August 1, 2026

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಸಿದ್ದರಾಮಯ್ಯ ಮುಖಾಮುಖಿ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಭಾನುವಾರ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು. CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು. ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ […]

2024ಕ್ಕೆ ರಾಜ್ಯದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ

ರಾಮನಗರ: ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಬೀಳುತ್ತದೆ. 2024ಕ್ಕೆ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಬಿಡದಿಯ ತಮ್ಮ ತೋಟದ ಮನೆಯಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕವಾಗಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡುರಸ್ತೆಯಲ್ಲಿ ಕೈ […]

ಎಸ್.ಟಿ ಸೋಮಶೇಖರ್ ಪಕ್ಷ ಬಿಡುವುದಾದರೆ ವಿರೋಧವಿಲ್ಲ

ರಾಮನಗರ: ಎಸ್‌.ಟಿ ಸೋಮಶೇಖರ್‌ ಅವರು ಬಿಜೆಪಿಯಿಂದ ಹೊರಹೋಗುವ ತೀರ್ಮಾನ ಮಾಡಿದ್ದರೇ ನಮ್ಮ ವಿರೋಧವಿಲ್ಲ, ಸ್ವಾಗತಿಸುತ್ತೇವೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ಮಾಜಿ ಸಚಿವ ಎಸ್.ಟಿ ಸೋಮಶೇಖರ್ ವಿರೋಧ ವ್ಯಕ್ತಪಡಿಸಿದ ವಿಚಾರ ಕುರಿತು ಚನ್ನಪಟ್ಟಣದಲ್ಲಿ ಯೋಗೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.  ಎಸ್.ಟಿ ಸೋಮಶೇಖರ್ ಬಿಜೆಪಿಯಲ್ಲಿ ದೊಡ್ಡ ಫಲಾನುಭವಿ. ಬಿಜೆಪಿಗೆ ಬಂದಮೇಲೆ ಮಂತ್ರಿಯಾಗಿ ಪ್ರಬಲ ಖಾತೆ ಪಡೆದರು, ಅಧಿಕಾರ ಅನುಭವಿಸಿದರು. ಇವತ್ತು ಅಧಿಕಾರವಿಲ್ಲವೆಂದು ಹೀಗೆ ಮಾತನಾಡುತ್ತಾರೆ. ಡಿಕೆಶಿ ಜೊತೆಗಿನ ಸಂಬಂಧ ಇಟ್ಕೊಂಡು ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ. […]

ನಾಳೆಯಿಂದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ನಾಳೆಯಿಂದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಗಳೂರಿನ ಬಿಜೆಪಿ ಸಂಸದರು ಸ್ವಾಗತ ಕೋರಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿ ಪ್ರಧಾನಿ ಮೋದಿಯವರಿಗೆ ಸಂಸದರು ಧನ್ಯವಾದ ತಿಳಿಸಿದ್ದಾರೆ. ನಾಳೆ ಚಲ್ಲಘಟ್ಟ-ಕೆಂಗೇರಿ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿದೆ.  ಈ ಕುರಿತು ಸಂಸದರಾದ ಡಿವಿ ಸದಾನಂದ ಗೌಡ, ಪಿಸಿ ಮೋಹನ್, ತೇಜಸ್ವಿ ಸೂರ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಜನತೆ […]

ಹತ್ತಿ ಬೆಳೆಗೆ ಕೀಟನಾಶಕ ಸಿಂಪಡಿಸಿದ ನಂತರ ನಾಲ್ವರು ರೈತರು ತೀವ್ರ ಅಸ್ವಸ್ಥ

ಕಲಬುರಗಿ: ಹತ್ತಿ ಬೆಳೆಗೆ ಕೀಟನಾಶಕ ಸಿಂಪಡಿಸಿದ ನಂತರ ನಾಲ್ವರು ರೈತರು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಸುನಿಲ್ (34), ಅನಿಲ್ (22), ಕುಮಾರ್ (30) ಹಾಗೂ ಖೇಮು ರಾಠೋಡ್ ಅಸ್ವಸ್ಥಗೊಂಡ ರೈತರಾಗಿದ್ದು, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಾಲ್ವರು ರೈತರು ಹತ್ತಿ ಬೆಳೆಗೆ ತಗುಲಿದ ರೋಗ ನಿಯಂತ್ರಣಕ್ಕಾಗಿ ಕೀಟ ನಾಶಕ ಸಿಂಪಡಿಸಿದ್ದರು. ನಂತರ ಮನೆಗೆ ಬಂದ ತಕ್ಷಣವೇ ತಲೆಸುತ್ತು, ಹಾಗೂ ವಾಂತಿ-ಭೇದಿ ಆರಂಭವಾಗಿದೆ.  ತಕ್ಷಣ ಕುಟುಂಬಸ್ಥರು […]

