August 1, 2026

ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರು ಬಂದ್‌ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಇತರೆ ಕೆಲವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆಗೂ ಮುನ್ನವೇ ಶಾಂತಕುಮಾರ್ ಹಾಗೂ ಇತರರನ್ನು ಖಾಕಿ ಪಡೆ ವಶಕ್ಕೆ ಪಡೆದಿದ್ದಾರೆ.  ಈ […]

ಕುಮಾರಸ್ವಾಮಿ ಒಬ್ಬರೇ ದೇವತಾ ಮನುಷ್ಯ

ಕೋಲಾರ: ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರೊಬ್ಬರೇ ದೇವತಾ ಮನುಷ್ಯ ಇನ್ನೆಲ್ಲರೂ ಪಾಪಿಗಳು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವ್ಯಂಗ್ಯವಾಡಿದ್ದಾರೆ. ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಮನೆಗೂ ಮದ್ಯಭಾಗ್ಯ ಕೊಟ್ಟು ಸರ್ಕಾರ ದುಡ್ಡು ಮಾಡಲು ಮುಂದಾಗಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.  ಅಲ್ಲದೇ ಕಾವೇರಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿ ನೀರು ಬಿಡುವುದನ್ನ ನಿಲ್ಲಿಸಬಹುದು ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಸಂವಿಧಾನ ಬರೆದಿರುವುದು ಅಂಬೇಡ್ಕರ್ ಅವರೇ ಹೊರತು ಕುಮಾರಸ್ವಾಮಿ ಅಲ್ಲ. ಸಂವಿಧಾನದ ನಿಯಮಗಳು ಏನು […]

ಶಾಸಕ ನಾರಾಯಣಸ್ವಾಮಿ, ಸಂಸದ ಮುನಿಸ್ವಾಮಿ ನಡುವೆ ಜಟಾಪಟಿ

ಕೋಲಾರ: ಅದು ಜಿಲ್ಲಾಡಳಿತದಿಂದ ಆಯೋಜನೆ ಮಾಡಲಾಗಿದ್ದ, ಉಸ್ತುವಾರಿ ಸಚಿವ ಬೈರತಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಜನತಾ ದರ್ಶನ ಕಾರ್ಯಕ್ರಮ. ಆದರೆ ಅಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ನಡುವೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಟಾಪಟಿ ಕೆಲಕಾಲ ಅಲ್ಲೋಕ ಕಲ್ಲೋಲ ಸೃಷ್ಟಿ ಮಾಡಿದೆ. ಜನತಾ ದರ್ಶನ ವೇದಿಕೆ ಮೇಲೆ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ನಡುವೆ ಜಟಾಪಟಿ ನಡೆದಿದೆ. ಸಂಸದ ಮುನಿಸ್ವಾಮಿಯನ್ನು ಹಿಡಿದು ವೇದಿಕೆಯಿಂದ ಕರೆದೊಯ್ಯುತ್ತಿರುವ ಎಸ್‌ಪಿ ನಾರಾಯಣ್, ಇನ್ನೊಂದೆಡೆ ವೇದಿಕೆ ಎದುರು ಕುಳಿತಿರುವ […]

ಕೇಂದ್ರವೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿ

ಬೆಂಗಳೂರು : ಕಾವೇರಿ ವಿಚಾರವಾಗಿ ಕನ್ನಡ ನಾಡಿಗೆ 60 ವರ್ಷಗಳಿಂದ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರವು 5 ಜನರ ಸಮಿತಿ ರಚಿಸಿ ಕಾವೇರಿಯ ಕೆಆರ್‌ಎಸ್‌ ಆಣೆಕಟ್ಟೆ ಪರಿಶೀಲನೆ ಮಾಡಿಸಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಕನ್ನಡ ನಾಡಿಗೆ ನ್ಯಾಯ ಕೊಡಿಸುವಂತೆ ರಾಜ್ಯಸಭೆ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದರು.  ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗೊ ನಾನು ಪ್ರಧಾನ ಮಂತ್ರಿ ಗಳಿಗೆ ಪತ್ರ ಬರೆದಿದ್ದೇನೆ. ಇದರ ವಿವರಗಳನ್ನು ನಿಮ್ಮ ಮುಂದೆ ಚಿಕೊಳ್ಳಲಿದ್ದೇನೆ. ನಾನು […]

ಐಪಿಎಸ್ ಅಮೃತ್ ಪಾಲ್​ಗೆ ಜಾಮೀನು

ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿ​ಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ ಎಂದು ಷರತ್ತು ವಿಧಿಸಿದೆ. ನೇಮಕಾತಿ ಪ್ರಕರಣ ಸಂಬಂಧ ಕಿರಿಯ ತನಿಖಾಧಿಕಾರಿಗಳು ಅಮೃತ್ ಪಾಲ್ ಅವ​ರನ್ನು ತನಿಖೆ ನಡೆಸುತ್ತಿದ್ದಾರೆ. ಇವರಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸುವಂತೆ ಎಸ್​ಪಿಪಿ ಪ್ರಸನ್ನ ಕುಮಾರ್​ ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದರು. […]

