October 28, 2026
#ಬೆಂಗಳೂರು

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ

ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಭಾರೀ ವರ್ಗಾವಣೆ ಮಾಡಿದ್ದು, ಓರ್ವ ಡಿವೈಎಸ್‌ಪಿ ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಯು.ಡಿ.ಕೃಷ್ಣಕುಮಾರ್-ಡಿವೈಎಸ್‌ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ಎಸಿಪಿ ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ಎಸಿಪಿ, ಡಿಸಿಆರ್‌ಇ, ಮೈಸೂರು ಸೇರಿದಂತೆ ಒಟ್ಟು 33 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಂಪAಗಿರಾಮನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿಕಿರಣ್, ರಾಮನಗರ ಕುಂಬಳಗೋಡು ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಜಿ ಹೂಗಾರ್. ಕಾಟನ್‌ಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನರೇಂದ್ರ ಬಾಬು, ಸಿಸಿಬಿ ಬೆಂಗಳೂರು ಇನ್ಸ್ಪೆಕ್ಟರ್ ಕೆ.ಲಕ್ಷ್ಮೀ ನಾರಾಯಣ್, ಹಲಸೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕೆ, ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ದೀಪಕ್ ಆರ್ ಸೇರಿ ಒಟ್ಟು 132 ಇನ್ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಶಾಲಾ ಮುಖ್ಯ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿಕೆ
2023-24ನೇ ಸಾಲಿನ ಮುಖ್ಯ ಶಿಕ್ಷಕ ಮತ್ತು ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಜ.30ರಂದು ನಡೆಸಲು ನಿರ್ಧರಿಸಿದ್ದ ಶಾಲಾ ಶಿಕ್ಷಣ ಇಲಾಖೆಯು ವರ್ಗಾವಣೆ ಕೌನ್ಸೆಲಿಂಗ್ ಫೆ.೩ಕ್ಕೆ ಮುಂದೂಡಿದೆ. ಫೆ.೩ರಂದು ‘ಬಿ’ ವಲಯದಿಂದ ‘ಎ’ ವಲಯಕ್ಕೆ ಹಾಗೂ ‘ಸಿ’ ವಲಯದಿಂದ ‘ಬಿ’ ವಲಯಕ್ಕೆ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ವೃಂದಕ್ಕೆ ಹಾಗೂ ಮುಖ್ಯ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ ವೃಂದಕ್ಕೆ ಸ್ಥಾನವನ್ನು ಬಡ್ತಿ ನೀಡಲು ಅಧಿಸೂಚನೆ ಹೊರಡಿಸಲಾಗಿತ್ತು.

Leave a comment

Your email address will not be published. Required fields are marked *