ಕುಡಿದು ಹಾಳಾಗಿ ಹೋಗಿ ಅನ್ನೋದು ಕಾಂಗ್ರೆಸ್‌ನ 6ನೇ ಗ್ಯಾರಂಟಿ

ಬೆಂಗಳೂರು: ಕುಡಿದು ಹಾಳಾಗಿ ಹೋಗಿ ಅನ್ನೋದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದು ಮಾಜಿ ಸಚಿವ ಸಿ.ಟಿ.ರವಿ ಹರಿಹಾಯ್ದರು. ಹಳ್ಳಿ ಹಳ್ಳಿಗೂ ಮದ್ಯದ ಲೈಸೆನ್ಸ್ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಂಡತಿಗೆ ಕೊಟ್ಟ ಎರಡು ಸಾವಿರ ವಾಪಸ್ ಪಡೆಯಲು ಊರೂರಿಗೆ ಮದ್ಯದಂಗಡಿ ಕೊಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು.  ಮದ್ಯದ ವಿಚಾರದಲ್ಲಿ ನೀ ಅತ್ತಂಗೆ ಮಾಡು ನಾನು ಸತ್ತಂಗೆ ಮಾಡ್ತೀನಿ ಅನ್ನೋ ನಿಲುವು. ಹಳ್ಳಿಗಳಿಗೆ ಈಗಾಗಲೇ ಅನಧಿಕೃತವಾಗಿ ಮದ್ಯ ಪೂರೈಕೆ ಆಗ್ತಿದೆ. ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲೂ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ. […]

ಅರಣ್ಯ ಇಲಾಖೆ ಕಚೇರಿಯಲ್ಲಿದ್ದ 8 ಲಕ್ಷ ರೂ.ಮೌಲ್ಯದ ಶ್ರೀಗಂಧ ಕಟ್ಟಿಗೆ ಕಳ್ಳತನ!

ಯಾದಗಿರಿ: ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕಾಡನ್ನು ಕಾಯೋದು ಬಿಡಿ, ತಮ್ಮ ಕಚೇರಿಯನ್ನೇ ಕಾಯದ ಪರಿಸ್ಥಿತಿ ಯಾದಗಿರಿಯಲ್ಲಿ ಕಂಡುಬಂದಿದೆ. ಹೌದು. ಯಾದಗಿರಿಯ ಅರಣ್ಯ ಇಲಾಖೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧದ ಕಟ್ಟಿಗೆಗಳು ಕಳ್ಳತನವಾಗಿವೆ. ಅರಣ್ಯ ಪ್ರದೇಶದಲ್ಲಿ ಖದೀಮರು ಕಳ್ಳತನ ಮಾಡಿದ್ದ ಶ್ರೀಗಂಧದ ಕಟ್ಟಿಗೆಗಳನ್ನು ಜಪ್ತಿ ಮಾಡಿ ಕಚೇರಿಯಲ್ಲಿ ಶೇಖರಿಸಲಾಗಿತ್ತು. ಅದೇ ಕಚೇರಿಯಿಂದಲೇ ಶ್ರೀಗಂಧ ಕಟ್ಟಿಗೆ ಕಳ್ಳತನವಾಗಿರೋದು ಇದೀಗ ಭಾರೀ ಅನುಮಾನ ಉಂಟು ಮಾಡಿದೆ. ಕಳೆದ ನಾಲ್ಕು ದಿನದ ಹಿಂದೆ ಯಾದಗಿರಿ ಜಿಲ್ಲಾ ಕೆಂದ್ರದ ಅರಣ್ಯ ಇಲಾಖೆಯ […]

ಹಸುಗಳ ಮೇಲೆ ಸಂಭೋಗ ಮಾಡಿದ ವಿಕೃತಕಾಮಿ!

ಚಿಕ್ಕಬಳ್ಳಾಪುರ: ಹಸುಗಳ ಮೇಲೆ ಸಂಭೋಗ ಮಾಡಿದ ವಿಕೃತ ಕಾಮಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಾರ್ಡ್ ನಂಬರ್ 08 ರಲ್ಲಿ ಈ ಘಟನೆ ನಡೆದಿದೆ. ವಿಕೃತಕಾಮಿಯನ್ನು ರಾಹುಲ್ ಎಂದು ಗುರುತಿಸಲಾಗಿದ್ದು, ಈತ ಕೋಲ್ಕತ್ತಾ ಮೂಲದವನು ಎನ್ನಲಾಗಿದೆ. ಆರೋಪಿ ರಾಹುಲ್, ಕಳೆದ ಒಂದು ವಾರದಿಂದ ನಿರಂತರವಾಗಿ ಎರಡು ಹಸುಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಸುರೇಶ್ ಎಂಬವರ ಹಸುಗಳ ಮೇಲೆ ಅತ್ಯಾಚಾರ ನಡೆಸಿದ್ದು, ಅನುಮಾನಗೊಂಡ ಮಾಲೀಕರು ತಡರಾತ್ರಿ ಆರೋಪಿಗಾಗಿ ಕಾದು ಕುಳಿತು ಆರೋಪಿಯನ್ನು ಪತ್ತೆಹಚ್ಚಿದ್ದಾರೆ.  ವಿಕೃತ ಕಾಮಿ ರಾಹುಲ್‍ನ ಕೃತ್ಯ […]

ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ

ಶಿವಮೊಗ್ಗ: ಡೆಂಗ್ಯೂ ಜ್ವರಕ್ಕೆ ನವವಿವಾಹಿತೆಯೊಬ್ಬರು ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ ತಾಲೂಕಿನ ರಿಪ್ಪನ್ ಪೇಟೆಯ ಶಬರೀಶನಗರದಲ್ಲಿ ಘಟನೆ ನಡೆದಿದ್ದು, ಮಧುರ (31) ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಈಕೆ ಕಳೆದ ಆರು ತಿಂಗಳ ಹಿಂದೆ ಮಂಜುನಾಥ್ ಎಂಬವರೊಂದಿಗೆ ವಿವಾಹವಾಗಿದ್ದರು. ಕಳೆದ ಒಂದು ವಾರದಿಂದ ಮಧುರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು.  ಅನಾರೋಗ್ಯ ಹಿನ್ನೆಲೆ ಮಧುರ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗಕ್ಕೆ ಕರೆ ತರುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. 

ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್

ಆನೇಕಲ್ (ಬೆಂಗಳೂರು): ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗೋದಾಮು ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟಾಕಿ ಸಂಗ್ರಹಕ್ಕೆ ಲೈಸೆನ್ಸ್ ಇರಲಿಲ್ಲ. ಕೇವಲ ಬೇರೆಡೆಗೆ ರವಾನಿಸುವ ಪ್ರೊಸೆಸಿಂಗ್ ಯೂನಿಟ್‍ಗೆ ಮಾತ್ರ ಪರವಾನಿಗೆ ನೀಡಲಾಗಿತ್ತು. ಆದರೆ ಮಾಲೀಕ ಭಾರೀ ಪ್ರಮಾಣದ ಪಟಾಕಿ ಸಂಗ್ರಹಿಸುವ ದಾಸ್ತಾನು ಮಳಿಗೆಯನ್ನಾಗಿ ಬಳಕೆ ಮಾಡ್ತಿದ್ದ. ಪ್ರೊಸೆಸಿಂಗ್ ಯೂನಿಟ್‍ಗೆ 2028ವರೆಗೆ ಪರವಾನಿಗೆ ಇದ್ದು, ಗೋದಾಮಿಗೆ ಅನುಮತಿ ಇರಲಿಲ್ಲ. ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಪಟಾಕಿಯನ್ನು ಸಂಗ್ರಹಿಸಿದ್ದ ಕುರಿತು ಗೋದಾಮಿನ ಮಾಲೀಕರ ವಿರುದ್ಧ ಪ್ರತ್ಯೇಕವಾಗಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. […]