October 30, 2026
#ಜಿಲ್ಲೆ

ಅಭಿಮಾನಿ ಬೈಕ್‌ಗೆ ನಟ ಯಶ್ ಬೆಂಗಾವಲು ವಾಹನ ಡಿಕ್ಕಿಚಿಕಿತ್ಸೆ ಫಲಿಸದೆ ಯುವಕ ಸಾವು

ಗದಗ:
ರಾಕಿಂಗ್ ಸ್ಟಾರ್ ಯಶ್ ಅವರ ೩೮ನೇ ಹುಟ್ಟಹಬ್ಬದ ದಿನವೇ ಆಘಾತದ ಮೇಲೆ ಆಘಾತವಾಗಿದೆ. ಬರ್ತ್ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಮೂವರು ಅಭಿಮಾನಿಗಳು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ಮೂವರು ಅಭಿಮಾನಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಇನ್ನು ಆಸ್ಪತ್ರೆಗೆ ಭೇಟಿ ನೀಡಿ ಯಶ್ ವಾಪಸ್ ತೆರಳುತ್ತಿದ್ದಾಗ ಮತ್ತೊಂದು ಅವಘಡ ಸಂಭವಿಸಿತ್ತು. ಯಶ್‌ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿದ್ದಾರೆ. ಮೃತ ನಿಖಿಲ್ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿಯಾಗಿದ್ದರು.
ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ನಿಖಿಲ್ ಸ್ಕೂಟಿ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ನಿಖಿಲ್‌ನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಮೃತಪಟ್ಟಿದ್ದಾರೆ. ಹುಟ್ಟಹಬ್ಬದ ದಿನವೇ ಅಭಿಮಾನಿಗಳ ಸಾವು ಯಶ್‌ಗೆ ಅಘಾತ ತಂದಿದೆ.
ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ರಾಕಿಂಗ್ ಸ್ಟಾರ್ ಯಶ್ ೩೮ವರ್ಷದ ಬರ್ತ್ ಡೇ ಸಂಭ್ರಮ ಹಿನ್ನೆಲೆ ತಡರಾತ್ರಿ ಅಭಿಮಾನಿಗಳೆಲ್ಲ ಸೇರಿಕೊಂಡು ಯಶ್ ಅವರ ದೊಡ್ಡ ಕಟೌಟ್ ಕಟ್ಟಲು ಮುಂದಾಗಿದ್ರು. ನೀಲಗಿರಿ ತೋಪಿನಲ್ಲಿ ಕಟೌಟ್ ಕಟ್ಟಿ ಮೇಲೆತ್ತುವಾಗ ಇದ್ದಕ್ಕಿದ್ದಂತೆ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದರು. ಹಾಗೂ ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳನ್ನು ಗದಗ ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a comment

Your email address will not be published. Required fields are marked *