ಜ.16ರಿಂದ 3 ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್
ಬೆಂಗಳೂರು:
ಲೋಡ್ ಟೆಸ್ಟಿಂಗ್ ಮಾಡುವ ಸಲುವಾಗಿ ಜನವರಿ 16 ರಿಂದ ಮೂರು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ.
ಜನವರಿ 16ರ ರಾತ್ರಿ 11 ಗಂಟೆಯಿAದ ಜನವರಿ 19 ರ ಬೆಳಗ್ಗೆ 11 ಗಂಟೆಯವರೆಗೆ ಈ ಫ್ಲೈಓವರ್ ಕ್ಲೋಸ್ ಆಗಲಿದೆ. ಈ ಹಿನ್ನೆಲೆ ಎಲ್ಲಾ ವಾಹನ ಸವಾರರು ಸರ್ವಿಸ್ ರಸ್ತೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದರಿಂದಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ ಬೃಹತ್ ವಾಹನ ದಟ್ಟಣೆ ಉಂಟಾಗಲಿದೆ ಎಂದು ವರದಿಗಳು ತಿಳಿಸಿವೆ.
15 ಮೀಟರ್ ಅಗಲದ, 4.2 ಕಿಮೀ ಉದ್ದದ ಮೇಲ್ಸೇತುವೆ ಪೀಣ್ಯದಲ್ಲಿ ಪ್ರಾರಂಭವಾಗಿ ತುಮಕೂರು ರಸ್ತೆಯ ನಾಗಸಂದ್ರದಲ್ಲಿ ಕೊನೆಗೊಳ್ಳುತ್ತದೆ. ೨೦೨೨ರಲ್ಲಿ ಪೀಣ್ಯ ಫ್ಲೈಓವರ್‌ನ ಎರಡು ಪಿಲ್ಲರ್‌ನ ಕೇಬಲ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಹೆವಿ ವೆಹಿಕಲ್‌ಗಳ ಓಡಾಟಕ್ಕೆ ಬ್ರೇಕ್ ಹಾಕಲಾಗಿತ್ತು.
ಈ ಕುರಿತು ಎನ್‌ಹೆಚ್‌ಎಐ ಯೋಜನಾ ನಿರ್ದೇಶಕ ಜಯಕುಮಾರ್ ಮಾತನಾಡಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಪ್ರಿಸ್ಟ್ರೆಸ್ಡ್ ಕೇಬಲ್‌ಗಳ ಸಾಮರ್ಥ್ಯವನ್ನು ನಿರ್ಣಯಿಸಲು ನಾವು ಲೋಡ್ ಪರೀಕ್ಷೆಗಳನ್ನು ನಡೆಸಬೇಕಾಗಿದೆ. ಲೋಡ್ ಪರೀಕ್ಷೆಯ ಸಮಯದಲ್ಲಿ ತಲಾ ೩೨ ಟನ್‌ಗಳನ್ನು ಹೊತ್ತ 8 ಟ್ರಕ್‌ಗಳನ್ನು 48 ಗಂಟೆಗಳಿಗೂ ಹೆಚ್ಚು ಕಾಲ ಫ್ಲೈಓವರ್ ಮೇಲೆ ಓಡಿಸಲಾಗುತ್ತದೆ. ನಾವು ಎರಡು ಸ್ಪ್ಯಾನ್‌ಗಳನ್ನು ಮಾತ್ರ ಪರಿಶೀಲಿಸುತ್ತೇವೆ. ಇದಕ್ಕಾಗಿ 105-106 ಮತ್ತು 116-1118 ಕಂಬಗಳನ್ನು ಸಂಪರ್ಕಿಸುವ ವ್ಯಾಪ್ತಿಯನ್ನು ಎನ್‌ಹೆಚ್‌ಎಐ ಗುರುತಿಸಿದೆ ಎಂದು ತಿಳಿಸಿದರು.
ಈ ಫ್ಲೈಓವರ್ ೨೩ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವುದಲ್ಲದೇ ಬೆಂಗಳೂರು ಮತ್ತು ರಾಜ್ಯದ ಇತರೆ ಜಿಲ್ಲೆಗಳಿಗೆ ಒಂದು ರೀತಿಯ ಆರ್ಥಿಕ ಚೇತರಿಕೆಯ ಕೊಂಡಿ ಆಗಿದೆ. ಪೀಣ್ಯ ಮೇಲ್ಸೇತುವೆ ಒಟ್ಟು 120 ಪಿಲ್ಲರ್‌ಗಳನ್ನು ಒಳಗೊಂಡಿದೆ.








































































































































































































































































































































































































































































































































































































































































































































































































































































































































































































































































































































