ಹೆಚ್‌ಡಿಕೆ ಸ್ಪರ್ಧೆ –ಚರ್ಚೆ ಮಾಡಿ ನಿರ್ಧಾರ
ಬೆಂಗಳೂರು :
ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಂಡ್ಯದಿAದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರವಾಗಿ ಕಾರ್ಯಕರ್ತರು, ನಾಯಕರ ಬಳಿ ಚರ್ಚೆ ಮಾಡಿ ತೀರ್ಮಾನ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಡ್ಯದಿAದ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಅವರು ರಾಜ್ಯಮಟ್ಟದ ನಾಯಕರು. ಕುಮಾರಸ್ವಾಮಿ ಅವರನ್ನು ಜನ ಪ್ರೀತಿ ಕೊಟ್ಟು ಬೆಳೆಸಿದ್ದಾರೆ. ಹಲವಾರು ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ನಿಲ್ಲಬೇಕು ಎಂಬ ಬೇಡಿಕೆ ಇದೆ.ಅದರಲ್ಲಿ ಮಂಡ್ಯ ಜಿಲ್ಲೆ ಕೂಡಾ ಒಂದು. ಸ್ಪರ್ಧೆ ಮಾಡುವ ವಿಚಾರವಾಗಿ ಪಕ್ಷದ ಕಾರ್ಯಕರ್ತರು, ನಾಯಕರು ಚರ್ಚೆ ಮಾಡುತ್ತೇವೆ. ಸೂಕ್ತ ಸಮಯದಲ್ಲಿ ಸೂಕ್ತವಾದ ನಿರ್ಧಾರ ತಿಳಿಸುತ್ತೇವೆ ಎಂದರು.
ಮಂಡ್ಯದಲ್ಲಿ ಸುಮಲತಾ ಅವರೇ ಸ್ಪರ್ಧೆ ಮಾಡುತ್ತಾರೆ ಎಂಬ ಆಪ್ತರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಪ್ತರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ಕೊಟ್ಟಿರುವ ಬಗ್ಗೆ ಹಲವಾರು ಕಡೆ ಮಾತನಾಡಿದ್ದಾರೆ. ಲೋಕಸಭೆ ಚುನಾವಣೆ ವಿಚಾರವಾಗಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡುವ ಹೋಗುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.ಸುಮಲತಾ ಅವರು ಬಿಜೆಪಿ ಜೊತೆ ಇದ್ದೇವೆ ಎಂದು ಹೇಳಿದಾಗ ಪ್ರತಿಯೊಬ್ಬರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ನಾವು ಎನ್‌ಡಿಎ ಭಾಗವಾಗಿ ಇದ್ದೇವೆ. ಹೀಗಾಗಿ ಎಲ್ಲರ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಜವಾಬ್ದಾರಿ ಇದೆ. ಅದನ್ನು ಮಾಡುತ್ತೇವೆ ಎಂದರು.













































































































































































































































































































































































































































































































































































































































































































































































































































































































































































































































































































































