July 28, 2026
#ಜಿಲ್ಲೆ

ಸರಣಿ ಅಪಘಾತ – ನಾಲ್ವರು ದುರ್ಮರಣ

ಹುಬ್ಬಳ್ಳಿ:
ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ನಡೆದಿದೆ.
ಬೆಂಗಳೂರು-ಮುAಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಧಾರವಾಡ ಎಸ್ಪಿ ಡಾ.ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.
ಈ ಘಟನೆಯಲ್ಲಿ ಹಾಸನ ಮೂಲದ ಮೂವರು ಹಾಗೂ ಬೆಂಗಳೂರಿನ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಮಣಿಕಂಠ (26), ಪವನ (23), ಚಂದನ (31) ಎಂದು ಗುರುತಿಸಲಾಗಿದೆ. ಈ ಮೂವರು ಪರಸ್ಪರ ಗೆಳೆಯರಾಗಿದ್ದು, ಹಾಸನದಿಂದ ಗೋವಾಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಮೃತಪಟ್ಟ ಮತ್ತೋರ್ವನನ್ನು ಹರೀಶ್ (34) ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನಿAದ ಶಿರಡಿಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.

Leave a comment

Your email address will not be published. Required fields are marked *