August 1, 2026

ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ

ಬೆಂಗಳೂರು: ಸುಪ್ರೀಂಕೋರ್ಟ್  ಆದೇಶ ದುರದೃಷ್ಟಕರ. ಮತ್ತೊಮ್ಮೆ ನಮ್ಮ ರಾಜ್ಯದ ಕಾನೂನು ತಂಡ ಸುಪ್ರೀಂಕೋರ್ಟ್ ಮುಂದೆ ವಸ್ತುಸ್ಥಿತಿ ತಿಳಿಸಲು ವಿಫಲವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೊದಲ ಸಿಡಬ್ಲ್ಯೂಸಿ ಆದೇಶ ಬಂದಾಗ ಕರ್ನಾಟಕ ಸುಪ್ರೀಂಕೋರ್ಟ್‌ಗೆ ಹೋಗಬೇಕಿತ್ತು. ನೀರು ಬಿಡಲು ಆಗಲ್ಲ ಎಂದು ಅಫಿಡವಿಟ್ ಹಾಕಬೇಕಿತ್ತು. ಎರಡು ಸಲ ನೀರು ಬಿಟ್ಟು ಈಗ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿ (CWRC), ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ […]

ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು

ಬೆಂಗಳೂರು: ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಿ ಸಂಕಷ್ಟ ಸೂತ್ರ ಸಿದ್ಧ ಮಾಡಬೇಕು ಅಂತ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಒತ್ತಾಯ ಮಾಡಿದ್ದಾರೆ. ಸುಪ್ರೀಂಕೋರ್ಟ್ (Supreme Court) ನಿಂದ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಅತ್ಯಂತ ದುರಾದೃಷ್ಟಕರ. ನಮ್ಮಲ್ಲಿ ಕುಡಿಯೋಕೆ ನೀರಿಲ್ಲ. ಕೆಲವೇ ತಿಂಗಳಲ್ಲಿ ಬೆಂಗಳೂರಿಗೂ ಕುಡಿಯೋ ನೀರಿಗೂ ಸಮಸ್ಯೆ ಆಗುತ್ತದೆ. ಇಂತಹ ಸಮಯದಲ್ಲಿ ಎರಡು ಬೋರ್ಡ್ ಗಳು ಮತ್ತು ಸುಪ್ರೀಂಕೋರ್ಟ್ ವಾಸ್ತವ […]

ಕ್ವಾರ್ಟರ್ ಫೈನಲ್‍ಗೆ ಜಿಗಿದ ಟೀಂ ಇಂಡಿಯಾ

ನವದೆಹಲಿ: ಏಷ್ಯನ್ ಗೇಮ್ಸ್ ಕ್ರಿಕೆಟ್ 2023 ಟೂರ್ನಿಯಲ್ಲಿ ಚೀನಾದ ಹಾಂಗ್‍ಝೌನ ಪಿಂಗ್‍ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ಇಂದು (ಗುರುವಾರ) ನಡೆದ ಪಂದ್ಯದಲ್ಲಿ ಭಾರತ ಮತ್ತು ಮಲೇಷ್ಯಾ ಮಹಿಳಾ ತಂಡಗಳ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ರನ್ ರೇಟ್ ಆಧಾರದ ಮೇಲೆ ಭಾರತ ತಂಡ ಟೂರ್ನಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಈ ಮೂಲಕ ಮಹಿಳಾ ಕ್ರಿಕೆಟ್ ಟೂರ್ನಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೆ ರದ್ದಾಗಿದೆ. ಆದರೂ ಭಾರತ ತಂಡ ಸೆಮಿಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದ ಭಾರತ […]

ಕೂಲಿ ಹೊತ್ತು ನಡೆದ ರಾಹುಲ್ ಗಾಂಧಿ

ನವದೆಹಲಿ: ಇಲ್ಲಿನ ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು. ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್ ಕೇಸ್ ತಲೆ ಮೇಲೆ ಹೊತ್ತು ನಡೆಯುತ್ತಿರುವ ವೀಡಿಯೋ ಹಾಗೂ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವಯನಾಡು ಸಂಸದರೂ ಆಗಿರುವ ರಾಹುಲ್ ಗಾಂಧಿಯವರು ಟ್ರೋಲಿ ಬ್ಯಾಗ್ ಅನ್ನು ತಲೆ ಮೇಲೆ ಹೊತ್ತುಕೊಂಡು ಹೋಗುತ್ತಿರುವುದನ್ನು ಗಮನಿಸಬಹುದು. ಈ ವೇಳೆ ಅಲ್ಲಿನ ಕಾರ್ಮಿಕರು ‘ರಾಹುಲ್ ಗಾಂಧಿ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. […]

ಆ ನೋವು ಎಂದಿಗೂ ಕಮ್ಮಿಯಾಗಲ್ಲ

ಬಹುಭಾಷಾ ನಟಿ ಭಾವನಾ ಮೆನನ್ (Bhavana Menon) ಅವರು ಕನ್ನಡ, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಕಾಡುವ ತಂದೆಯ ಅನುಪಸ್ಥಿತಿ ಬಗ್ಗೆ ಜಾಕಿ ಭಾವನಾ ಮಾತನಾಡಿದ್ದಾರೆ. ತಂದೆ ಜೊತೆಗಿನ ನೆನಪುಗಳನ್ನ ನಟಿ ಮೆಲುಕು ಹಾಕಿದ್ದಾರೆ. ನಟಿ ಭಾವನಾ ಮಾತನಾಡಿ, ನನ್ನ ತಂದೆಯ ಸಾವಿನ ನೋವು ಯಾವಾಗಲೂ ಹಾಗೆಯೇ ಇರುತ್ತದೆ. ಹೊರಗೆ ಎಷ್ಟೇ ಖುಷಿಯಾಗಿದ್ದರೂ ಒಳಗಿನ ನೋವು ಹಾಗೆಯೇ ಇದೆ. ಇಷ್ಟು ವರ್ಷ ಕಳೆದರೂ ಆ ದುಃಖದಿಂದ ಹೊರಬರಲು ಸಾಧ್ಯವಾಗಿಲ್ಲ. ಜೀವನ ಸಂಪೂರ್ಣವಾಗಿ ಬದಲಾಗಿದೆ. […]

ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತಾಗಿದೆ: ಸಿ.ಟಿ.ರವಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಕೊಟ್ಟ ತೀರ್ಪು ಕರ್ನಾಟಕಕ್ಕೆ ಗಾಯದ ಮೇಲೆ ಬರ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. Advertisement: 0:51Close Player ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಬೇಕೆಂಬ ದುರುದ್ದೇಶ ನಮಗೆ ಇಲ್ಲ. ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಂದಿಡಬೇಕಾದ ಉದ್ದೇಶ ಇದೆ. ನಾವು 42% ರಷ್ಟು ಮಳೆ ಕೊರತೆ ಇದ್ದರು ಕೂಡ, ವಾಸ್ತವ ಪರಿಸ್ಥಿತಿ ವಿವರಿಸಲಿಲ್ಲ. ಸಂಕಷ್ಟದ ಸ್ಥಿತಿಯಲ್ಲಿ ಇದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.  ಸುಪ್ರೀಂ ಕೋರ್ಟ್‌ನಲ್ಲೂ ನಮಗೆ ಸಹಾಯ ಆಗಲಿಲ್ಲ. ತಮಿಳುನಾಡು […]

ಕರ್ನಾಟಕಕ್ಕೆ ಮತ್ತೆ ಶಾಕ್‌ ಕೊಟ್ಟ ಸುಪ್ರೀಂ ಕೋರ್ಟ್‌!

ನವದೆಹಲಿ: ಕರ್ನಾಟಕದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ತಲಾ 5 ಸಾವಿರ ಕ್ಯೂಸೆಕ್ಸ್‌ ನೀರು ಹರಿಸಬೇಕು ಎಂದು ತಿಳಿಸಿದೆ. ಕನ್ನಡ ನಾಡಿನಲ್ಲಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿಯೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಕರ್ನಾಟಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಈ ಬಗ್ಗೆ ಕರ್ನಾಟಕ […]

ಭಾರತ ವಿರೋಧಿ ಪ್ರಚಾರಕ್ಕೆ ಖಲಿಸ್ತಾನ್ ಉಗ್ರರ ಜೊತೆ ಕೈ ಜೋಡಿಸಿದ ಪಾಕ್

ನವದೆಹಲಿ: ಭಾರತ ವಿರೋಧಿ ಪ್ರಚಾರಕ್ಕೆ ಸಂಚು ರೂಪಿಸಲು ಕೆನಡಾದಲ್ಲಿರುವ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಏಜೆಂಟ್‍ಗಳು ಮತ್ತು ಖಲಿಸ್ತಾನ್ ಭಯೋತ್ಪಾದಕ ಗುಂಪುಗಳ ಮುಖ್ಯಸ್ಥರು ಇತ್ತೀಚೆಗೆ ವ್ಯಾಂಕೋವರ್‌ನಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ. ಇದೇ ವಾರ ಸಭೆ ನಡೆದಿದ್ದು, ಸಿಖ್ಸ್ ಫಾರ್ ಜಸ್ಟಿಸ್ (ಎಸ್‍ಎಫ್‍ಜೆ) ಮುಖ್ಯಸ್ಥ ಗುರುಪತ್‍ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನಿ ಸಂಘಟನೆಗಳ ಇತರ ಮುಖ್ಯಸ್ಥರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಭಾರತದ ವಿರುದ್ಧ ನಕಾರಾತ್ಮಕ ಪ್ರಚಾರ ಮಾಡಲು ತಿರ್ಮಾನಿಸಲಾಗಿದೆ. ಅಲ್ಲದೇ ಸಾಧ್ಯವಾದಷ್ಟು ಈ ಯೋಜನೆಯನ್ನು […]

ರಾಜ್ಯದೆಲ್ಲೆಡೆ 1 ವಾರ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ 1 ವಾರದ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಮಳೆಯ ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.  ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. 

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಲವರಿಗೆ ನೋಟಿಸ್ ಜಾರಿ

ಬೆಂಗಳೂರು: ಚೈತ್ರಾ ಕುಂದಾಪುರ ಮತ್ತು ತಂಡ ಎಸಗಿದ ವಂಚನೆ ಪ್ರಕರಣ ಸಂಬಂಧ ಸಿಸಿಬಿ  ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಅಭಿನವ ಹಾಲಶ್ರೀ ತನಿಖೆ ಆರಂಭಿಸಿದ ತನಿಖಾಧಿಕಾರಿಗಳು ಮತ್ತಷ್ಟು ಮಂದಿಗೆ ನೋಟಿಸ್ ಜಾರಿ ಮಾಡಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪ್ರಕರಣದ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಅವರನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಕೋರ್ಟ್ ನೀಡಿದೆ. ಇದರ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ತನಿಖಾಧಿಕಾರಿಗಳು, ಸ್ವಾಮೀಜಿ ಕಡೆಯಿಂದ ಹಣ ಜಪ್ತಿ ಮಾಡುವ ಹಿನ್ನೆಲೆ ಕರೆದುಕೊಂಡು ಹೋಗಿದ್ದರು. ಇದರ […]