ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ: ಶಿಲ್ಪಿ ಅರುಣ್ ಯೋಗಿರಾಜ್
ಮೈಸೂರು:
ನನಗೆ ರಾಜಕೀಯ ಆಸಕ್ತಿ ಇಲ್ಲ. ಕಲಾ ಸೇವೆಯಲ್ಲಿ ಮುಂದುವರಿಯುತ್ತೇನೆ ಎಂದು ಅಯೋಧ್ಯೆ ರಾಮಮಂದಿರ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಹೇಳಿದ್ದಾರೆ.
ತವರು ನೆಲ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕೆಲಸವನ್ನ ನಾನು ಶ್ರದ್ಧೆಯಿಂದ ಮಾಡಿದ್ದೇನೆ. ನನಗೆ ಇಷ್ಟೊಂದು ಪ್ರೀತಿ, ಅದ್ದೂರಿ ಸ್ವಾಗತ ಸಿಗುತ್ತೆ ಅಂತಾ ಅಂದುಕೊAಡಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಯುವಕರು ಕುಲಕಸುಬು ನಂಬಿದರೆ ಒಳ್ಳೆಯ ಜೀವನ ರೂಪಿಸಿಕೊಳ್ಳಬಹುದು. ಅದಕ್ಕೆ ನಾನೇ ಉದಾಹರಣೆ. ರಾಜಕೀಯದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ರಾಜಕೀಯಕ್ಕೆ ಬರುವ ಆಸಕ್ತಿಯೂ ನನಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ನನ್ನನ್ನು ನೋಡಲು ತುಂಬಾ ಜನ ಬಂದಿದ್ದರು. ಎಲ್ಲರನ್ನೂ ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ. ಮೈಸೂರಿಗೆ ಬರುತ್ತಿದ್ದಂತೆ ಅರಮನೆಗೆ ಭೇಟಿ ನೀಡಿದ್ದೆ. ಯದುವೀರ್ ಅವರನ್ನು ಮಾತನಾಡಿಸಿ ಬಂದಿದ್ದೇನೆ. ಅವರೊಂದಿಗೆ ನನ್ನ ಅನುಭವ ಹೇಳಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.














































































































































































































































































































































































































































































































































































































































































































































































































































































































































































































































































































































