July 29, 2026
#ಬೆಂಗಳೂರು

2017ರ ಪ್ರಕರಣದಲ್ಲೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು

ಬೆಂಗಳೂರು:
2017ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬAಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ 30ನೇ ಎಸಿಎಂಎA ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಇತ್ತೀಚೆಗೆ ನಾಮಫಲಕ ಧ್ವಂಸ ಪ್ರಕರಣದಲ್ಲಿ ಜೈಲು ಸೇರಿದ್ದ ನಾರಾಯಣಗೌಡ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ 2017ರ ಹಳೇ ಕೇಸ್ ಮೇಲೆ ಬಂಧಿಸಿದ್ದರು. 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬAಧ ನಾರಾಯಣಗೌಡ ಅವರನ್ನು ಜನವರಿ 9ರಂದು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದರು. ಇನ್ನು ನಾರಾಯಣಗೌಡ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ್ದ ಬೆಂಗಳೂರಿನ ೩೦ನೇ ಎಸಿಎಂಎA ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.
ಪ್ರಕರಣದ ಹಿನ್ನೆಲೆ
2017ರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊರೊನಾ ಸಮಯದಲ್ಲಿ ರಾಷ್ಟ್ರೀಯ ವಿಪ್ಪತ್ತು ನಿರ್ವಹಣ ಕಾಯ್ದೆಯಡಿ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ವಿಚಾರಣಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. ಹೀಗಾಗಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದರು.

Leave a comment

Your email address will not be published. Required fields are marked *