ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತುಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು
ಬೆಂಗಳೂರು:
ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಟಪುದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಎಚ್‌ಕೆ ಪಾಟೀಲ್ ಹಾಗೂ ಹೆಚ್‌ಸಿ ಮಹಾದೇವಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿ ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಬಗ್ಗೆ ವಿವರಿಸಿದರು.
ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಮೇರೆಗೆ ಒಳ ಮೀಸಲಾತಿಗಾಗಿ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ನಿರ್ಧರಿಸಿದ್ದು, ಸಂವಿಧಾನಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ಕೊಡಲು ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ.
ಇನ್ನು ಸಂಪುಟ ಸಭೆ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಎಚ್‌ಕೆ ಪಾಟೀಲ್ ಹಾಗೂ ಡಾ ಹೆಚ್‌ಸಿ ಮಹಾದೇವಪ್ಪ, ೨ ದಶಕಗಳಿಂದ ದಲಿತರ ಒಳಪಂಗಡಗಳು ಅನ್ಯಾಯ ಆಗಿದೆ ಒಳಮೀಸಲಾತಿ ಬೇಕು ಎಂದು ಕೇಳುತ್ತಿದ್ದರು. ಹೀಗಾಗಿ ನ್ಯಾ.ಸದಾಶಿವ ಆಯೋಗದ ವರದಿ ನೀಡಲು ಸರ್ಕಾರ ಕೇಳಿತ್ತು. ಸದಾಶಿವ ಆಯೋಗದ ವರದಿ ಅಸೆಂಬ್ಲಿಯಲ್ಲಿ ಪ್ಲೇಸ್ ಆಗಲೇ ಇಲ್ಲ. ಸದಾಶಿವ ಆಯೋಗದ ವರದಿಯನ್ನು ನಾವು ಅಧಿಕಾರಕ್ಕೆ ಬಂದಾಗ ಮಂಡನೆ ಮಾಡ್ತೀವಿ ಅಂತ ಪ್ರಣಾಳಿಕೆಯಲ್ಲಿ ಹಾಕಿದ್ದೆವು. ಬಿಜೆಪಿಯ ಸರ್ಕಾರ ತರಾತುರಿಯಲ್ಲಿ ಕಾನೂನು ಸಚಿಬರ ನೇತೃತ್ವದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿದ್ದರು. ನ್ಯಾ.ಸದಾಶಿವ ಆಯೋಗದ ವರದಿ ಕಮಿಟಿ ಅಪ್ರಸ್ತುತ ಹಾಗೂ ಮುಕ್ತಾಯ ಆಗಿದೆ ಅಂತ ಕ್ಯಾಬಿನೆಟ್ ನಿರ್ಣಯ ಮಾಡಿದ್ರು ಎಂದು ಹೇಳಿದರು.
ಇದರೊಂದಿಗೆ ಒಳ ಮೀಸಲಾತಿ iದೀಗ ಕೇಂದ್ರ ಸರ್ಕಾರದ ಅಂಗಳಕ್ಕೆ ತಲುಪಿದೆ. ಹಿಂದೆ ಬಿಜೆಪಿ ಸರ್ಕಾರ ವರ್ಗೀಕರಣ ಮಾಡಿ ಆದೇಶ ಮಾಡಿತ್ತು. ಸದ್ಯ ಈ ವಿಚಾರ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.














































































































































































































































































































































































































































































































































































































































































































































































































































































































































































































































































































































