July 30, 2026

ಯತ್ನಾಳ್, ಹರಿಪ್ರಸಾದ್​ ಸೇರಿ ಪಕ್ಷ ಆರಂಭಿಸುವುದು ಒಳ್ಳೆಯದು

ಬೆಂಗಳೂರು: ಮಾಜಿ ಸಚಿವ ಬಿಸಿ ಪಾಟೀಲ್ ಕಾಂಗ್ರೆಸ್​ ನಾಯಕ ಬಿ.ಕೆ.ಹರಿಪ್ರಸಾದ್​ (BK Hariprasad) ಮತ್ತು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್  ವಿರುದ್ಧ ವಾಗ್ದಾಳಿ ಮಾಡಿದ್ದಾರೆ. “ವಿಕೃತ ಮನಸು ಹೊಂದಿರುವ ಬಿ.ಕೆ.ಹರಿಪ್ರಸಾದ್​​ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಇಬ್ಬರೂ ಸೇರಿ ಒಂದು ಪಕ್ಷ ಆರಂಭಿಸುವುದು ಒಳ್ಳೆಯದು ಅಂತ ನನ್ನ ಭಾವನೆ” ಎಂದು ಬಿ.ಸಿ.ಪಾಟೀಲ್ ಟ್ವೀಟ್​​​ ಮಾಡಿದ್ದಾರೆ. ‘”ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ನಾನು ಬಸವನಗೌಡ ಪಾಟೀಲ್ ಅಂದರೆ ಬಿಸಿ ಪಾಟೀಲ್. ಏನು ಪಾಟೀಲ್ ಅವರೇ, ನೀವು ಈ […]

100 ಹೊಸ ಎಲೆಕ್ಟ್ರಿಕ್ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ವಿಧಾನಸೌಧದ ಮುಂಭಾಗ ಸಿಎಂ ಸಿದ್ದರಾಮಯ್ಯನವರು 100 ಹೊಸ ಎಲೆಕ್ಟ್ರಿಕ್ ಬಸ್​ಗಳಿಗೆ ಚಾಲನೆ ನೀಡಿದ್ದಾರೆ. ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಉಪಸ್ಥಿತರಿದ್ದರು. ಕೇಂದ್ರ ಸರ್ಕಾರದ ಫೇಮ್- 2 ಅಡಿಯಲ್ಲಿ 921 ಬಸ್​ಗಳನ್ನು ಅಳವಡಿಸಿಕೊಳ್ಳಲು ಬಿಎಂಟಿಸಿ ಮುಂದಾಗಿದ್ದು ಮೊದಲ ಹಂತದಲ್ಲಿ 100 ಟಾಟಾ ಕಂಪನಿಯ ಇವಿ ಬಸ್​ಗಳಿಗೆ ಚಾಲನೆ ನೀಡಲಾಗಿದೆ. 12 ವರ್ಷಗಳ ಕಾಂಟ್ರ್ಯಾಕ್ಟ್ ಅಡಿಯಲ್ಲಿ ಬೆಂಗಳೂರಿನಲ್ಲಿ ಈ […]

ನನ್ನ ಮೇಲೆ ವೈಯಕ್ತಿಕ ದಾಳಿ ಮಾಡಬೇಡಿ -ಪ್ರತಾಪ್ ಸಿಂಹ

ಮೈಸೂರು: ಸಂಸತ್​ ಘಟನೆ ಬಳಿಕ ನನ್ನ ಮೇಲೆ ಕಾಂಗ್ರೆಸ್​ನಿಂದ ವೈಯಕ್ತಿಕ ದಾಳಿ ನಡೆಯುತ್ತಿದೆ ಎಂದು ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಆರೋಪ ಮಾಡಿದ್ದಾರೆ. ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನವರೆಗೂ ನನ್ನ ಟಾರ್ಗೆಟ್ ಮಾಡಲಾಗುತ್ತಿದೆ. ನನ್ನನ್ನು ಭಯೋತ್ಪಾದಕ ಅಂತಾ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ನನಗೆ ಮುಸ್ಲಿಂ ವೇಷ ತೊಡಿಸಿ ಕೈಯಲ್ಲಿ ಬಾಂಬ್ ಕೊಟ್ಟಿದ್ದರು. ನನ್ನ ಸಹೋದರ ಮರಗಳ್ಳ ಅಂತ ಕಾಂಗ್ರೆಸ್ಸಿಗರು ಪೋಸ್ಟ್ ಮಾಡಿದ್ದರು ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸದ ಪ್ರತಾಪ್ […]

ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜ್ಯ ರಾಜಧಾನಿ ಬೆಂಗಳೂರು ಸಿದ್ದವಾಗುತ್ತಿದೆ. ಅದರಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೂ ಮಹಿಳೆ ಮತ್ತು ಮಕ್ಕಳಿಗೆ ಸಮಸ್ಯೆ ಆಗಬಾರದು. ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ ಹೊಸ ವರ್ಷಾಚರಣೆ ದಿವಸ ಕ್ಲಬ್​ಗಳಿಗೆ ರಾತ್ರಿ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ವೈನ್ ಶಾಪ್​ಗಳಿಗೆ ರಾತ್ರಿ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ […]

ಹಂಪಿ ಉತ್ಸವಕ್ಕೆ ದಿನಾಂಕ ನಿಗದಿ

ವಿಜಯನಗರ: ವಿಜಯನಗರದ ಭವ್ಯತೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಮಹತ್ವ ಪಡೆದಿರುವ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಿದೆ. ಹಂಪಿಯಲ್ಲಿ ಫೆಬ್ರವರಿ 2ರಿಂದ ಹಂಪಿ ಉತ್ಸವ ಆರಂಭವಾಗಲಿದೆ. ಈ ಉತ್ಸವ ಫೆಬ್ರವರಿ 02, 03 ಮತ್ತು 04ರವರೆಗೆ 3 ದಿನಗಳ ಕಾಲ ನಡೆಯಲಿದೆ. ಹಾಗೆಯೇ ಉತ್ಸವದಲ್ಲಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಬರಗಾಲ ನಿಮಿತ್ಯ ಹಂಪಿ ಉತ್ಸವ ದಿನಾಂಕವನ್ನು ಸರ್ಕಾರ ಮುಂದೂಡಿತ್ತು. ಸದ್ಯ ಈಗ ಅಂತಿಮವಾಗಿ ಫೆಬ್ರವರಿ ತಿಂಗಳಲ್ಲಿ ಹಂಪಿ ಉತ್ಸವ ನಡೆಸಲು ನಿರ್ಧರಿಸಲಾಗಿದೆ. ಮೂರು ದಿಗಳ ಉತ್ಸವಕ್ಕೆ ಸಿಎಂ […]

ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿಯನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು: ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ ಕುಲಕರ್ಣಿಯನ್ನು ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಇದೀಗ ಮುಂಜಾಗ್ರತಾ ಕ್ರಮವಾಗಿ ಶ್ರೀ ರಾಮಸೇನೆಯ ಮುಖಂಡ ರಂಜಿತ್ ಶೆಟ್ಟಿ ವಶಕ್ಕೆ ಪಡೆದಿದ್ದಾರೆ.  ಶ್ರೀರಾಮಸೇನೆಯು ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ಸರ್ವೆ ನಂ 57 ರ ಜನ್ನತ್ ನಗರದಲ್ಲಿರುವ ದರ್ಗಾದಲ್ಲಿ ದತ್ತಜಯಂತಿಯ ಹೊಸ ಆಚರಣೆಗೆ ಮುಂದಾಗಿತ್ತು. ದತ್ತಜಯಂತಿ ಆಚರಣೆಯ ಕರೆ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿಯನ್ನು ವಶಕ್ಕೆ ಪಡೆಲಾಗಿದೆ. ಬಳಿಕ ಗೌಪ್ಯ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದಾರೆ. ಸದ್ಯ […]

ರಾಮಮಂದಿರ ಉದ್ಘಾಟನೆಗೆ ಮಾಜಿ ಸಿಎಂ ಹೆಚ್‌ಡಿಕೆ ಕುಟುಂಬಕ್ಕೆ ಆಹ್ವಾನ

ಬೆಂಗಳೂರು: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ರಾಮಮಂದಿರದಲ್ಲಿ ಜ.22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬರಬೇಕು ಎಂದು ಮಾಜಿ ಸಿಎಂ ಹೆಚ್‌ಡಿಕೆಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಆಹ್ವಾನ ನೀಡಿದೆ.  ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಆಹ್ವಾನ ಪತ್ರಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ […]

