ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ
ಮೈಸೂರು:
ನಂಜನಗೂಡು ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳನ್ನು ಬಂಧಿಸುವAತೆ ಆಗ್ರಹಿಸಿ ಇಂದು ಕರೆ ನೀಡಿದ ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್ ಮಾಡಿ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ,
ದೇವಸ್ಥಾನದ ಸುತ್ತಮುತ್ತಲಿನ ಬೀದಿಗಳಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿಲ್ಲ. ಬಂದ್‌ಗೆ ಬೆಂಬಲ ಕೊಡುವಂತೆ ನಂಜನಗೂಡಿನಲ್ಲಿ ನಂಜುAಡೇಶ್ವರನ ಭಕ್ತರು ಕರ ಪತ್ರ ಹಂಚುತ್ತಿದ್ದಾರೆ.
ಈ ಪ್ರಕರಣದ ಕುರಿತು ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್, ದೇವರಿಗೆ ಎರಚಿರುವುದು ಶುದ್ಧ ನೀರು ಎಂದು ಹೇಳಿಕೆ ನೀಡಿದ್ದರು. ನಾಗಚಂದ್ರ ದೀಕ್ಷಿತ್ ಎಡಿಸಿ ನೇತೃತ್ವದ ಶಾಂತಿ ಸಭೆಯಲ್ಲಿ ಭಾಗಿಯಾಗಿದ್ದು, ಸಭೆ ನಂತರ ಉತ್ಸವ ಮೂರ್ತಿಗೆ ಶುದ್ಧ ನೀರು ಎರಚಿದ್ದಾರೆ ಎಂದು ಹೇಳಿದ್ದರು. ಬಳಿಕ ತಮ್ಮ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದು ಹೇಳಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದಾರೆ.
ತಾಲೂಕು ದಂಡಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಒಂದು ಪತ್ರ ನೀಡಿ ಸಹಿ ಹಾಕುವಂತೆ ಒತ್ತಾಯಿಸಿದರು. ಹೀಗಾಗಿ ನಾವು ಮೂವರು ಆ ಪತ್ರಕ್ಕೆ ಸಹಿ ಹಾಕಿದ್ದೇವೆ. ನಾವು ಸರ್ಕಾರಿ ನೌಕರರು. ಹೀಗಾಗಿ ಅಧಿಕಾರಿಗಳ ಮಾತಿಗೆ ಬೆಲೆ ಕೊಟ್ಟು ಸಹಿ ಮಾಡಿದ್ದೇವೆ. ನಂಜನಗೂಡಿನ ಜನತೆಗೆ ಈ ಪ್ರಕರಣ ಗೊತ್ತಿದೆ. ಅವರೇ ಇತ್ಯರ್ಥ ಮಾಡಿಕೊಳ್ಳಬೇಕು ಎನ್ನುವ ಮೂಲಕ ಬಂದ್‌ಗೆ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ.
ಪ್ರಕರಣ ಏನು?
ಮಹಿಷಾಸುರ ವಧೆ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ ಆವರಣದಲ್ಲಿ ಸಂಪ್ರದಾಯದAತೆ ಪಟ್ಟಣದ ರಾಕ್ಷಸ ಮಂಟಪದಲ್ಲಿ ಮಹಿಷಾಸುರ ಬೃಹತ್ ರಂಗೋಲಿ ಬರೆದು, ಬೃಹದಾಕಾರದ ಬ್ಯಾನರ್ ಕಟ್ಟಲಾಗಿತ್ತು. ಪದ್ಧತಿಯಂತೆ ನಂಜುAಡೇಶ್ವರನ ಉತ್ಸವ ಮೂರ್ತಿಯನ್ನು ಹೊತ್ತವರು ಮಹಿಷಾಸುರನ ರಂಗೂಲಿಯ ಸುತ್ತ ಮೂರು ಸುತ್ತು ಸುತ್ತುಗಳನ್ನು ಹಾಕಿ ರಂಗೋಲಿಯನ್ನು ಅಳಿಸಿ, ಬ್ಯಾನರನ್ನು ಕಿತ್ತೆಸೆದು ತೇರಿನ ಬೀದಿಗಳಲ್ಲಿ ಮುಂದಕ್ಕೆ ಸಾಗಬೇಕು. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡ ಬಂದ ವಾಡಿಕೆಯಾಗಿತ್ತು.
ಮಹಿಷಾಸುರ ಸಂಹಾರಕ್ಕೆ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿತ್ತು. ಮಹಿಷಾಸುರನನ್ನು ರಾಜನೆಂದು ಪೂಜಿಸುತ್ತೇವೆ. ಈ ಆಚರಣೆ ನಿಲ್ಲಿಸುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ಭಕ್ತರು, ತಲಾತಲಾಂತರಗಳಿAದ ಆಚರಣೆ ಮಾಡಿಕೊಂಡು ಬಂದಿದ್ದೇವೆ ಎಂದು ವಿವರಿಸಿದ್ದರು. ಆದರೂ ಮೆರವಣಿಗೆ ಬಂದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ನೀರನ್ನು ಉತ್ಸವ ಮೂರ್ತಿ ಮೇಲೆ ಎರಚಿದ್ದರು.
ನಂಜನಗೂಡು ಅಂಧಕಾಸುರ ಆಚರಣೆಗೆ ಅಡ್ಡಿಪಡಿಸಿದ ವಿಚಾರದ ಕುರಿತು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಅವರು, ಬಾಲರಾಜು, ನಾರಾಯಣ, ನಾಗಭೂಷಣ್, ನಟೇಶ್ ಹಾಗೂ ಅಭಿ ಈ ಐವರ ಮೇಲೆ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.








































































































































































































































































































































































































































































































































































































































































































































































































































































































































































































































































































































