July 29, 2026
#ಬೆಂಗಳೂರು

೧ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ,

ಬೆಂಗಳೂರು:
ಬೆಂಗಳೂರು ನಗರ ಪೊಲೀಸರು ಡ್ರಗ್ಸ್ ಪೆಡ್ಲರ್‌ಗಳ ವಿರುದ್ಧ ಸಮರ ಸಾರಿದ್ದಾರೆ. ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. ಅದರಂತೆ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ನಗರದಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ಏಳು ಜನ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಪುಲಿಕೇಶಿನಗರ, ಬಾಣಸವಾಡಿ, ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ನಗರದ ಹಲವೆಡೆ ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. 219 ಎಕ್ಸ್ಟೆಸಿ ಪಿಲ್ಸ್, ೫೦೫ ಗ್ರಾಂ ಎಂಡಿಎAಎ ಕ್ರಿಸ್ಟಲ್, 130 ಗ್ರಾಂ ತೂಕದ ಚರಸ್, ಕೊಕೇನ್ ಒಟ್ಟು 1 ಕೋಟಿ 53 ಲಕ್ಷದ 50 ಸಾವಿರ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಆಫ್ರಿಕಾ ಮೂಲದ ಆರೋಪಿ ಬಂಧನ
ಹೊಸ ವರ್ಷಕ್ಕೆಂದು ಮಾರಾಟಕ್ಕೆ 21 ಕೋಟಿ ಮೌಲ್ಯದ ಡ್ರಗ್ಸ್ ತಂದಿದ್ದ ಆಫ್ರಿಕಾ ಮೂಲದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಲಿಯೋನಾರ್ಡ್ ಓಕ್ವುಡಿಲಿ ಬಂಧಿತ ಆರೋಪಿ. ಬಂಧಿತನಿAದ 21 ಕೋಟಿ ಮೌಲ್ಯದ 16 ಕೆಜಿ ಎಂಡಿಎAಎ, 500 ಗ್ರಾಂ ಕೊಕೆನ್ ಜಪ್ತಿ ಮಾಡಲಾಗಿತ್ತು.
ಬ್ಯುಸಿನೆಸ್ ವೀಸಾ ಪಡೆದುಕೊಂದು ಆರೋಪಿ ಲಿಯೋನಾರ್ಡ್ ಬೆಂಗಳೂರಿಗೆ ಬಂದು ರಾಮಮೂರ್ತಿನಗರದಲ್ಲಿ ನೆಲೆಸಿದ್ದನು. ಈ ಹೊಸ ವರ್ಷಕ್ಕೆ ಮತ್ತೇರಿಸಲು ಅಪಾರ ಪ್ರಮಾಣದ ಡ್ರಗ್ಸ್ ತಂದಿದ್ದನು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಡ್ರಗ್ಸ್ ವಶಕ್ಕೆ ಪಡೆದಿದ್ದರು. ಆರೋಪಿಯು ಬೆಡ್‌ಶೀಟ್ ಕವರ್, ಸೋಪ್ ಬಾಕ್ಸ್ ಹಾಗೂ ಚಾಕೊಲೇಟ್ ಬಾಕ್ಸ್ನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದನು. ಹೊಸ ವರ್ಷಕ್ಕೆ ರೇವ್ ಪಾರ್ಟಿಗೆ ಡ್ರಗ್ಸ್ ಸಾಗಿಸಲು ಮುಂದಾಗಿದ್ದ ವೇಳೆ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದನು. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹುಕ್ಕಾ ಬಾರ್‌ಗಳ ನಿಷೇಧದ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪ
ಬೆಂಗಳೂರಿನಲ್ಲಿ ಹುಕ್ಕಾ ಬಾರ್‌ಗಳ ನಿಷೇಧದ ಕುರಿತು ವಿಧಾನಸಭೆಯಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಪ್ರಶ್ನೆ ಮಾಡಿದ್ದರು. ಹುಕ್ಕಾ ಬಾರ್‌ಗಳನ್ನು ನಿಷೇಧ ಮಾಡುವಂತೆ ವಿಪಕ್ಷ ಬಿಜೆಪಿ ಶಾಸಕರು ಆಗ್ರಹಿಸಿದ್ದರು. ನಿಮ್ಮ ಅವಧಿಯಲ್ಲಿ ನಿಷೇಧ ಮಾಡಿಲ್ಲ. ಈಗ ಹೇಳುತ್ತಿದ್ದೀರಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದ್ದರು. ಪಂಜಾಬ್ ರೀತಿ ಬೆಂಗಳೂರು ಆಗುವುದು ಬೇಡ ಎಂದು ಶಾಸಕ ಅರವಿಂದ ಬೆಲ್ಲದ್ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆಗ ಹುಕ್ಕಾ ಬಾರ್ ವಿಚಾರವಾಗಿ ಕಾಯ್ದೆ ತರುವುದಾಗಿ ಸದನಕ್ಕೆ ಗೃಹ ಸಚಿವ ಪರಮೇಶ್ವರ್ ಭರವಸೆ ನೀಡಿದ್ದರು.

Leave a comment

Your email address will not be published. Required fields are marked *