July 28, 2026
#ಬೆಂಗಳೂರು

ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ

ಬೆಂಗಳೂರು:
29ನೇ ಮಹಡಿಯಿಂದ ಬಿದ್ದು 16ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಗೂರು ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಬಾಲಕಿ ಅಪಾರ್ಟ್ಮೆಂಟ್‌ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್ವೇರ್ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4.30ಕ್ಕೆ ಎದ್ದು ಹಾಲ್‌ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್ಮೆಂಟ್ ಅಸೋಸಿಯೇಷನ್‌ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು.
ಈ ಸಂಬAಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a comment

Your email address will not be published. Required fields are marked *