September 14, 2026
#ಜಿಲ್ಲೆ

ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಸ್ಥಳದಲ್ಲೇ ನಾಲ್ವರ ದುರ್ಮರಣ!

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

https://imasdk.googleapis.com/js/core/bridge3.615.0_en.html#goog_1565488156

ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a comment

Your email address will not be published. Required fields are marked *