July 30, 2026

ಕ್ರಿಕೆಟಿಗ ಕಾರಿಯಪ್ಪ ಪ್ರೇಯಸಿಗೆ ಪೊಲೀಸರಿಂದ ನೋಟಿಸ್‌

ಬೆಂಗಳೂರು: ಕ್ರಿಕೆಟಿಗ ಕಾರಿಯಪ್ಪ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದ ಮಹಿಳೆಗೆ ಆರ್‌.ಟಿ. ನಗರ ಪೊಲೀಸರು ನೋಟಿಸ್‌ ನೀಡಿದ್ದಾರೆ. ಘಟನೆ ಬಗ್ಗೆ ವಿವರ ನೀಡುವಂತೆ ಕಾರಿಯಪ್ಪ ಪ್ರೇಯಸಿಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಈಕೆಯಿಂದ ಮಾಹಿತಿ ಪಡೆದ ಬಳಿಕ ಕ್ರಿಕೆಟಿಗ ಕಾರಿಯಪ್ಪಗೆ ನೋಟಿಸ್‌ ನೀಡಲು ಆರ್‌.ಟಿ. ನಗರ ಪೊಲೀಸರು ಮುಂದಾಗಿದ್ದಾರೆ.  ಏನಿದು ಪ್ರಕರಣ?ಒಂದೂವರೆ ವರ್ಷಗಳ ಹಿಂದೆ ಕ್ರಿಕೆಟಿಗ ಕಾರಿಯಪ್ಪ ಮತ್ತು ಮಹಿಳೆಗೆ ಪರಿಚಯವಾಗಿತ್ತು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಇಬ್ಬರ ನಡುವೆ ಮನಸ್ತಾಪ ಉಂಟಾಗಿದೆ. ಅಲ್ಲದೇ ಪರಸ್ಪರರ ವಿರುದ್ಧ […]

ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ

ಮಂಡ್ಯ: ಬರದ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ರೈತರಿಗೆ ಶಾಕ್‌ ನೀಡಿದೆ. ಲೀಟರ್‌ ಹಾಲಿಗೆ 1.50 ರೂ. ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಇತ್ತ ಮನ್ಮುಲ್‌ ಹಾಲಿನ ದರ ಇಳಿಕೆ ಮಾಡಿದೆ. ಆದರೆ ಅತ್ತ ಪಶು ಆಹಾರದ ಬೆಲೆ ಏರಿಕೆಯಾಗಿದೆ. ಇದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲಾಗಿದ್ದಾರೆ.  ಮನ್ಮುಲ್ ಆಡಳಿತ ಮಂಡಳಿ ನಿರ್ಧಾರಕ್ಕೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ KMF ಪಶು ಆಹಾರದ ಬೆಲೆ ಚೀಲಕ್ಕೆ 50 […]

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ- ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಕೊನೆ ದಿನವಾದ ಇಂದು ಪಾದುಕೆ ದರ್ಶನ ನಡೆಯಲಿದೆ. ಹೌದು. ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾಧಾರಿಗಳು ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾವಿರಾರು ದತ್ತಮಾಲಾಧಾರಿಗಳು ಆಗಮಿಸಲಿದ್ದಾರೆ. ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ ಹೋಮ-ಹವನ-ಪೂಜೆ ನಡೆಯುತ್ತಿದೆ. ದತ್ತಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳು ಬಂದ್ ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ […]

ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ

ಬೆಳಗಾವಿ: ಬರಗಾಲ ಬರಲಿ ಎಂದು ರೈತರಿಗೆ ಆಸೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ‘ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ರೈತ ಮುಖಂಡ ಮಹಾದೇವ ಮಡಿವಾಳ ಹಾಗೂ ಮಂಜುನಾಥ ಪರಗೌಡ  ಮಾತನಾಡಿ ‘ನೀವು ರೈತನ ಮಕ್ಕಳು ಎಂದು ಚುನಾವಣೆ ಸಂದರ್ಭದಲ್ಲಿ ಹೇಳುತ್ತೀರಿ, ನೀವು ರೈತರ ಮಕ್ಕಳಲ್ಲ, ಬರಗಾಲ ಬರಲಿ ಎಂದು ನಿಮ್ಮ ತಂದೆ ಬಯಸಿದ್ರಾ ಎಂದು ಕೇಳಿಕೊಳ್ಳಿ ಎಂದು ಕಿಡಿಕಾರಿದ್ದಾರೆ. ದೇವರು ಕೊಟ್ಟ ಕೃಷ್ಣ ನದಿ ಪುಕ್ಕಟ್ಟೆ ಎಂದು ಹೇಳುತ್ತೀರಾ, ಮಹಾರಾಷ್ಟ್ರದಿಂದ ನೀರು ಬಿಡುಗಡೆ […]

