2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ
ನವದೆಹಲಿ: ಲೋಕಸಭಾ ಚುನಾವಣೆ 2024ರಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿಯನ್ನು ಕರೆತರುವ ಪ್ರಶ್ನೆಯೇ ಇಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ನಿಖಿಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಕುಮಾರಸ್ವಾಮಿ ಜೊತೆ ನಿಖಿಲ್ ಕೂಡ ದೆಹಲಿಗೆ ತೆರಳಿದ್ದಾರೆ. ಅದರಂತೆ ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟನೆ ನೀಡಿದರು. ಮುಂದಿನ ಐದು […]












































































































































































































































































































































































































































































































































































































































































































































































































































































































































































































































































































































