July 29, 2026
#ಬೆಂಗಳೂರು

ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಿಡಿದೇಳುವೆ

ಬೆಂಗಳೂರು:
ನನ್ನ ಸೋಲಿಗೆ ಯಾರು ಯಾರು ಕಾರಣ ಅಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಗೊತ್ತಿದೆ. ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ನಾನು ಸಿಡಿದೇಳಬೇಕಾಗುತ್ತದೆ ಎಂದು ಮಾಜಿ ಸಚಿವ ವಿ ಸೋಮಣ್ಣ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರಿಪಡಿಸುವುದು, ಬಿಡುವುದು ಅವರಿಗೆ ಸೇರಿದ್ದು ಎಂದರು.
ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊAಡು ಹೋಗ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.
ನಮ್ಮಂತಹವರ ಮೇಲೆ ಗದಾಪ್ರಹಾರ ಆದರೆ ಪರಿಣಾಮ ಆಗುತ್ತದೆ. ಎಷ್ಟರ ಮಟ್ಟಿಗೆ ಪರಿಣಾಮ ಆಗುತ್ತದೆ ಅಂತಾ ಚಿಂತನೆ ಮಾಡಬೇಕು. ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಹಿಂದಿನದ್ದೇ ನಡೆಸಿಕೊಂಡು ಹೋಗುತ್ತೇನೆ ಎಂಬುದನ್ನು ಬಿಡಬೇಕು. ಚಾಮರಾಜನಗರ ಜಿಲ್ಲೆಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು ವಿಜಯೇಂದ್ರ ರಾಜ್ಯಾಧ್ಯಕ್ಷರು, ಎಲ್ಲಿಗೆ ಬೇಕಾದರೂ ಹೋಗಲಿ ಎಂದು ಮಾತನಾಡಿದರು.
ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ. ವಿಪಕ್ಷ ನಾಯಕ ಅಶೋಕ್ ನನ್ನ ಭೇಟಿಗೆ ಪ್ರಯತ್ನ ಮಾಡಿದ್ದರು. ನಾನು ಮತ್ತು ಅಶೋಕ್ ಸ್ನೇಹಿತರು. ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್ ನನಗಿಂತ ೧೪ ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ಪ್ರೀತಿ, ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾAತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು ಎಂದರು.
ಇನ್ನು ವಿ ಸೋಮಣ್ಣ ಜನವರಿ ೮ರಂದು ನವದೆಹಲಿಗೆ ತೆರಳಲಿದ್ದಾರೆ. ೧೨ರ ವರೆಗೂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ಅವಧಿಯಲ್ಲಿ ವರಿಷ್ಠರಿಗೆ ಭೇಟಿಯಾಗಲಿದ್ದಾರೆ.

Leave a comment

Your email address will not be published. Required fields are marked *