ಹೆಚ್‌ಡಿಕೆಯನ್ನು ಭೇಟಿಯಾಗಿ ಧನ್ಯವಾದ ಹೇಳಿದ ಪ್ರತಾಪ್ ಸಿಂಹ
ರಾಮನಗರ: ಲೋಕಸಭಾ ಚುನಾವಣೆ ಹತ್ತಿರ ಹಿನ್ನೆಲೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ತೋಟದ ಮನೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಧನ್ಯವಾದ ಹೇಳಿದ್ದಾರೆ.
ಬಿಡದಿಯ ಕೇತಗಾನಹಳ್ಳಿ ತೋಟದ ಮನೆಗೆ ಆಗಮಿಸಿದ್ದ ಸಂಸದ ಪ್ರತಾಪ್ ಸಿಂಹ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಕೆಲಕಾಲ ಚರ್ಚೆ ನಡೆಸಿದರು.
ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಮರ ಕಡಿದ ಪ್ರಕರಣದಲ್ಲಿ ವಿಕ್ರಂ ಸಿಂಹ ಪರವಾಗಿ ಹೆಚ್ಡಿಕೆ ಬ್ಯಾಟಿಂಗ್ ಮಾಡಿದ್ದರು. ಹಾಗಾಗಿ ಇಂದು ಖುದ್ದು ಭೇಟಿಯಾಗಿ ಸಂಸದ ಪ್ರತಾಪ್ ಸಿಂಹ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಂಚಿಕೊಂಡಿರುವ ಪ್ರತಾಪ್ ಸಿಂಹ, ಕಷ್ಟಕಾಲದಲ್ಲಿ ಸತ್ಯಸಂಗತಿ ಜನರ ಮುಂದಿಟ್ಟು ಬೆನ್ನಿಗೆ ನಿಂತಿದ್ದಕ್ಕೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.













































































































































































































































































































































































































































































































































































































































































































































































































































































































































































































































































































































