May 30, 2026
#ರಾಷ್ಟ್ರೀಯ

ಅಯೋಧ್ಯೆ ತಲುಪಿದ 1,265 ಕೆಜಿ ತೂಕದ ಪ್ರಸಾದದ ಲಡ್ಡು

ಅಯೋಧ್ಯೆ (ರಾಮಮಂದಿರ):
ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗಾಗಿ ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇಶ-ವಿದೇಶಗಳಿಂದ ಅಯೋಧ್ಯೆಗೆ ಉಡುಗೊರೆ, ಪ್ರಸಾದದ ಮಹಾಪೂರವೇ ಹರಿದುಬರುತ್ತಿದೆ. ಭಕ್ತರೊಬ್ಬರು ತಯಾರಿಸಿದ್ದ 1265 ಕೆಜಿ ತೂಕದ ಪ್ರಸಾದದ ಲಡ್ಡು ಕೂಡ ಅಯೋಧ್ಯೆ ತಲುಪಿದೆ.
ಈ ಬೃಹತ್ ಪ್ರಮಾಣದ ಲಡ್ಡನ್ನು ಹೊತ್ತು ಹೈದರಾಬಾದ್‌ನಿಂದ ಹೊರಟಿದ್ದ ವಾಹನವು ಅಯೋಧ್ಯೆಯ ಕರಸೇವಕಪುರ ತಲುಪಿದೆ. ಈ ಲಡ್ಡನ್ನು ತಯಾರಿಸಿದ್ದು ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್.
ಶ್ರೀರಾಮ ಕ್ಯಾಟರಿಂಗ್ ಸರ್ವಿಸಸ್ ಮಾಲೀಕ ಎನ್.ನಾಗಭೂಷಣ ರೆಡ್ಡಿ ಮಾತನಾಡಿ, ದೇವರು ನನ್ನ ವ್ಯಾಪಾರ ಮತ್ತು ನನ್ನ ಕುಟುಂಬವನ್ನು ಆಶೀರ್ವದಿಸಿದ್ದಾನೆ. ನಾನು ಬದುಕಿರುವವರೆಗೆ ಪ್ರತಿದಿನ ರಾಮಮಂದಿರಕ್ಕಾಗಿ 1 ಕೆಜಿ ಲಡ್ಡು ತಯಾರಿಸುತ್ತೇನೆ ಎಂದು ವಾಗ್ದಾನ ಮಾಡಿದ್ದೇನೆ. ಅಯೋಧ್ಯೆಗೆ ಆಹಾರ ಪ್ರಮಾಣ ಪತ್ರವನ್ನೂ ತಂದಿದ್ದೇನೆ. ಈ ಲಡ್ಡುಗಳು ಒಂದು ತಿಂಗಳು ಬಾಳಿಕೆ ಬರುತ್ತವೆ. ೨೫ ಮಂದಿ ೩ ದಿನಗಳವರೆಗೆ ಲಡ್ಡುಗಳನ್ನು ತಯಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರದ ಪ್ರತಿಷ್ಠಾಪನೆಯ ದಿನಾಂಕವು ಹತ್ತಿರವಾಗುತ್ತಿದ್ದಂತೆ, ಧಾರ್ಮಿಕ ಉತ್ಸಾಹವು ಭಾರತದಾದ್ಯಂತ ಭಕ್ತರನ್ನು ಆವರಿಸಿದೆ. ಜನರು ಭಗವಾನ್ ರಾಮನಿಗೆ ವಿವಿಧ ವಸ್ತುಗಳನ್ನು ನೀಡಲು ಪ್ರಯತ್ನಿಸುತ್ತಿದ್ದಾರೆ. ಹೈದರಾಬಾದ್‌ನ ನಾಗಭೂಷಣ ರೆಡ್ಡಿ ಎಂಬವರು 1265 ಕೆಜಿ ತೂಕದ ಲಡ್ಡು ತಯಾರಿಸಿ ಅಯೋಧ್ಯೆಗೆ ನೀಡಿದ್ದಾರೆ.
ಲಡ್ಡು ಪ್ರಸಾದವನ್ನು ಹೈದರಾಬಾದ್‌ನಿಂದ ರಸ್ತೆ ಮೂಲಕ ಭವ್ಯ ಮೆರವಣಿಗೆಯೊಂದಿಗೆ ಅಯೋಧ್ಯೆಗೆ ಕೊಂಡೊಯ್ಯಲಾಯಿತು. ಪ್ರಸಾದವನ್ನು ರೆಫ್ರಿಜರೇಟೆಡ್ ಬಾಕ್ಸ್ನಲ್ಲಿ ತೆಗೆದುಕೊಂಡು ಹೋಗಲಾಗಿತ್ತು. ಐದು ವಾಹನಗಳಲ್ಲಿ ೧೮ ಮಂದಿ ಮೆರವಣಿಗೆಯೊಂದಿಗೆ ಸಾಗಿದ್ದರು. ಉದ್ಘಾಟನೆಯ ದಿನವಾದ ಜನವರಿ 22 ರಂದು ಭಕ್ತರಿಗೆ ಲಡ್ಡು ಪ್ರಸಾದ ವಿತರಿಸಲಾಗುವುದು.

Leave a comment

Your email address will not be published. Required fields are marked *