ಗೀಸರ್‌ ಗ್ಯಾಸ್‌ ಸೋರಿಕೆ: ಸ್ನಾನಕ್ಕೆಂದು ಹೋಗಿದ್ದ ಯುವತಿ ಬಾತ್‌ರೂಮ್‌ನಲ್ಲೇ ಸಾವು

ಬೆಂಗಳೂರು: ಸ್ನಾನ ಮಾಡಲು ಬಾತ್‌ರೂಮ್‌ಗೆ ಹೋಗಿದ್ದ ಯುವತಿಯೋರ್ವಳು ಅಲ್ಲಿಯೇ  ಮೃತಪಟ್ಟಿದ್ದಾಳೆ. ಬಾತ್‌ರೂಮ್‌ನಲ್ಲಿದ್ದ ಗೀಸರ್‌ನ ಗ್ಯಾಸ್‌(gas geyser) ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ರಾಜೇಶ್ವರಿ (23) ಮೃತ ದುರ್ದೈವಿ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರದಲ್ಲಿ ಈ ದುರ್ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ವರಿ, ಅಣ್ಣನ ಮದುವೆಗೆ ರಜೆ ಹಾಕಿದ್ದಳು. ಆದ್ರೆ, ಇಂದು(ಡಿಸೆಂಬರ್ 25) ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಬಾತ್‌ರೂಮ್‌ನಿಂದ ಹೊರಬಾರದ ಕಾರಣಕ್ಕೆ ಬಾಗಿಲು ಬಡಿದಿದ್ದಾರೆ. ಆಗಲೂ ತೆರೆಯದೇ […]

ಮಹಿಳೆ ಜೊತೆ ಅಸಭ್ಯ ವರ್ತನೆ,ಪಿಎಸ್ಐ ಅಮಾನತು

ಬೆಳಗಾವಿ: ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪದಡಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣ ಠಾಣೆಯ ಪಿಎಸ್ಐ ಅಮಾನತು ಮಾಡಲಾಗಿತ್ತು. ಈ ಹಿನ್ನಲೆ ಸಿಡಿದೆದ್ದ ಸಸ್ಪೆಂಡೆಡ್ ಪಿಎಸ್ಐ ನರಸಿಂಹರಾಜು ತಮ್ಮ ಠಾಣೆಯ ಸಿಪಿಐ ಹಾಗೂ ಸಿಬ್ಬಂದಿ ವಿರುದ್ಧ ಕಿಡಿಕಾರಿದ್ದಾರೆ.  ಸಂಕೇಶ್ವರ ಠಾಣೆ ಸಿಪಿಐ ಮತ್ತು ಕೆಲ ಸಿಬ್ಬಂದಿ ವಿರುದ್ಧ ಪಿಎಸ್ಐ ಗಂಭೀರ ಆರೋಪ ಮಾಡಿದ್ದಾರೆ. ನನ್ನ ವಿರುದ್ದ ಮಹಿಳೆ, ಸಿಪಿಐ, ಕೆಲ ಪೊಲೀಸ್ ಸಿಬ್ಬಂದಿ ಸೇರಿ ಷಡ್ಯಂತ್ರ ಮಾಡಿದ್ದಾರೆ ಎಂದಿದ್ದಾರೆ. ತಂಗಿಯೆಂದು ಆ ಮಹಿಳೆಗೆ ಸಹಾಯ ಮಾಡಿದ್ದೆ ಎಂದ ಪಿಎಸ್​ಐ […]

ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

ಬೆಂಗಳೂರು: ಹನುಮ ಜಯಂತಿ ಹಿನ್ನೆಲೆ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ನಡೆದಿದೆ. ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ ಅಂಗವಾಗಿ ಭಾನುವಾರ ಭಕ್ತರು ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿದ್ದರು. ಅಲ್ಲಿ ಪುಳಿಯೊಗರೆ, ಪಾಯಸ ಹಾಗೂ ಲಡ್ಡನ್ನು ಪ್ರಸಾದದ ರೂಪದಲ್ಲಿ ನೆರೆದಿದ್ದ ಭಕ್ತರು ಸೇವಿಸಿದ್ದಾರೆ. ಪ್ರಸಾದ ಸೇವನೆ ಬಳಿಕ ಭಕ್ತರಿಗೆ ವಾಂತಿ ಹಾಗೂ […]

ರಾಜ್ಯದ 8 ಮಂದಿಯಲ್ಲಿ JN.1 ವೈರಸ್‌ ಪತ್ತೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಕೊನೆಗೂ ರಾಜ್ಯಕ್ಕೆ ಕಾಲಿಟ್ಟಂಗಿದೆ. ರಾಜ್ಯಕ್ಕೆ ಜೆ.ಎನ್‌ 1 ಶಾಕ್‌ ಎದುರಾಗಿದೆ. ಹೌದು. ಮೈಸೂರಿನ 8 ಮಂದಿಯಲ್ಲಿ JN.1 ವೈರಸ್‌ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಹೊಸ ಸೋಂಕು ಸ್ಪೋಟದಿಂದ ರಾಜ್ಯದ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ 8 ಮಂದಿಯ ಸೋಂಕಿತರ ಸಂಪರ್ಕಿತರ ಮಾಹಿತಿ ಕಲೆ ಹಾಕಲಾಗುತ್ತಿದೆ. ಏನಿದು ಜೆಎನ್.1?ಬಿಎ.2.86 ಓಮಿಕ್ರಾನ್‌ನ ಒಂದು ಉಪತಳಿ. ಇದರ ಉಪತಳಿಯೇ ಜೆಎನ್.1 ಆಗಿದೆ. ಬಿಎ.2.86 ಹಾಗೂ ಜೆಎನ್.1 ಉಪತಳಿಗಳ ನಡುವೆ ಅಷ್ಟೇನು ವ್ಯತ್ಯಾಸವಿಲ್ಲ. […]

ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಯತ್ನಾಳ್

ವಿಜಯಪುರ: ಯತ್ನಾಳ್ ವಿರುದ್ಧ ದೂರು ನೀಡಲ್ಲ ಎಂದಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ ವಿಜಯಪುರದಲ್ಲಿ  ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದು, ಯಡಿಯೂರಪ್ಪ ಶಕುನಿ ಇದ್ದ ಹಾಗೆ ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಏನು ಹೇಳುತ್ತಾರೆ ಅದರ ಉಲ್ಟಾ ನಡೆದಿರುತ್ತದೆ. ವಿರೋಧ ಪಕ್ಷದ ನಾಯಕ ಆಗಲಿ ಎಂದಿದ್ದ ವಿಜಯೇಂದ್ರ ಹೈಕಮಾಂಡ್ ಬಳಿ ಪ್ಯಾಕ್ ಮಾಡಿಕೊಂಡು ಬಂದಿದ್ದ. ಅದಕ್ಕೆ ಆಗ ಯತ್ನಾಳ್ ವಿರೋಧ ಪಕ್ಷದ ನಾಯಕರಾಗಲು ತಕರಾರು ಇಲ್ಲ ಎಂದು ಹೇಳಿಕೆ ಕೊಟ್ಟಿದ್ದರು ಎಂದು […]

ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿಕೆಶಿ

ಬೆಂಗಳೂರು: ಬಡವರ ಮಕ್ಕಳು ಬೆಂಗಳೂರಿನ ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು, ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಕೇಳಿಕೊಂಡರು.  ಸೆಕ್ಯೂರಿಟಿ ಏಜೆನ್ಸಿ ಅವರು ಶಿಕ್ಷಕರನ್ನು ನೇಮಿಸುತ್ತಾರೆ ಎಂಬ ದೂರು ಬಂದಿದೆ. ಯಾರು ಯಾವ […]