ಮಾಣಿಕ್ ಷಾ ಗ್ರೌಂಡ್‌ನಲ್ಲಿ ಭದ್ರತಾ ಲೋಪ
ಬೆಂಗಳೂರು:
ಅಳಿಯನ ಕೆಪಿಎಸ್‌ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ನ್ಯಾಯ ಕೇಳಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರು ಮೂಲದ ಪರಶುರಾಮ್ ವಶಕ್ಕೆ ಪಡೆದ ವ್ಯಕ್ತಿ. ಸಿಎಂ ಸಿದ್ದರಾಮಯ್ಯ ಹಾಗೂ ಗೌವರ್ನರ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದರು. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಕಬ್ಬನ್ ಪಾರ್ಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಡೆದಿದ್ದೇನು..?: ಗಣರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿತ್ತು. ಆದರೂ ಖಾಕಿ ಕೋಟೆ ಭೇದಿಸಿ ಪರಶುರಾಮ್, ಸಿಎಂ ಬಳಿ ನುಗ್ಗಿದ್ದಾನೆ. ಬಳಿಕ ಸಿಎಂ ಮುಂದೆ ಪ್ಲೇ ಕಾರ್ಡ್ ತೋರಿಸಿ ಆಕ್ರೋಶ ವ್ಯಕ್ತಪಡಿಸಲು ಯತ್ನಿಸಿದ್ದಾನೆ. ವ್ಯಕ್ತಿಯನ್ನು ಗಮನಿಸಿದ ಪೊಲೀಸರು ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪರಶುರಾಮ್ ಹೇಳಿದ್ದೇನು..?: ಪರಶುರಾಮ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನನ್ನ ಅಳಿಯ ಕೆಪಿಎಸ್‌ಸಿ ಪರೀಕ್ಷೆ ಬರೆದಿದ್ದು, ಅದರ ಫಲಿತಾಂಶ ತಡವಾಗುತ್ತಿದೆ. ಈ ಕಾರಣಕ್ಕೆ ಸಿಎಂ ಬಳಿ ನ್ಯಾಯ ಕೇಳಲು ಬಂದಿರುವುದಾಗಿ ಹೇಳಿದ್ದಾನೆ.













































































































































































































































































































































































































































































































































































































































































































































































































































































































































































































































































































































