ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸೂಚನೆ
ಬೆಂಗಳೂರು:
ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡುವಂತೆ ಎಲ್ಲಾ ಟ್ರಾಫಿಕ್ ಪೊಲೀಸ್ ಇಲಾಖೆ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ದಂಡ ವಿಧಿಸುವ ಕ್ರಮವನ್ನೂ ಕೈಗೊಳ್ಳುತ್ತಿದ್ದಾರೆ. ಹೀಗಿದ್ದರೂ ಒಂದಷ್ಟು ವಾಹನ ಸವಾರರು ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವುದು ಕಂಡುಬAದಿದೆ.
ಇAತಹವರ ವಿರುದ್ಧ ಕ್ರಮಕ್ಕೆ ಮುಂದಾದ ಸಂಚಾರಿ ಪೊಲೀಸರು, ಡಿಎಲ್ ಅಮಾನತು ಮಾಡಲು ನಿರ್ಧರಿಸಿದ್ದಾರೆ. 2974 ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸಂಚಾರಿ ಪೊಲೀಸರು ಬೇರೆಬೇರೆ ರಾಜ್ಯ ಮತ್ತು ರಾಜ್ಯದ ಜಿಲ್ಲಾ ಸಾರಿಗೆ ಕಚೇರಿಗೆ ಕಳುಹಿಸಲಾಗಿದ್ದು, ಈ ಪೈಕಿ 711 ಜನರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲಾಗಿದೆ. ಉಳಿದ ೨೨೬೩ ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತ್ತುಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ.
ಟ್ರಾಫಿಕ್ ನಿಯಮ ಉಲ್ಲಂಘಟನೆ ಮಾಡಿ ಸಂಚರಿಸುವುದರಿAದ ಅಪಘಾತದಂತಹ ಅವಘಡಗಳು ಸಂಭವಿಸುತ್ತಿದ್ದು, ಅನೇಕರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರಿಗೆ ಗಾಯಗಳಾಗಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಹೀಗಾಗಿ ಟ್ರಾಫಿಕ್ ನಿಯಮ ಪಾಲಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವವರಿಂದ ದಂಡ ವಸೂಲಿ ಕೂಡ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಂತೂ ರೂಲ್ಸ್ ಬ್ರೇಕ್ ಪ್ರಕರಣಗಳು ಬಹಳಷ್ಟು ಆಗುತ್ತಿವೆ. ಇದೇ ಕಾರಣಕ್ಕೆ ಪೊಲೀಸರು ಮಾತ್ರವಲ್ಲದೆ, ಕೆಲವು ಕಾಲೇಜು ವಿದ್ಯಾರ್ಥಿಗಳು ಬೆಂಗಳೂರಿನ ಸಿಗ್ನಲ್‌ಗಳಲ್ಲಿ ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಂಗ್ ರೂಟ್‌ನಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ವಡೆ ಕೊಟ್ಟು “ನೀವು ರಾಂಗ್ ರೂಟ್‌ನಲ್ಲಿ ಬಂದರೆ ನಿಮ್ಮ ಮನೆಯವರು ತಿಥಿ ವಡೆ ತಿನ್ನಬೇಕಾಗುತ್ತದೆ” ಎಂದು ಹೇಳಿ ಟ್ರಾಫಿಕ್ ನಿಯಮ ಪಾಲಿಸುವಂತೆ ಮನವಿ ಮಾಡಿದ್ದರು.














































































































































































































































































































































































































































































































































































































































































































































































































































































































































































































































































































































