October 31, 2026
#ರಾಷ್ಟ್ರೀಯ

ಚೀನಾದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪನ

ನವದೆಹಲಿ:
ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿ ಸೋಮವಾರ ತಡರಾತ್ರಿ 7.2 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಸದ್ಯ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆಸ್ತಿಪಾಸ್ತಿ ಹಾನಿಯಾದ ಬಗ್ಗೆಯೂ ವರದಿಯಾಗಿಲ್ಲ.
ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ 7.2 ಎಂದು ಗುರುತಿಸಲಾಗಿದ್ದು, ಸುಮಾರು 80 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರಬಿAದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊAಡಿದೆ.
ಇದೇ ಜನವರಿ 11 ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಲಘು ಭೂಕಂಪ ಸಂಭವಿಸಿದ್ದವು. ಕಾಬೂಲ್‌ನಿಂದ ಈಶಾನ್ಯಕ್ಕೆ 241 ಕಿಮೀ ದೂರದಲ್ಲಿ ಕೇಂದ್ರ ಬಿಂದು ಪತ್ತೆಯಾಗಿತ್ತು. ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿತ್ತು.
47 ಮಂದಿ ಜೀವಂತ ಸಮಾಧಿ: ಸೋಮವಾರ ಬೆಳಿಗ್ಗೆ ಈಶಾನ್ಯ ಚೀನಾದ ಗುಡ್ಡಗಾಡು ಹಾಗೂ ಪರ್ವತ ಶ್ರೇಣಿಯಲ್ಲಿ ಭೂಕಂಪ ಸಂಭವಿಸಿದ್ದು, 47 ಮಂದಿ ಜೀವಂತ ಸಮಾಧಿಯಾಗಿದ್ದಾರೆ. 200 ಕ್ಕೂ ಹೆಚ್ಚು ಮಂದಿಯನ್ನು ತುರ್ತಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಪ್ರಸಾರಸಂಸ್ಥೆಗಳು ವರದಿ ಮಾಡಿವೆ. ಅಲ್ಲದೇ ದಿಢೀರ್ ಮಳೆ ಹಿನ್ನೆಲೆಯಲ್ಲಿ ಚೀನಾದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

Leave a comment

Your email address will not be published. Required fields are marked *