ಡಿಕೆ ಶಿವಕುಮಾರ್ ಸಿಎಂ ಆಗಲಿ
ಬೆಂಗಳೂರು: ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಂದೆ ಸಿಎಂ ಆಗಲಿ ಎಂದು ಮಾಜಿ ಡಿಸಿಎಂ, ಶಾಸಕ ಅಶ್ವಥ್ ನಾರಾಯಣ್ ಹಾರೈಸಿದ್ದಾರೆ. ಜನರನ್ನ ನೇರವಾಗಿ ತಲುಪುವ ಕೆಲಸ ಮಾಡುತ್ತಿದ್ದಾರೆ. ಈಗ ಡಿಸಿಎಂ ಆಗಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅಂತಾ ಆಶಿಸುತ್ತೇನೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಕೂಡ ಆಗಲಿ ಎಂದು ಆಶಿಸುತ್ತೇನೆ ಎಂದು ಹಾರೈಸಿದರು. ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ ಐದನೇ ಆವೃತ್ತಿಯ ಮಲ್ಲೇಶ್ವರ, ಗಾಂಧಿನಗರ, ಚಾಮರಾಜಪೇಟೆ ಸೇರಿದಂತೆ ಮೂರು ವಿಧಾನಸಭೆ ಕ್ಷೇತ್ರದ ಕಾರ್ಯಕ್ರಮಕ್ಕೆ ಚಾಲನೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು.
ಕರ್ನಾಟಕ ಸರ್ಕಾರ ಉತ್ತಮವಾದ ಕಾರ್ಯಕ್ರಮ ರೂಪಿಸಿದ್ದು, ನಮ್ಮ ಪಶ್ಚಿಮ ವಲಯದಲ್ಲಿ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಕಾರ್ಯಕ್ರಮ ರೂಪಿಸಿದ್ದಾರೆ. ಜನರ ಕುಂದುಕೊರತೆಗಳನ್ನ ಆಲಿಸುತ್ತಿದ್ದು, ಅವರಿಗೆ ಹೃತ್ಪೂರ್ವಕವಾದ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ವಸತಿ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಿ
ಬೆಂಗಳೂರು ಭರವಸೆಯ ನಗರ. ಬದುಕು ಕಟ್ಟಿಕೊಳ್ಳೊಕೆ ಈ ಕನಸಿನ ನಗರದಲ್ಲಿ ಹಲವಾರು ವರ್ಷಗಳಿಂದ ಜನರು ನೆಲೆಸಿದ್ದಾರೆ. ಬಹುದೊಡ್ಡ ಕೀರ್ತಿ ಇದೆ, ಇದರ ಜೊತೆಗೆ ಈ ನಗರಕ್ಕೆ ಮೂಲಭೂತ ಸೌಕರ್ಯ ಕೊರತೆ ಇದೆ. ಶ್ರಮಿಕರು ಬಹಳ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಇಲ್ಲಿ ಬೆಂಗಳೂರು ನಗರದಲ್ಲಿ ಶ್ರಮಿಕರು ತುಂಬಾ ಜನ ಇದೆ ಬಡವರಿದ್ದಾರೆ. ಅವರ ಕೈ ಹಿಡಿಯುವಂತಹ ಕೆಲಸ ಡಿಕೆ ಶಿವಕುಮಾರ್ ಮಾಡಲಿ. ವಸತಿ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಿ ಎಂದು ಸರ್ಕಾರಕ್ಕೆ ಅಶ್ವಥ್ ನಾರಾಯಣ್ ಸಲಹೆ ನೀಡಿದರು.
ಸಮಸ್ಯೆ ಆಲಿಸಿ ಬಗೆಹರಿಸುತ್ತೇನೆ
ವೇದಿಕೆ ಮೇಲೆ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ ನಾನು ಈಗಾಗಲೇ 13 ಕ್ಷೇತ್ರಗಳ ಸಮಸ್ಯೆ ಆಲಿಸಿದ್ದೇನೆ. ಇವತ್ತು 3 ಕ್ಷೇತ್ರಗಳ ಸಮಸ್ಯೆ ಆಲಿಕೆ ಮಾಡ್ತಿದ್ದೇನೆ. ಎಲ್ಲಾ ಸಮಸ್ಯೆಗಳಿಗೆ ಉತ್ತರ ತೆಗೆದುಕೊಂಡು ಬಂದಿದ್ದೇನೆ. ಮೂವರು ಶಾಸಕರ ನೇತೃತ್ವದಲ್ಲಿ ಸಮಸ್ಯೆ ಆಲಿಸಿ ಸಮಸ್ಯೆಯನ್ನ ಬಗೆಹರಿಸುತ್ತೆನೆ ಎಂದು ಹೇಳಿದರು.
ಶೇಷಾದ್ರಿಪುರಂನ ಶಿರೂರು ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ , ದಿನೇಶ್ ಗುಂಡೂರಾವ್ ಹಾಗೂ ಬಿಜೆಪಿ ಶಾಸಕ ಡಾ. ಅಶ್ವತ್ಥ ನಾರಾಯಣ್ ಭಾಗಿಯಾಗಿದ್ರು.








































































































































































































































































































































































































































































































































































































































































































































































































































































































































































































































































































































