August 1, 2026

ಅಪ್ಪಟ ಭಾರತೀಯ ನಾರಿ ಅವತಾರದಲ್ಲಿ ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಸರ್ ಪ್ರೈಸ್ ಕೊಟ್ಟಿದೆ ಅನಿಮಲ್ ಸಿನಿಮಾ ಟೀಮ್. ಇಂದು ಬಾಲಿವುಡ್ ನ ‘ಅನಿಮಲ್’ ಸಿನಿಮಾದ ರಶ್ಮಿಕಾ ಅವರ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಈ ಸಿನಿಮಾದಲ್ಲಿ ಅವರು ಅಪ್ಪಟ ಭಾರತೀಯ ನಾರಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗೀತಾಂಜಲಿ ಎಂಬ ಪಾತ್ರದ ಮೂಲಕ ಅಭಿಮಾನಿಗಳನ್ನು ರಶ್ಮಿಕಾ ರಂಜಿಸಲಿದ್ದಾರೆ. ‘ಅನಿಮಲ್’ ಚಿತ್ರ ತಂಡದಿಂದ ಮತ್ತೊಂದು ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಇದೀಗ ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಅನಿಮಲ್ ಚಿತ್ರದಲ್ಲಿನ ರಣ್‌ಬೀರ್ ಖಡಕ್ ಲುಕ್ ರಿವೀಲ್ […]

ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ

ಮಂಗಳೂರು: ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೊಟೀಸ್ ಕೊಟ್ಟು ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ ಎಂದರು. ಮೂರು ಡಿಸಿಎಂ ಪಕ್ಷದ […]

ಕಾಂಗ್ರೆಸ್​ನಲ್ಲಿ ಜೋರಾಯ್ತು ಡಿಸಿಎಂ ಕೂಗು

ಬೆಂಗಳೂರು: ಒಂದೆಡೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಪ್ರತಿಪಕ್ಷಗಳ, ರೈತರ ಪ್ರತಿಭಟನೆ ಭುಗಿಲೆದ್ದಿರುವುದು ರಾಜ್ಯ ಕಾಂಗ್ರೆಸ್  ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದರೆ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚುತ್ತಿರುವುದು ಮತ್ತೊಂದೆಡೆ ಸಂಕಟಕ್ಕೆ ಕಾರಣವಾಗಿದೆ. ಸಮುದಾಯವಾರು ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಬೇಕೆಂದು ಕೆಎನ್ ರಾಜಣ್ಣ ಬೇಡಿಕೆ ಇಟ್ಟಿರುವುದು ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಶಾಸಕ ಬಸವರಾಜ ರಾಯರೆಡ್ಡಿಆರು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿದ್ದಾರೆ. ಕೆಎನ್ ರಾಜಣ್ಣ ಹೇಳಿಕೆಗೆ ಬೆಂಬಲ ನೀಡಿರುವ ಬಸವರಾಜ ರಾಯರೆಡ್ಡಿ ಆರು ಡಿಸಿಎಂ […]

ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಇದೇ ಸೆಪ್ಟೆಂಬರ್‌ 26ರಂದು (ಮಂಗಳವಾರ) ಬೆಂಗಳೂರು ಬಂದ್‌ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಸಂಘ ಕರೆ ನೀಡಿದೆ. ಕುರುಬೂರು ಶಾಂತಕುಮಾರ್‌ ನೇತೃತ್ವದ ಸಮಿತಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಭೆ ನಡೆಸಿದ ಬಳಿಕ ಅಧಿಕೃತ ನಿರ್ಧಾರ ಪ್ರಕಟಿಸಿದೆ. ಬೆಂಗಳೂರು ಮತ್ತು ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ರ‍್ಯಾಲಿ ನಡೆಯಲಿದೆ ಎಂದು […]

ಮಂಡ್ಯ ಚಿತ್ರಮಂದಿರಗಳು ಬಂದ್

ಕಾವೇರಿ ನದಿ ನೀರು ಹೋರಾಟಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮಂಡ್ಯ ಥಿಯೇಟರ್ ಮಾಲೀಕರು ಕೂಡ ಬೆಂಬಲ ಸೂಚಿಸಿದ್ದಾರೆ. ಚಿತ್ರಮಂದಿರಗಳನ್ನು ಬಂದ್ ಮಾಡುವ ಮೂಲಕ ಹೋರಾಟಕ್ಕೆ ಇಳಿದಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಮಾಡಿದರೆ, ರಾಜ್ಯಾದ್ಯಂತ ಚಿತ್ರಮಂದಿರಗಳು ಕೂಡ ಬಂದ್ ಆಗಲಿವೆ. ಸ್ಯಾಂಡಲ್ ವುಡ್ ನಟ ನಟಿಯರು ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯ ಭಾಗದ ರೈತರ ಪರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರೆ, ನಟ ಅಭಿಷೇಕ್ ಅಂಬರೀಶ್ ನೇರವಾಗಿ ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ […]

ಪೌರಕಾರ್ಮಿಕರ ಪಾದಪೂಜೆ ಮಾಡಿದ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಪೌರಕಾರ್ಮಿಕರ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಪೂಜೆ ಮಾಡಿದ್ದಾರೆ. Advertisement: 0:16Close Player ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆದಿದೆ. ಈ ವೇಳೆ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.  ಕಾರ್ಯಕ್ರಮಕ್ಕೂ ಮುನ್ನ ಪ್ರದೀಪ್ ಈಶ್ವರ್ ಪೌರ ಕಾರ್ಮಿಕರ ಪಾದ ತೊಳೆದು, ನಮಸ್ಕಾರ ಮಾಡಿದ್ದಾರೆ. 

