July 28, 2026
#ಜಿಲ್ಲೆ

ಮಠಗಳು ಸಾಮರಸ್ಯ ಬೆಳೆಸುವ ಕೇಂದ್ರವಾಗಲಿ

ಉಡುಪಿ:
ಕೃಷ್ಣ ಮಠ ಸಾಮಾಜಿಕವಾಗಿ, ಧಾರ್ಮಿಕವಾಗಿ ತೊಡಗಿಸಿಕೊಂಡ ಕೇಂದ್ರ. ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಹೇಳಿದರು.
ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು. ಪುತ್ತಿಗೆ ಶ್ರೀಗಳು ಧಾರ್ಮಿಕವಾಗಿ ದೇಶ-ವಿದೇಶದಲ್ಲಿ ತೊಡಗಿಸಿಕೊಂಡವರು ಎಂದರು.
ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು. ಹಿಂದಿನಿAದಲೂ ನಾನು ಕೃಷ್ಣ ಮಠಕ್ಕೆ ಸಂಬAಧಪಟ್ಟ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಠ ಕೇವಲ ಧಾರ್ಮಿಕವಾಗಿ ಕಾರ್ಯಾಚರಿಸದೆ, ಶೈಕ್ಷಣಿಕ, ಸಾಮಾಜಿಕವಾಗಿ ಕೂಡಾ ಕೆಲಸ ಮಾಡುತ್ತಿದೆ ಎಂದು ಹೇಳಿದರು.

Leave a comment

Your email address will not be published. Required fields are marked *