September 13, 2026
#ಜಿಲ್ಲೆ

ಯುವತಿ ನೇಣಿಗೆ ಶರಣು- ಕಾರಣ ನಿಗೂಢ

ಶಿವಮೊಗ್ಗ:
ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಸಂಬAಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬAಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *