July 29, 2026
#ಬೆಂಗಳೂರು

ನುಡಿದಂತೆ ನಡೆದಿರುವ ಸರ್ಕಾರ ೫ ಗ್ಯಾರಂಟಿ ಯಶಸ್ವಿಯಾಗಿ ಜಾರಿ ಮಾಡಿದೆ

ಬೆಂಗಳೂರು:
ಸರ್ಕಾರ ನುಡಿದಂತೆ ನಡೆದಿದೆ. 5 ಗ್ಯಾರಂಟಿ ಯಶಸ್ವಿಯಾಗಿ ಜಾರಿ ಮಾಡಿದೆ. ಶಕ್ತಿ ಯೋಜನೆಯಲ್ಲಿ 134.34 ಕೋಟಿ ಜನ ಉಚಿತ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿ 2900.12 ಕೋಟಿ ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆ ಅಡಿ 1.50 ಕೋಟಿ ಗ್ರಾಹಕರು ಯೋಜನೆ ಫಲ ಪಡೆಯುತ್ತಿದ್ದಾರೆ. 700 ಕೋಟಿ ಗೃಹಜ್ಯೋತಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಗಣರಾಜ್ಯೋತ್ಸವ ಅಂಗವಾಗಿ ನಗರ ಮಾಣಿಕ್ ಶಾ ಗ್ರೌಂಡ್‌ನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮೊದಲು ನಾಡಿನ ಜನರಿಗೆ ಗಣರಾಜ್ಯೋತ್ಸವ ಶುಭಾಶಯ ಕೋರಿದರು. ರಾಜ್ಯದಲ್ಲಿ ೨೨೩ ತಾಲೂಕು ಬರ ಅಂತ ಘೋಷಣೆ ಮಾಡಲಾಗಿದೆ. ಬರ ಪರಿಹಾರಕ್ಕಾಗಿ ಎನ್‌ಡಿಆರ್ ಎಫ್‌ಗೆ ಅನುದಾನ ಕೋರಲಾಗಿದೆ. ರಾಜ್ಯ ಸರ್ಕಾರ ಬರ ಪರಿಹಾರವಾಗಿ ರೈತರಿಗೆ 2 ಸಾವಿರ ಮಧ್ಯಂತರ ಪರಿಹಾರ ನೀಡಲಾಗಿದೆ ಎಂದರು.
262 ಹೊಸ ಅಂಬುಲೆನ್ಸ್ ಖರೀದಿ: ಕುಡಿಯುವ ನೀರು, ಮೇವು, ಪರಿಹಾರ ಕ್ರಮಗಳಿಗಾಗಿ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಆಗಿದೆ. ರೈತ ಸಿರಿ ಯೋಜನೆ ಅಡಿ ಸಿರಿಧಾನ್ಯ ಬೆಳೆಗಾರರಿಗೆ ಹೆಕ್ಟೇರ್ ಗೆ 10 ಸಾವಿರ ದಂತೆ ಗರಿಷ್ಠ 2 ಹೆಕ್ಟೇರ್‌ಗೆ ಪ್ರೋತ್ಸಾಹ ಧನ ನೀಡಲಾಗ್ತಿದೆ. ಕರ್ನಾಟಕ ಅನೀಮಿಯಾ ಮುಕ್ತ ರಾಜ್ಯ ಮಾಡಲು ೧೮೫.೭೪ ಕೋಟಿ ವೆಚ್ಚ ಮಾಡಲಾಗ್ತಿದೆ. ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸಲಾಗಿದೆ. ಡಯಾಲಿಸಿಸ್ ಕೇಂದ್ರಗಳನ್ನ 219 ಕ್ಕೆ ವಿಸ್ತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. 108 ಆರೋಗ್ಯ ಕವಚ ಯೋಜನೆ ಅಡಿ ಹೊಸದಾಗಿ ೨೬೨ ಅಂಬುಲೆನ್ಸ್ ಖರೀದಿ ಮಾಡಲಾಗ್ತಿದೆ ಎಂದು ಹೇಳಿದರು.
ಸುರಂಗ ರಸ್ತೆ ನಿರ್ಮಿಸಲು ಯೋಜನೆ: ಬೆಂಗಳೂರು ಅಭಿವೃದ್ಧಿಗೆ ಬ್ರ‍್ಯಾಂಡ್ ಬೆಂಗಳೂರು, ಸಾರ್ವಜನಿಕರ ಧ್ವನಿ ಸರ್ಕಾರದ ಧ್ವನಿ ಎಂಬ ಮನೋಭಾವದಿಂದ ರೂಪಿಸಲಾಗಿದೆ. 8 ಪ್ರಮುಖ ವಿಷಯಗಳ ಕುರಿತು ತಜ್ಞರು, ಸಾರ್ವಜನಿಕರಿಂದ ಸಲಹೆ ಪಡೆಯಲಾಗಿದೆ. 70 ಸಾವಿರ ಸಲಹೆ ಬಂದಿದ್ದು ಸಮಿತಿ ಪರಿಶೀಲನೆ ಮಾಡಿ ಕ್ರಮ ಮಾಡಲಾಗುತ್ತದೆ. ಬೆಂಗಳೂರು ಮುಖ್ಯ ರಸ್ತೆಗಳ ಅಭಿವೃದ್ಧಿ 200 ಕೋಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆ ನಿರ್ಮಿಸಲು ಯೋಜನೆ ರೂಪಿಸಲಾಗ್ತಿದೆ. ಪ್ರಾಯೋಗಿಕವಾಗಿ 2km ರಸ್ತೆ ನಿರ್ಮಾಣಕ್ಕೆ ಡಿಪಿಆರ್ ತಯಾರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವ ವ್ಯವಸ್ಥೆ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೆ ತರಲಾಗಿದೆ ಎಂದರು.

Leave a comment

Your email address will not be published. Required fields are marked *