October 28, 2026
#ಬೆಂಗಳೂರು

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬಸ್ ಕ್ಲೀನರ್ ಅರೆಸ್ಟ್

ನೆಲಮಂಗಲ:
ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರ ಎಸಗಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ದೊಡ್ಡಬಳ್ಳಾಪುರದ ಆನಂದ್ (24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವಾರದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಪೋಷಕರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಸಿದ್ದರು. ಮೊಬೈಲ್ ಕರೆ ಆಧಾರದ ಮೇಲೆ ಯಲಹಂಕ ಬಳಿ ಬಾಡಿಗೆ ಮನೆಯಲ್ಲಿರಿಸಿದ್ದ 14 ವರ್ಷದ ಬಾಲಕಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸಂತ್ರಸ್ತ ಬಾಲಕಿ ದಾಬಸ್ ಪೇಟೆಯಿಂದ ತ್ಯಾಮಗೊಂಡ್ಲುನಲ್ಲಿರುವ ಶಾಲೆಗೆ ದಿನನಿತ್ಯ ಖಾಸಗಿ ಬಸ್‌ನಲ್ಲಿ ಬಾಲಕಿ ಹೋಗಿ ಬರುತ್ತಿದ್ದಳು.
ದಿನನಿತ್ಯ ಖಾಸಗಿ ಬಸ್ ದಾಬಸ್ ಪೇಟೆ-ದೊಡ್ಡಬಳ್ಳಾಪುರ ಮರ‍್ಗವಾಗಿ ಬರುತ್ತಿದ್ದ ಬಸ್‌ನಲ್ಲಿ ಅರೋಪಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು. 2021ರಲ್ಲಿ ಬ್ಯಾಡರಹಳ್ಳಿ ಠಾಣೆಯಲ್ಲಿ ಇದೇ ರೀತಿ ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷದ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದನು.

Leave a comment

Your email address will not be published. Required fields are marked *