September 13, 2026
#ಜಿಲ್ಲೆ

ಅಂಬೇಡ್ಕರ್ ನಾಮಫಲಕ ವಿಚಾರಎರಡು ಗುಂಪುಗಳ ನಡುವೆ ಘರ್ಷಣೆ

ಮೈಸೂರು:
ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
ಮನೆಗಳಿಗೆ ಕಲ್ಲು ತೂರಾಟ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂ ಆಗಿದೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು, ಎಸ್‌ಪಿ ಸೀಮಾ ಲಾಟ್ಕರ್ ದೌಡಾಯಿಸಿದ್ದಾರೆ. ಘಟನೆ ಸಂಬAಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆದಿದೆ.

Leave a comment

Your email address will not be published. Required fields are marked *