July 28, 2026
#ಬೆಂಗಳೂರು

ಫೆಬ್ರವರಿ 16 ರಂದು ರಾಜ್ಯ ಬಜೆಟ್

ಬೆಂಗಳೂರು:
ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಈ ಸಂಬAಧ ಇಂದಿನ ಸಚಿವ ಸಂಪುಟಲ್ಲಿ ಚರ್ಚೆ ನಡೆದಿದ್ದು, ಮುಂದಿನ ತಿಂಗಳು ಅಂದರೆ ಫೆಬ್ರವರಿ 12 ರಿಂದ ಫೆಬ್ರವರಿ ೨೩ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಫೆಬ್ರವರಿ 16 ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ತೀರ್ಮಾನಿಸಲಾಗಿದೆ.
ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ಅಂದರೆ ಫೆ.12 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಮುಂದೆ ಲೋಕಸಭಾ ಚುನಾವಣೆ ಬರಲಿದೆ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್ನಿಂದಲೇ ಜಾರಿಯಾಗುವ ಸಾಧ್ಯತೆ ಇದೆ.

Leave a comment

Your email address will not be published. Required fields are marked *