ಬೆಂಗಳೂರಿನಲ್ಲಿ ತೀವ್ರಗೊಂಡ ಕಾವೇರಿ ಹೋರಾಟ

ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಕೊಟ್ಟ ಆದೇಶ ಕರುನಾಡಲ್ಲಿ ಕಿಚ್ಚು ಹತ್ತುವಂತೆ ಮಾಡಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಅನೇಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ರೋಡಿಗಿಳಿಯುತ್ತಿವೆ. ಕಾವೇರಿಗಾಗಿ ಮಂಡ್ಯ ನಗರ, ಮದ್ದೂರು ಬಂದ್‌ ಮಾಡಲಾಗಿದೆ. ಅತ್ತಿಬೆಲೆ ಗಡಿ ಬಂದ್‌ ಆಗಿದೆ. ಇತ್ತ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರು ಅಥವಾ ಕರ್ನಾಟಕ ಬಂದ್​ಗೆ ಕರೆ ನೀಡಲು ಮುಂದಾಗಿವೆ. ಕರ್ನಾಟಕ ರಕ್ಷಣಾ ‌ವೇದಿಕೆ, ಕರ್ನಾಟಕ ಜಲ ಸಂರಕ್ಷಣಾ ಸಮಿತಿ, ಕರ್ನಾಟಕ ರಾಜ್ಯ […]

ಮೈತ್ರಿ ಅಧಿಕೃತಗೊಂಡರೂ ಸೀಟು ಹಂಚಿಕೆ ಕಗ್ಗಂಟು

ಬೆಂಗಳೂರು: `ಲೋಕ’ ಸಮರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತಗೊಂಡರೂ ಸೀಟು ಹಂಚಿಕೆ ಸಮಸ್ಯೆ ಕಗ್ಗಂಟಾಗಿಯೇ ಉಳಿದಿದೆ. ದೆಹಲಿಯಲ್ಲಿ ಅಮಿತ್ ಶಾ , ಜೆ.ಪಿ ನಡ್ಡಾ ಮತ್ತು ಹೆಚ್.ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಧಿಕೃತ ಮುದ್ರೆ ಬಿದ್ದಿದೆ. ಸೀಟು ಹಂಚಿಕೆ ಸೇರಿ ಹಲವು ವಿಚಾರಗಳ ಬಗ್ಗೆ ಶುಕ್ರವಾರ ಗಹನಾರ್ಹ ಚರ್ಚೆ ನಡೆದಿದೆ. ಮೈತ್ರಿ ಏರ್ಪಡುವಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಮಹತ್ವದ ಪಾತ್ರ ವಹಿಸಿದ್ದಾ ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ […]

ಈಗ ಬಿಜೆಪಿಗೆ, ರಾಜ್ಯಕ್ಕೆ ಅನಂತಕುಮಾರ ಅಗತ್ಯವಿತ್ತು

ಬೆಂಗಳೂರು: ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕದ ವಿಚಾರ ಬಂದಾಗ ಅನಂತಕುಮಾರ್ ಅವರು ಆಪದ್ಬಾಂಧವರಾಗಿದ್ದರು. ಈಗ ರಾಜ್ಯಕ್ಕೆ ಮತ್ತು ಬಿಜೆಪಿಗೆ ಅವರ ಅಗತ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಅನಂತಕುಮಾರ 64 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನಂತಕುಮಾರ್ ಅವರು ಅನಂತವಾದ ಬದುಕನ್ನು ಅಲ್ಪ ಸಮಯದಲ್ಲಿ ಇದ್ದು ಯಶಸ್ಸು ಸಾಧನೆಗಳನ್ನು ಮಾಡಿ ಅತಿ ಚಿಕ್ಕ ವಯಸಿನಲ್ಲಿ ಬಿಟ್ಟು ಹೋಗಿದ್ದಾರೆ. ಅನಂತಕುಮಾರ್ ನಾನು ಕ್ಲಾಸ್ ಮೇಟ್. […]

ಎನ್‌ಡಿಎ ಒಕ್ಕೂಟಕ್ಕೆ ಅಧಿಕೃತವಾಗಿ ಜೆಡಿಎಸ್‌ ಸೇರ್ಪಡೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್‌ ಅಧಿಕೃತವಾಗಿ ಸೇರ್ಪಡೆಯಾಗಿದೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಇಂದು ಗೃಹ ಸಚಿವ ಅಮಿತ್‌ ಶಾ ನಿವಾಸಕ್ಕೆ ತೆರಳಿ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿದ್ದಾರೆ. ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಜೆಡಿಎಸ್‌ 6 ಕ್ಷೇತ್ರಗಳನ್ನು ಕೇಳಿದ್ದು, ಬಿಜೆಪಿ 4 ಕ್ಷೇತ್ರಗಳನ್ನು ನೀಡಲು ಸಿದ್ಧವಿದೆ ಎನ್ನಲಾಗುತ್ತಿದೆ. […]