ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ
ಬೆಂಗಳೂರು: ಒಂದೂವರೆ ತಿಂಗಳಲ್ಲಿ ಎರಡನೇ ಪಟಾಕಿ ದುರಂತ ನಡೆದಿದೆ. ಹೀಗಾಗಿ ಹಾವೇರಿ ಮತ್ತು ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ತಿಬೆಲೆ ಪಟಾಕಿ ದುರಂತ ಬಹಳ ದೊಡ್ಡ ಘೋರ. 14 ಜನ ಮೃತಪಟ್ಟಿದ್ದಾರೆ, ಇದು ಆಘಾತಕಾರಿ ವಿಚಾರವಾಗಿದೆ. ಸರ್ಕಾರ ಘೋಷಣೆ ಮಾಡಿರುವ ಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು. ಗಾಯಾಳುಗಳಿಗೆ ಸರ್ಕಾರ […]












































































































































































































































































































































































































































































































































































































































































































































































































































































































































































































































































































