ಇಂದಿನಿಂದ ಯುವ ನಿಧಿ ನೋಂದಣಿ ಆರಂಭ

ಬೆಂಗಳೂರು: ನಾವು ನುಡಿದಂತೆ ನಡೆಯುತ್ತೇವೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಜ್ಯಾಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅದನ್ನ ಮತ್ತೊಮ್ಮೆ ಸಾಭೀತು ಮಾಡಿದೆ. ಕೊಟ್ಟ ಮಾತಿನಂತೆ ತನ್ನ ಕೊನೆಯ ಗ್ಯಾರಂಟಿ ಯೋಜನೆ ಯುವ ನಿಧಿಯನ್ನ ತಿಂಗಳಾಂತ್ಯಕ್ಕೆ ಜಾರಿ ಮಾಡಲು ಮುಂದಾಗಿದೆ. ಲೋಕಸಭಾ ಚುನಾವಣೆ ಹೊಸ್ತಿನಲ್ಲಿ ಕಾಂಗ್ರೆಸ್ ಐದನೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ಇಂದಿನಿಂದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಡಿಸೆಂಬರ್ ತಿಂಗಳ 26ರಂದು ಯುವ ನಿಧಿ ಯೋಜನೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಸಲುವಾಗಿನ ಅರ್ಜಿ […]

ಗಬ್ಬೆದ್ದು ನಾರುತ್ತಿದೆ ಪಾಲಿಕೆಯ ಇಂದಿರಾ ಕ್ಲಿನಿಕ್

ಬೆಂಗಳೂರು: ಬೆಂಗಳೂರಿನ ಜನರಿಗೆ ನೆರವಾಗಲಿ ಎಂದು ಇಂದಿರಾ ಕ್ಲಿನಿಕ್​ಗಳನ್ನು ತೆರೆಯಲಾಗಿದೆ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಏನಾದ್ರೂ ತುರ್ತು ಚಿಕಿತ್ಸೆ ಬೇಕಿದ್ರೆ ಸಹಾಯ ಸಿಗಲಿ ಅಂತಾ ನಿರ್ಮಿಸಲಾಗಿದೆ. ಆದರೆ ಇದೀಗ ನಿರ್ವಹಣೆಯಿಲ್ಲದೇ ಇಂದಿರಾ ಕ್ಲಿನಿಕ್ ಕಟ್ಟಡ ದುಸ್ಥಿತಿ ತಲುಪಿದೆ. ಜನರಿಗೆ ಚಿಕಿತ್ಸೆ ಕೊಡೋ ಬದಲು ಆಸ್ಪತ್ರೆಗೆ ಚಿಕಿತ್ಸೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿಬಿಟ್ಟಿದೆ. ಬೆಂಗಳೂರಿನ ಹೃದಯ ಭಾಗವಾಗಿರೋ ಮೆಜೆಸ್ಟಿಕ್ ನಲ್ಲಿ ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಓಡಾಡುತ್ತಾರೆ. ಬೇರೆ ಬೇರೆ ಕಡೆಯಿಂದ ಬರೋ ಪ್ರಯಾಣಿಕರಿಗೆ, ಸೇವೆಯಲ್ಲಿರೋ ಬಿಎಂಟಿಸಿ ಚಾಲಕರು, ನಿರ್ವಾಹಕರಿಗೆ ತುರ್ತು ಚಿಕಿತ್ಸೆ […]

ಹಿಜಬ್ ಕುರಿತು ಎಚ್ಚರಿಕೆ ಹೆಜ್ಜೆ ಇಡಲು ಕೆಪಿಸಿಸಿ ನಿರ್ಧಾರ

ಬೆಂಗಳೂರು: ಹಿಜಬ್ ನಿಷೇಧ ಆದೇಶ ವಾಪಸ್ ವಿಚಾರದ ಕುರಿತು ಎಚ್ಚರಿಕೆಯ ಹೆಜ್ಜೆ ಇಡಲು ಕೆಪಿಸಿಸಿ ನಿರ್ಧರಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ. ಹೈಕಮಾಂಡ್ ಬಳಿ ಚರ್ಚೆಯ ಬಳಿಕ ಕ್ಯಾಬಿನೆಟ್‍ನಲ್ಲಿ ಚರ್ಚೆಗೆ ಹಿರಿಯರು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ. ಇತ್ತ ಅವಸರ ಬೇಡ ಎಂದು ಡಿಕೆಶಿ ಪಟ್ಟು ಹಿಡಿದಿದ್ದು, ಸಿಎಂ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಜೊತೆಗೆ ಕಾನೂನು ಸಾಧಕ-ಬಾಧಕಗಳ ಚರ್ಚೆಗೆ ಸರ್ಕಾರ ನಿರ್ಧಾರ ಮಾಡಿದೆ. ಹಿಜಬ್ ನಿಷೇಧ ವಾಪಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ನಾನಾ ಚರ್ಚೆಗಳು […]