September 14, 2026
#ಜಿಲ್ಲೆ

ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ: ವಾರದಲ್ಲಿ 4 ಬಾರಿ ವಿಮಾನ ಸಂಚಾರ ಆರಂಭ 

https://imasdk.googleapis.com/js/core/bridge3.612.0_en.html#goog_909745545

ಹುಬ್ಬಳ್ಳಿ: ಹುಬ್ಬಳ್ಳಿ- ಪುಣೆ- ಹುಬ್ಬಳ್ಳಿ ಮಾರ್ಗವಾಗಿ ಇನ್ನು ವಾರಕ್ಕೆ ನಾಲ್ಕು ವಿಮಾನಗಳು ನಿರಂತರವಾಗಿ ಸಂಚರಿಸಲಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆ ಮೇರೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಹುಬ್ಬಳ್ಳಿ- ಪುಣೆ-ಹುಬ್ಬಳ್ಳಿ ಮಾರ್ಗವಾಗಿ ವಿಮಾನ ಸಂಚಾರ ಆರಂಭಕ್ಕೆ ಕ್ರಮ ಕೈಗೊಂಡಿದೆ. 

2024 ಫೆಬ್ರವರಿ 2ರಿಂದ ಈ ವಾಯು ಮಾರ್ಗದಲ್ಲಿ ನಾಲ್ಕು ವಿಮಾನಗಳು ಸಂಚಾರ ಪುನರಾರಂಭ ಮಾಡಲಿವೆ ಎಂದು ಸಚಿವ ಪ್ರಹ್ಲಾದ್ ಜೋಶಿ ಅವರು ಟ್ವೀಟ್ ಮಾಡಿದ್ದಾರೆ. 

ತಮ್ಮ ಕೋರಿಕೆ- ಪ್ರಸ್ತಾವನೆ ಪರಿಗಣಿಸಿ ಹುಬ್ಬಳ್ಳಿ- ಪುಣೆ- ಹುಬ್ಬಳ್ಳಿ ಮಾರ್ಗವಾಗಿ ವಿಮಾನ ಸಂಚಾರ ಆರಂಭಿಸಿದ್ದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ 6eಯ ಆಡಳಿತ ಮಂಡಳಿಗೆ ಸಚಿವ ಪ್ರಹ್ಲಾದ್ ಜೋಶಿ ಅವರು ಧನ್ಯವಾದ ತಿಳಿಸಿದ್ದಾರೆ. 

Leave a comment

Your email address will not be published. Required fields are marked *