September 15, 2026

ಜನವರಿ 29ರಿಂದ ಬೆಂಗಳೂರಿನಲ್ಲಿ ಜಿಎಎಫ್‌ಎಕ್ಸ್ ಸಮ್ಮೇಳನ

ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನವರಿ 29 ರಿಂದ ಗೇಮಿಂಗ್ ಮತ್ತು ಅನಿಮೇಷನ್ ಸಮ್ಮೇಳನ ನಡೆಯಲಿದೆ ಎಂದು ಐಟಿ-ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕರ್ನಾಟಕ ಸರ್ಕಾರ ಮತ್ತು ಅಬೈ ಸಂಯುಕ್ತಾಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನದಲ್ಲಿ 10 ರಾಷ್ಟ್ರಗಳಿಂದ 32 ಅಂತಾರಾಷ್ಟ್ರೀಯ ಭಾಷಣಕಾರರು ಭಾಗಿಯಾಗುತ್ತಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದರು.ರಾಮಮAದಿರಕ್ಕೆ ಜನರನ್ನು ಕರೆದುಕೊಂಡು ಹೋಗಲು ಬಿಜೆಪಿ ವ್ಯವಸ್ಥೆ […]

ನಿಜವಾದ ಬ್ರಾಹ್ಮಣರು, ಸ್ವಾಮೀಜಿಗಳುಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು

ಚಿಕ್ಕಬಳ್ಳಾಪುರ:ನಿಜವಾದ ಬ್ರಾಹ್ಮಣರು-ಸ್ವಾಮೀಜಿಗಳು ಆಗಿದ್ರೆ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಅಂತ ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದರು.ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಮಮಂದಿರ ಅಪೂರ್ಣ ಮಂದಿರ. ಕೇವಲ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಿದ್ರೆ ಸಾಲದು. ಅಲ್ಲಿ ರಾಮ ಲಕ್ಷಣ, ಸೀತಾ ಹಾಗೂ ಆಂಜನೇಯನ ವಿಗ್ರಹಗಳು ಇರಬೇಕು ಆಗಲೇ ರಾಮಮಂದಿರ ಪೂರ್ಣ ಆಗೋದು ಎಂದರು.ಗುಜರಾತ್‌ನ ಹತ್ಯಾಕಾಂಡದ ವೇಳೆ ಅಂದಿನ ಸಿಎಂ ಆಗಿದ್ದ ನರೇಂದ್ರ ಮೋದಿ […]

ಹೆಚ್ಚು ಭಕ್ತರು ಬರುವ ದೇವಳಗಳಿಗೆ ಪ್ರಾಧಿಕಾರ ರಚನೆ

ಕುಂದಾಪುರ:ಹೆಚ್ಚೆಚ್ಚು ಭಕ್ತರು ಆಗಮಿಸುವ ಮೈಸೂರಿನ ಚಾಮುಂಡೇಶ್ವರಿ, ಕೊಪ್ಪಳದ ಹುಲಿಗೆಮ್ಮ ಹಾಗೂ ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಉಸ್ತುವಾರಿಗೆ ಪ್ರಾಧಿಕಾರ ರಚನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ಮುಜರಾಯಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.ಇಲ್ಲಿನ ಮಾರಣಕಟ್ಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಜರಾಯಿ ಇಲಾಖೆ ದೇವಸ್ಥಾನಗಳ ಆಸ್ತಿ ಸರ್ವೇ ಮಾಡಲು ಈಗಾಗಲೇ ಕಂದಾಯ ಇಲಾಖೆ ಜೊತೆ ಕ್ರಮ ವಹಿಸಲಾಗಿದೆ. ಇಲಾಖೆಗೆ ಆಸ್ತಿಗಳು ಪರಭಾರೆ ಅಥವಾ ಅತಿಕ್ರಮಣವಾಗಿದ್ದರೆ ಹಿಂಪಡೆಯಲು ಸ್ವಷ್ಟ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ಮುಜರಾಯಿ ದೇವಸ್ಥಾನದ ಎ, ಬಿ ದರ್ಜೆಯ […]

ಹೈಕಮಾಂಡ್ ವಿರುದ್ಧವೇ ಪರಮೇಶ್ವರ್ ಅಸಮಾಧಾನ

ಬೆಂಗಳೂರು:ನಮ್ಮ ಅಭಿಪ್ರಾಯ ತೆಗೆದುಕೊಂಡು ಮಾಡದಿರುವುದಕ್ಕೆ ನಿಗಮ ಮಂಡಳಿ ನೇಮಕ ಇಷ್ಟು ಗೊಂದಲ ಆಗ್ತಿದೆ ಅಂತ ಗೃಹ ಸಚಿವ ಪರಮೇಶ್ವರ್, ಹೈಕಮಾಂಡ್ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದಾರೆ.ನಿಗಮ ಮಂಡಳಿ ನೇಮಕ ತಡ ಆಗ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಗಮ ಮಂಡಳಿ ನೇಮಕಾತಿಗೆ ನಮ್ಮ ಅಭಿಪ್ರಾಯವನ್ನೂ ಪಡೆಯಬೇಕು. ಆದ್ರೆ ನಮ್ಮನ್ನ ಯಾರೂ ಕೇಳಿಲ್ಲ. ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿರಬಹುದು. ಆದರೆ ನಮ್ಮ ಜತೆ ಮಾತನಾಡಿ ಪಟ್ಟಿ ಮಾಡಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ದಾರೆ.ಜಿಲ್ಲಾವಾರು ಕೆಲಸ ಮಾಡಿರೋದು ನಮಗೆ ಗೊತ್ತಿರುತ್ತೆ. […]

ಅಲ್ಪಮತಿಗಳ ಬಗ್ಗೆ ನಾನು ಹೆಚ್ಚು ಒತ್ತುಕೊಡುವುದಿಲ್ಲ

ಬೆಳಗಾವಿ:ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಆಹ್ವಾನ ಮತ್ತು ದೇವಸ್ಥಾನಕ್ಕೆ ದೇಣಿಗೆ ನೀಡಿರುವ ವಿಚಾರವಾಗಿ ಬೆಳಗಾವಿಯ ಘಟಾನುಘಟಿ ನಾಯಕರ ನಡುವೆ ವಾಗ್ಯುದ್ದ ಶುರುವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಪ್ರತಿಯೊಬ್ಬರು ಅಲ್ಪಮತಿಗೆ ಹೊಳೆದಷ್ಟು ಮಾತನಾಡುತ್ತಾರೆ. ಅಲ್ಪಮತಿಗಳ ಬಗ್ಗೆ ನಾನು ಹೆಚ್ಚು ಒತ್ತುಕೊಡುವುದಿಲ್ಲ’ ಎಂದು ಶಾಸಕ ಲಕ್ಷ್ಮಣ ಸವದಿ ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಅಲ್ಪಮತಿ […]

ಪಿಎಸ್‌ಐ ನೇಮಕಾತಿ ಅಕ್ರಮ: ಜಂಟಿ ಅಧಿವೇಶನದಲ್ಲಿತನಿಖಾ ವರದಿ ಮಂಡನೆಗೆ ಚಿಂತನೆ

ಬೆAಗಳೂರು:ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬAಧಿಸಿದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಇದನ್ನು ಜಂಟಿ ಅಧಿವೇಶನದಲ್ಲಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ತನಿಖಾ ವರದಿಯನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿತ್ತು.ಒಟ್ಟು 470ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಸಿರುವ ತನಿಖಾ ಸಮಿತಿ, ನೇಮಕಾತಿ ವೇಳೆ ಆಗಿರುವ ಲೋಪಗಳ ಬಗ್ಗೆ ಸಂಕ್ಷಿಪ್ತವಾಗಿ ಉಲ್ಲೇಖಿಸಿದೆ. ಪ್ರಕರಣದಲ್ಲಿ ಹಲವು ರಾಜಕಾರಣಿಗಳು ಭಾಗಿಯಾಗಿದ್ದಾರೆಂಬ ಆರೋಪವನ್ನೂ ಮಾಡಲಾಗಿದೆ. ನೋಟಿಸ್ ನೀಡಿದ್ದರೂ ಕೆಲವು ಪ್ರಭಾವಿಗಳು ಗೈರಾದ ಬಗ್ಗೆಯೂ […]

ನಾಪತ್ತೆಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವು

ಮಂಡ್ಯ:ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (ಶಿಕ್ಷಕಿಯೂ ಹೌದು) ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. […]

ಚೀನಾದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪನ

ನವದೆಹಲಿ:ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿ ಸೋಮವಾರ ತಡರಾತ್ರಿ 7.2 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಸದ್ಯ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆಸ್ತಿಪಾಸ್ತಿ ಹಾನಿಯಾದ ಬಗ್ಗೆಯೂ ವರದಿಯಾಗಿಲ್ಲ.ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ 7.2 ಎಂದು ಗುರುತಿಸಲಾಗಿದ್ದು, ಸುಮಾರು 80 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರಬಿAದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊAಡಿದೆ.ಇದೇ ಜನವರಿ 11 ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ […]

ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

ಅಯೋಧ್ಯೆ:500 ವರ್ಷಗಳ ಬಳಿಕ ಭಗವಾನ್ ರಾಮ ಸೋಮವಾರ ತನ್ನ ವಾಸಸ್ಥಾನಕ್ಕೆ ಮರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ. ಇದಾದ ಬಳಿಕ ಸಾವರ್ಜನಿಕರ ದರ್ಶನಕ್ಕೆ ಅನುಮತಿ ನೀಡಲಾಯಿತು.ಸಾರ್ವಜನಿಕರಿಗೆ ರಾಮಮಂದಿರದಲ್ಲಿ ಬಾಲರಾಮನ ದರ್ಶನಕ್ಕೆ ಅವಕಾಶ ನೀಡುತ್ತಿದ್ದಂತೆಯೇ ಭಕ್ತರ ದಂಡೇ ಹರಿದು ಬರಲಾರಂಭಿಸಿದೆ. ಸೋಮವಾರ ರಾತ್ರಿಯಿಂದಲೇ ಅಯೋಧ್ಯಾಧಾಮದಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲದೇ ತೀವ್ರ ಚಳಿಯನ್ನೂ ಲೆಕ್ಕಿಸದೇ ದೇವಸ್ಥಾನದ ಹೊರಗಡೆಯೂ ಸಾವಿರಾರು ಜನ ಜಮಾಯಿಸತೊಡಗಿದರು.ತಡರಾತ್ರಿಯಿಂದಲೇ ರಾಮ ಮಂದಿರದ ಮುಖ್ಯ ದ್ವಾರದ ಹೊರಗೆ ಭಕ್ತಾದಿಗಳ ಉದ್ದನೆಯ […]

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ವ್ಯಕ್ತಿಯ ಬಂಧನ

ದಕ್ಷಿಣ ಭಾರತದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣಗೆ ಈ ಡೀಪ್‌ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿದೆ. ರಶ್ಮಿಕಾ ಸೇರಿದಂತೆ ಹಲವರ ಡೀಪ್‌ಫೇಕ್ ವಿಡಿಯೋ ಮಾಡಿದ್ದ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ […]