October 29, 2026
#ಬೆಂಗಳೂರು

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ

ಬೆಂಗಳೂರು:
ಹಿಟ್ ಅಂಡ್ ರನ್ ನಯಾ ರೂಲ್ಸ್ ಜಾರಿಗೆ ಮುಂದಾದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಲಾರಿ ಓನರ್ಸ್ ಅಸೋಸಿಯೇಷನ್ ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ಮಧ್ಯರಾತ್ರಿಯಿಂದಲೇ ಲಾರಿ ಸಂಘಟನೆಗಳು ಮುಷ್ಕರ ಕೈಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಕೇಂದ್ರದ ಹಿಟ್ ಅಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿAದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಇನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾದ ಹಿನ್ನೆಲೆ, ಕಾನೂನು ಹಿಂಪಡೆಯುವAತೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ. ಅತ್ಯಗತ್ಯ ಸೇವೆಗಳನ್ನ ಹೊರತುಪಡಿಸಿ ಕೆಲ ಸೇವೆಗಳು ವಿಳಂಭವಾಗುವ ಸಾಧ್ಯತೆ ಇದೆ.

Leave a comment

Your email address will not be published. Required fields are marked *