September 14, 2026
#ಜಿಲ್ಲೆ

ಮೋದಿ ಹಿಂದೂ ಸಂಪ್ರದಾಯ ಮುರಿದಿದ್ದಾರೆ

ಗದಗ:
ಪ್ರಧಾನಿ ಮೋದಿ ಅವರು ಅಯೊಧ್ಯೆಯ ರಾಮಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಯನ್ನ ನೆರೆವೇರಿಸಿದ್ದಾರೆ. ಇದಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರು ಬೇರೆ ಬೇರೆಯದ್ದೇ ಮಾತುಗಳನ್ನಾಡಲು ಶುರು ಮಾಡಿದ್ದಾರೆ. ಮೋದಿ ಉಪವಾಸ ವ್ರತ ಮಾಡಿದ್ದು ಅನುಮಾನ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ನಿಡಿದ್ದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ಜಿ.ಎಸ್.ಪಾಟೀಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಿಂದೂ ಸಂಪ್ರದಾಯ ಮುರಿದಿದ್ದಾರೆ ಎಂದು ಆರೋಪಿಸಿದ್ದಾರೆ.
ಗದಗದಲ್ಲಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಜಿ.ಎಸ್.ಪಾಟೀಲ್, ದೇವರ ಪ್ರತಿಷ್ಠಾಪನೆ ಮಾಡುವಾಗ ಹಿಂದೂ ಸಂಪ್ರದಾಯದAತೆ ದಂಪತಿ ಸಮೇತ ಪೂಜೆ ಸಲ್ಲಿಸಬೇಕು. ಆದ್ರೆ, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ವೇಳೆ ಮೋದಿ ಶಿಷ್ಟಾಚಾರ ಮರೆತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಾರ್ವಭೌಮ, ಒನ್ ಮ್ಯಾನ್ ಆರ್ಮಿ. ಸಂಪುಟದ ಸಹೋದ್ಯೋಗಿಗಳು, ಪಕ್ಷದ ನಾಯಕರು ಬೇಕಾಗಿಲ್ಲ, ಎಲ್ಲಾ ಅವರೇ ಮಾಡಿ ಹಿಂದೂ ಸಂಪ್ರದಾಯ ಮುರಿದಿದ್ದಾರೆ. ಅವರಿಗೆ ಕುಟುಂಬ ಇಲ್ಲದಿದ್ರೆ ದಂಪತಿಯನ್ನು ಕೂರಿಸಿ ಪೂಜೆ ಮಾಡಿಸಬೇಕಿತ್ತು. ಪ್ರಧಾನಿ ನರೇಂದ್ರ ಮೋದಿ ಹಿಂದೂ ಸಂಪ್ರದಾಯ ಮುರಿದಿದ್ದಾರೆ. ಸಂಪ್ರದಾಯ ಮುರಿದಾಗ ಕೆಟ್ಟ ಘಟನೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಬಂದಾಗ ಪ್ರಧಾನಿಗಳು ಭಾವನಾತ್ಮಕ ವಿಷಯ ತರುತ್ತಾರೆ. ಪ್ರಧಾನಿ ಮೋದಿಯವರು ಭಾವನಾತ್ಮಕ ವಿಷಯದ ಮೂಲಕ ಮತದಾರರನ್ನ ತಮ್ಮ ಕಡೆ ಕೊಂಡೊಯ್ಯುತ್ತಾರೆ. ಇಂತಹ ಅನೇಕ ವಿಚಾರ ದೇಶದಾದ್ಯಂತ ಕಾಣುತ್ತಿದ್ದೇವೆ ಎಂದು ಮೋದಿ ವಿರುದ್ಧ ಕಿಡಿಕಾರಿದರು.
ಮೋದಿ ವ್ರತದ ಮೇಲೆ ಮೊಯ್ಲಿ ಅನುಮಾನ
ಮತ್ತೊಂದೆಡೆ ಚಿಕ್ಕಬಳ್ಳಾಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಮೋದಿ ಉಪವಾಸ ಮಾಡಿಲ್ಲ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ರೆ ಒಂದೆರೆಡು ದಿನದಲ್ಲಿ ಮನುಷ್ಯ ಬೀಳುತ್ತಾನೆ. 11 ದಿನಗಳ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಉಪವಾಸ ವ್ರತದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
ರಾಮಮಂದಿರದ ಕೆಲಸ ಸಂಪೂರ್ಣ ಆಗಲಿಲ್ಲ. ನರೇಂದ್ರ ಮೋದಿ ಪ್ರಾಣ ಪ್ರತಿಷ್ಟಾಪನೆ ನಡೆಸಿಕೊಟ್ಟಿದ್ದು ತಪ್ಪು. ನರೇಂದ್ರ ಮೋದಿ ಗರ್ಭಗುಡಿಗೆ ಪ್ರವೇಶ ಮಾಡಿದ್ದು ಸಹ ತಪ್ಪು. ಅವರ ಕೈಗೆ ತೀರ್ಥ ಬಾಯಿಗೆ ಕೊಡುವುದು ಇದು ಹಿಂದೂ ಧರ್ಮಕ್ಕೆ ಬಂದ ದುಸ್ಥಿತಿ ಎಂದು ಹೇಳಿದ್ದಾರೆ.

Leave a comment

Your email address will not be published. Required fields are marked *