ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್‌ಗೆ ಯಾವುದೇ ಅನ್ಯಾಯ ಆಗಿಲ್ಲ
ಕೊಡಗು:
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯೊಂದು ನಡೆದಿದೆ. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಶೆಟ್ಟರ್ ಕಾಂಗ್ರೆಸ್ ತೊರೆದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಂಜೆ ನಾಲ್ಕು ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇನ್ನು ಮತ್ತೊಂದೆಡೆ ಘಟನೆ ಸಂಬAಧ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್‌ಗೆ ಯಾವುದೇ ಅನ್ಯಾಯ ಆಗಿಲ್ಲ ಎಂದಿದ್ದಾರೆ.
ಕೊಡಗಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಸೋತರೂ ಶೆಟ್ಟರನ್ನು ಎಂಎಲ್‌ಸಿ ಮಾಡಿದ್ದೆವು. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಒಮ್ಮೆ ಅವರು ನನಗೆ ಬಿಜೆಪಿಯಲ್ಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು ಎಂದು ತಿಳಿಸಿದ್ದಾರೆ. ಇನ್ನು ನಿಗಮ ಮಂಡಳಿ ನೇಮಕ ವಿಚಾರ ಸಂಬAಧ ಮಾತನಾಡಿದ ಸಿಎಂ, ನಾವೇನು ಗುಲಾಮರಾ ಎಂಬ ಸಚಿವ ಕೆ.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ವೊಬ್ಬರು ಒಂದೊAದು ಹೆಸರನ್ನ ಸಜೆಸ್ಟ್ ಮಾಡ್ತಾರೆ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದು ತಿಳಿಸಿದ್ದಾರೆ.









































































































































































































































































































































































































































































































































































































































































































































































































































































































































































































































































































































