July 28, 2026
#ಕ್ರೀಡೆಗಳು

ಐಸಿಯುನಲ್ಲಿ ಮಯಾಂಕ್ ಅಗರ್ವಾಲ್

ವಿಮಾನದಲ್ಲಿ ಸೀಟಿನ ಮುಂಭಾಗ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥರಾದ ಕಾರಣ ಕರ್ನಾಟಕದ ರಣಜಿ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯಕ್ಕೆ ಸಂಬAಧಿಸಿದAತೆ ಮತ್ತೊಂದು ಬಿಗ್ಸ್ ಅಪ್ಡೇಟ್ ಹೊರಬಿದ್ದಿದೆ.
ಅಗರ್ತಲಾ ಐಎಲ್‌ಎಸ್ ಆಸ್ಪತ್ರೆ ಅವರ ಆರೋಗ್ಯಕ್ಕೆ ಸಂಬAಧಿಸಿದAತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಮಯಾಂಕ್ ಅಗರ್ವಾಲ್, ಸದ್ಯ ವೈದ್ಯಕೀಯವಾಗಿ ಸ್ಥಿರವಾಗಿದ್ದಾರೆ. ಅವರನ್ನು ನಿರಂತರ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಮಯಾಂಕ್‌ಗೆ ಏನಾಗಿತ್ತು?
ಕರ್ನಾಟಕ ರಣಜಿ ತಂಡದೊAದಿಗೆ ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ವಿಮಾನದಲ್ಲಿ ಅಗರ್ವಾಲ್ ಪ್ರಯಾಣ ಬೆಳೆಸಿದ್ದರು. ವಿಮಾನದಲ್ಲಿ ಕುಳಿತಿದ್ದ ಮಯಾಂಕ್, ಸೀಟಿನ ಮುಂಭಾಗದಲ್ಲಿ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದರು.
ನೀರು ಕುಡಿಯುತ್ತಿದ್ದಂತೆ ಮಯಾಂಕ್ ನಾಲಿಗೆ, ಬಾಯಿಗೆ ಸುಟ್ಟ ಅನುಭವವಾಗಿದೆ. ಪರಿಣಾಮ ಅವರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಅಗರ್ತಲಾದ ಐಎಲ್‌ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ತ್ರಿಪುರಾ ವಿರುದ್ಧ ಸೋಮವಾರ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ಗೆಲುವು ಸಾಧಿಸಿತ್ತು. ಮುಂದಿನ ಪಂದ್ಯಕ್ಕಾಗಿ ಸೂರತ್‌ಗೆ ಮಯಾಂಕ್ ಪ್ರಯಾಣ ಬೆಳೆಸಿದ್ದರು.

Leave a comment

Your email address will not be published. Required fields are marked *