ರಿಯಾಕ್ಟ್ ಮಾಡಲ್ಲ. ಹಾದಿ ಬೀದಿಯಲ್ಲಿ ಮಾತಾಡೋರಿಗೆಲ್ಲ ರಿಯಾಕ್ಟ್ ಮಾಡೋದಕ್ಕೆ ಆಗಲ್ಲ. ಬೆಂಗಳೂರಿನ […]

ʻರೈತರ ಆತ್ಮಹತ್ಯೆʼ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ

ಧಾರವಾಡ: ಈ ಹಿಂದಿನ ಸರ್ಕಾರಗಳೆಲ್ಲ ರಾಜ್ಯದ ರೈತರಿಗೆ ಅನೇಕ ಯೋಜನೆಗಳ ಕೊಡುಗೆ ನೀಡಿದ್ದವು. ಆದ್ರೆ ಹಿಂದಿನ ಸರ್ಕಾರಗಳ ಆದ್ಯತೆಗಳನ್ನು ಕಾಂಗ್ರೆಸ್ ಸರ್ಕಾರ ಬಂದ್ ಮಾಡಿದ್ದು, ಆತ್ಮಹತ್ಯೆಯೊಂದೇ ದಾರಿಯಾಗಿದೆ. ಬಹಳಷ್ಟು ಸರ್ಕಾರಗಳು ರೈತರ ಆತ್ಮಹತ್ಯೆ ತಡೆಯಲು ಪ್ರಯತ್ನ ಮಾಡಿವೆ. ಆದ್ರೆ ಕಾಂಗ್ರೆಸ್ ಬಂದಮೇಲೆ ಮತ್ತೆ ರೈತ ಆತ್ಮಹತ್ಯೆ ಶುರುವಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಹಾಲಿ ಶಾಸಕ ಜಿ.ಟಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೇಂದ್ರ […]

ರಾಜ್ಯದಲ್ಲಿ ವಿದ್ಯುತ್ ಅಭಾವಕ್ಕೆ ಬಿಜೆಪಿ ಕಾರಣ

ನವದೆಹಲಿ: ರಾಜ್ಯದಲ್ಲಿ ಸೃಷ್ಠಿಯಾಗಿರುವ ವಿದ್ಯುತ್ ಅಭಾವಕ್ಕೆ ಬಿಜೆಪಿ ಕಾರಣ, ತಮ್ಮ ನಾಲ್ಕು ವರ್ಷದ ಅವಧಿಯಲ್ಲಿ ವಿದ್ಯುತ್ ಸಂಗ್ರಹಕ್ಕೆ ಯಾವುದೇ ಪ್ರಯತ್ನ ಮಾಡದೇ ನಿದ್ದೆ ಮಾಡಿ ಈಗ ನಮ್ಮ ಮೇಲೆ ಆರೋಪ ಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಅಭಾವದಿಂದ ವಿದ್ಯುತ್ ಕೊರತೆಯಾಗಿದೆ, ಗಾಳಿಯೂ ಸರಿಯಾಗಿ ಬೀಸದೆ ವಿಂಡ್ ಎನರ್ಜಿ ಕೂಡಾ ಕಡಿಮೆಯಾಗಿದೆ. 16000 ಮೇಗಾ ವ್ಯಾಟ್‍ಗೆ ಬೇಡಿಕೆ ಇದೆ ಸದ್ಯ ರಾಜ್ಯದಲ್ಲಿ 1500 ಮೇಗಾ ವ್ಯಾಟ್ […]

42 ಕೋಟಿ ಹಣ ಸಿಕ್ಕಿದ್ದು ಅಂಬಿಕಾಪತಿ ಮಗಳ ನಿವಾಸದಲ್ಲಿ!

ಬೆಂಗಳೂರು: ಸಿಲಿಕಾನ್ ಸಿಟಿಯ ಇತಿಹಾಸದಲ್ಲಿಯೇ ಅತೀ ದೊಡ್ಡ ಐಟಿ ದಾಳಿಯಾಗಿದ್ದು, ಅಧಿಕಾರಿಗಳಿಗೆ ಬರೋಬ್ಬರಿ 42 ಕೋಟಿ ರೂ. ಸಿಕ್ಕಿದೆ. ಈ ಹಣ ಸಿಕ್ಕಿದ್ದು ಬಿಬಿಎಂಪಿ ಗುತ್ತಿಗಾರರ ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ಮಗಳ ನಿವಾಸದಲ್ಲಿ. ಹೌದು. ಅಂಬಿಕಾಪತಿಗೆ ಇಬ್ಬರು ಹೆಣ್ಮಕ್ಕಳಿದ್ದಾರೆ. ಇದೀಗ ಓರ್ವ ಮಗಳು ದಿವ್ಯಾ ಮನೆಯಲ್ಲಿ ಐಟಿ ಅಧಿಕಾರಿಗಳಿಗೆ ಕಂತೆ ಕಂತೆ ಹಣ ಸಿಕ್ಕಿದೆ ಎಂಬ ಮಾಹಿತಿ ಲಭಿಸಿದೆ. ಮಾನ್ಯತಾ ಟೆಕ್ ಪಾರ್ಕ್‍ನಲ್ಲಿರುವ ಮನೆ ಮೇಲೆ ಗುರುವಾರ ಮಧ್ಯರಾತ್ರಿಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ವರು ಐಟಿ […]

ಸಿಎಂ ಇಬ್ರಾಹಿಂ ಎಲ್ಲೂ ಹೋಗಲ್ಲ, ಜೆಡಿಎಸ್‌ನಲ್ಲೇ ಇರ್ತಾರೆ

ವಿಜಯಪುರ: ಸಿಎಂ ಇಬ್ರಾಹಿಂ ಜೆಡಿಎಸ್ ಬಿಡೋದಿಲ್ಲ. ಬಿಜೆಪಿ ಜೊತೆಗೆ ಹೋಗಲು ಇಬ್ರಾಹಿಂ ವಿರೋಧವಿಲ್ಲ. ಅವರೇ ಮುಂದೆ ನಿಂತು ನನ್ನ ಅಧ್ಯಕ್ಷ ಸ್ಥಾನ ಘೋಷಣೆ ಮಾಡಿದ್ದಾರೆ, ನೀವೆ ನೋಡಿದ್ದೀರಿ ಎಂದು ವಿಜಯಪುರದಲ್ಲಿ ಜೆಡಿಎಸ್ ಹಿರಿಯ ನಾಯಕ ಜಿ. ಟಿ ದೇವೆಗೌಡ ಹೇಳಿಕೆ ನೀಡಿದ್ದಾರೆ. ಸಿ.ಎಂ ಇಬ್ರಾಹಿಂ ಜೆಡಿಎಸ್ ಪಕ್ಷದಿಂದ ಒಂದು ಕಾಲು ಹೊರಗಿಟ್ಟ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ ಇಬ್ರಾಹಿಂ ಅವರದ್ದು ಈಗ ಏನು ಚರ್ಚೆ ಇಲ್ಲ. ಮುಂದೆ ಒಟ್ಟಾಗಿ ಹೇಗೆ ಹೋಗಬೇಕು ಅನ್ನೋದು ಇಬ್ರಾಹಿಂ […]

ಯುವಕ ನಾಪತ್ತೆ ಪ್ರಕರಣ – ರಾತ್ರಿಯಿಡೀ ಹುಡುಕಿದ ಸ್ನೇಹಿತರು; ಮನೆಯಲ್ಲಿ ಆರಾಮವಾಗಿ ಮಲಗಿದ್ದ ದೀಕ್ಷಿತ್!

ಚಿಕ್ಕಮಗಳೂರು: ದೇವರಮನೆಗೆ ಪ್ರವಾಸಕ್ಕೆ ಹೋಗಿದ್ದ ಯುವಕ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆ ಎಂದುಕೊಂಡು ಯುವಕನ ಸ್ನೇಹಿತರು ಇಡೀ ರಾತ್ರಿ ಪೊಲೀಸರೊಂದಿಗೆ ಸೇರಿ ಹುಡುಕುತ್ತಿದ್ದರೆ ಆತ ಮಾತ್ರ ಆರಾಮವಾಗಿ ಮನೆಗೆ ಹೋಗಿ ಮಲಗಿದ್ದ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದೀಕ್ಷಿತ್ (27) ನಾಲ್ವರು ಸ್ನೇಹಿತರ ಜೊತೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡಕ್ಕೆ ಆಗಮಿಸಿದ್ದರು. ಈ ವೇಳೆ ಸ್ನೇಹಿತರ ಜೊತೆ ಜಗಳ ಮಾಡಿಕೊಂಡು ಹೋದ ದೀಕ್ಷಿತ್ ಗುಡ್ಡದ ಬಳಿ ನಾಪತ್ತೆಯಾಗಿದ್ದ. ನಾಲ್ವರು ಯುವಕರು […]

ಉಡುಪಿಯಲ್ಲಿ ಮಹಿಷಾ ದಸರಾ ಯಾಕೆ?: ಶೋಭಾ ಕರಂದ್ಲಾಜೆ

ಉಡುಪಿ: ದಸರಾದಲ್ಲಿ ದೇವಿಯರನ್ನು ನಾವು ಆರಾಧನೆ ಮಾಡುತ್ತೇವೆ. ಮಹಿಷಾ ದಸರಾ ಮೂಲಕ ನಮ್ಮ ನಂಬಿಕೆಯನ್ನು ಪ್ರಶ್ನೆ ಮಾಡುವ ಶಕ್ತಿಗಳು ಹುಟ್ಟಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ನಮ್ಮ ನಂಬಿಕೆ ನಮ್ಮದು ದೇಶದಲ್ಲಿ ಎಲ್ಲರಿಗೂ ಅವಕಾಶ ಇದೆ. ಆಸ್ತಿಕರಿಗೂ ನಾಸ್ತಿಕರಿಗೂ ನಮ್ಮ ದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಬಹುದು. ವಿಕೃತವಾದ ಮಹಿಷಾ ದಸರಾದಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗಯತ್ತದೆ ಎಂದರು. ಯಾವ ಆಧಾರದಲ್ಲಿ ಮಹಿಷಾ ದಸರಾ ಆಚರಣೆ ಮಾಡುತ್ತೀರಿ ಗೊತ್ತಿಲ್ಲ, ಇದರ ಹಿಂದೆ ಇರುವ ಶಕ್ತಿ […]