ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ
ಒಟ್ಟಾವಾ: ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಈಗ ಭಾರತದ ಪರ ಮೃದುವಾಗಿ ಮಾತನಾಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಭಾರತವು ಅಭಿವೃದ್ಧಿ ಪ್ರಧಾನ ದೇಶವಾಗಿದೆ, ನಾವು ಯಾವುದೇ ಕಾರಣಕ್ಕೂ ಭಾರತವನ್ನು ಪ್ರಚೋದಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಜಸ್ಟಿನ್ ಟ್ರುಡೋ ತಿಳಿಸಿದ್ದಾರೆ. ಮುಂದುವರಿದು, ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅಂತಹ ದೇಶದೊಂದಿಗೆ ನಾವು ಜೊತೆಗೂಡಿ ಪ್ರಾದೇಶಿಕ ಹಾಗೂ ಜಾಗತಿಕ ಏಳಿಗೆ […]












































































































































































































































































































































































































































































































































































































































































































































































































































































































































































































































































































































