July 29, 2026
#ಜಿಲ್ಲೆ

ಓಮಿನಿ ಕಾರು-ಟ್ರ‍್ಯಾಕ್ಟರ್ ನಡುವೆ ಡಿಕ್ಕಿ;ಮೂವರು ಸಾವು

ದಾವಣಗೆರೆ:
ಭತ್ತದ ಹುಲ್ಲು ತುಂಬಿಕೊAಡು ಹೋಗುತ್ತಿದ್ದ ಟ್ರ‍್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಹಾಗೂ ಗಾಯಾಳುಗಳು ಚನ್ನಗಿರಿ ತಾಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಸಂತೆಬೆನ್ನೂರು ಕಡೆಯಿಂದ ಚನ್ನಗಿರಿಗೆ ಒಮಿನಿಯಲ್ಲಿ ಒಂದೇ ಕುಟುಂಬಸ್ಥರು ಹೋಗುವಾಗ ಎದುರಿಗೆ ಭತ್ತದ ಹುಲ್ಲು ತುಂಬಿಕೊAಡು ಬರುತ್ತಿದ್ದ ಟ್ರ‍್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ.
ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು. ಗಾಯಾಳುಗಳಿಗೆ ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬAಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a comment

Your email address will not be published. Required fields are marked *