ಕಾಂಗ್ರೆಸ್​ನವರಿಗೆ ಕರ್ನಾಟಕದ ಬಗ್ಗೆ ಚಿಂತೆಯಿಲ್ಲ

ವಿಜಯಪುರ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲು ತಯಾರಿಲ್ಲ. ಕಾವೇರಿ ನೀರನ್ನು ಅವ್ಯಾಹತವಾಗಿ ಬಿಡುತ್ತಿದ್ದಾರೆ. ಅವರಿಗೆ ಕರ್ನಾಟಕದ ಬಗ್ಗೆ ಚಿಂತನೆಯೇ ಇಲ್ಲ. ಅವರು ಕೇವಲ ಒಬ್ಬ ಜೋಕರ್​​​ನನ್ನು ಪ್ರಧಾನಮಂತ್ರಿ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಜೋಕರ್​​ಗೆ ಹೋಲಿಸಿದ್ದಾರೆ. ರಾಹುಲ್‌ ಗಾಂಧಿ […]

ಗ್ರಾಮಗಳಲ್ಲಿ ಹೊಸ ಮದ್ಯದಂಗಡಿ ತೆರೆಯುವ ವಿಚಾರ ಚರ್ಚಾ ಹಂತದಲ್ಲಿದೆ

ಬಾಗಲಕೋಟೆ ಸೆ.25: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಹಾಗೇ ಸಾರ್ವಜನಿಕ ವಲಯದಿಂದಲೂ ವಿರೋಧಗಳು ವ್ಯಕ್ತವಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯಾಗುತ್ತಿದೆ. ಈ ಬಗ್ಗೆ ಸ್ವತಃ ಅಬಕಾರಿ ಇಲಾಖೆ ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲಿ ಪಾಕೇಟ್​​​ನಲ್ಲಿಟ್ಟು ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಗ್ರಾಹಕರಿಗೆ ಹೊರೆ ಆಗುತ್ತಿದೆ. ಇದನ್ನು ತಪ್ಪಿಸುವುದು ಹೇಗೆ ಎಂಬುವುದರ ಬಗ್ಗೆ ವಿಚಾರ ಮಾಡುತ್ತಿದ್ದಾಗ, ಆ ಏರಿಯಾದಲ್ಲಿ ಮದ್ಯದ ಅಂಗಡಿ ತರೆಯಲು ಅನುಮತಿ […]

ಬೆಂಗಳೂರಿನಲ್ಲಿ ನಾಳೆ ಚಿತ್ರೋದ್ಯಮ ಬಂದ್

ಕಾವೇರಿ ನದಿ ನೀರು ವಿಚಾರವಾಗಿ ಹೋರಾಟ ಮಾಡುತ್ತಿರುವ ರೈತರ ಪರ ನಿಲ್ಲಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ. ನಾಳೆ ನಡೆಯುತ್ತಿರುವ ಬೆಂಗಳೂರು ಬಂದ್ ಗೆ ಬೆಂಬಲವನ್ನೂ ನೀಡಿರುವ ವಾಣಿಜ್ಯ ಮಂಡಳಿಯು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೂ ಚಿತ್ರಮಂದಿರಗಳು ತೆರೆಯುವುದಿಲ್ಲ. ಬೆಂಗಳೂರಿನಲ್ಲಿ ಯಾವುದೇ ಸಿನಿಮಾ ಚಿತ್ರೀಕರಣ ಕೂಡ ಇರುವುದಿಲ್ಲ ಎಂದಿದ್ದಾರೆ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಮ್. ಸುರೇಶ್. ಕಾವೇರಿ ವಿಚಾರ  ಗಂಭೀರವಾದ ವಿಚಾರ. ಇದಕ್ಕಾಗಿ ನಮ್ಮ ಸಂಪೂರ್ಣ ಬೆಂಬಲ ಇರುತ್ತೆ. ಚಿತ್ರರಂಗದ ಎಲ್ಲಾ ಅಂಗ […]

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ತಯಾರಿ ನಡೆಸಿದ್ದು, ಇದೀಗ ವಾರ್ಡ್ ಪುನರ್ ವಿಂಗಡಣೆಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕ ಆಕ್ಷೇಪಣೆ ಬಳಿಕ 225 ವಾರ್ಡಗಳನ್ನು ಅಧಿಕೃತಗೊಳಿಸಿ ಇಂದು (ಸೆಪ್ಟೆಂಬರ್ 25) ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದ  243 ವಾರ್ಡ್​ಗಳನ್ನು ಕಾಂಗ್ರೆಸ್ ಸರ್ಕಾರ ಇದೀಗ 225ಕ್ಕೆ ಇಳಿಸಿದೆ. ಇದರೊಂದಿಗೆ  224 ವಾರ್ಡ್​ಗಳಿಗೆ ಚುನಾವಣೆ ನಡೆಯಲಿದೆ. ವಾರ್ಡ್​ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಸಿ ಸರ್ಕಾರ ಆಗಸ್ಟ್ 4ರಂದು ಅಧಿಸೂಚನೆ ಹೊರಡಿಸಿತ್ತು. ಇದಾದ […]

ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ? 

ರಾಮನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ಹಾಗೂ ರಾಮನಗರ ಬಂದ್ ವಿಚಾರದ ಬಗ್ಗೆ ರಾಮನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ? ಇದೊಂದು ನೈರ್ಸಗಿಕ ವಿಕೋಪ. ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೇವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ […]