September 16, 2026

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣ ಸಿಐಡಿ ತನಿಖೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ

ಬೆAಗಳೂರು:ಬೆಳಗಾವಿಯ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹೆಸರಿನಲ್ಲಿ ಅಪೆಕ್ಸ್ ಬ್ಯಾಂಕ್‌ನಿAದ ಕೋಟ್ಯಾಂತರ ರೂಪಾಯಿ ಸಾಲ ಪಡೆದು ಮರುಪಾವತಿಸದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದೆ. ಇದೀಗ ರಾಜ್ಯ ಸರ್ಕಾರ, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ.ಮಾಜಿ ಸಚಿವ, ಗೋಕಾಕ್ ಶಾಸಕ […]

ಕೊನೆಗೂ ನಿಕ್ಕಿ ಆಯಿತು ಗುರು-ಜಗ್ಗೇಶ್ ಚಿತ್ರದ ರಿಲೀಸ್ ಡೇಟ್

ಮಠ ಖ್ಯಾತಿಯ ಗುರು ಪ್ರಸಾದ್ ಮತ್ತು ನವರಸ ನಾಯಕ ಜಗ್ಗೇಶ್ ಕಾಂಬಿನೇಷನ್ ನ ರಂಗನಾಯಕ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಮಾರ್ಚ್ 8 ರಂದು ಶಿವರಾತ್ರಿಗೆ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ೧೫ ವರ್ಷಗಳ ನಂತರ ಗುರು ಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್ ಚಿತ್ರವೊಂದು ಬಿಡುಗಡೆ ಆಗುತ್ತಿದೆ.ನಿರ್ದೇಶಕ ಮಠದ ಗುರುಪ್ರಸಾದ್ ಸಿನಿಮಾ ಕೈಗೆತ್ತಿಕೊಂಡರೇ ಅದು ಯಾವತ್ತು ಶುರುವಾಗತ್ತೋ, ಯಾವತ್ತು ಮುಗಿಯತ್ತೋ ಅವರಿಗೇ ಗೊತ್ತಿರುವುದಿಲ್ಲ. ಆದರೆ, ಈ ಬಾರಿ ಹಾಗಾಗಿಲ್ಲ. ‘ರಂಗನಾಯಕ’ ಚಿತ್ರವನ್ನು ಅತೀ […]

‘ಬೆಂಕಿ’ ಸಾಂಗ್ ಕೇಳಿ ಸಂಭ್ರಮಿಸಿದ ತನಿಷಾ ಕುಪ್ಪಂಡ

ಬಿಗ್ ಬಾಸ್ ಮನೆಯಿಂದ ಕಣ್ಣೀರು ಹಾಕುತ್ತಲೇ ಹೊರ ಬಂದ ನಟಿ ತನಿಷಾ ಕುಪ್ಪಂಡ, ಇದೀಗ ತನ್ನ ಬಗ್ಗೆ ಮೂಡಿ ಬಂದಿರುವ ಬೆಂಕಿ ಸಾಂಗ್ ಕೇಳಿ ಸಂಭ್ರಮಿಸುತ್ತಿದ್ದಾರೆ. ಸಾಂಗ್ ನೋಡಿದ ಬಳಿಕ ವಿಡಿಯೋವೊಂದನ್ನು ಮಾಡಿರುವ ಅವರು, ತುಂಬಾ ನೋವಿನಿಂದಲೇ ನಾನು ಬಿಗ್ ಬಾಸ್ ಮನೆಯಿಂದ ಆಚೆ ಬಂದೆ. ಆದರೆ, ನನ್ನ ಬಗ್ಗೆ ಸಾಂಗ್ ಮಾಡಿದ್ದು ಕೇಳಿ ತುಂಬಾನೇ ಖುಷಿ ಆಗುತ್ತಿದೆ. ನನಗೂ ಫ್ಯಾನ್ಸ್ ಇದ್ದಾರೆ ಎಂದು ನೋಡಿ ಸಂತಸವಾಯಿತು ಎಂದಿದ್ದಾರೆ.ಬಿಗ್ ಬಾಸ್ ಮನೆಯಲ್ಲಿ ತಮ್ಮದೇ ಆದ ರೀತಿಯಲ್ಲಿ ಆಟವಾಡಿದ್ದರು […]

ರಾಜವರ್ಧನ್ ನಟನೆಯ ‘ಪ್ರಣಯಂ’ ಚಿತ್ರದ ಟ್ರೈಲರ್ ರಿಲೀಸ್

ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ ಚಿತ್ರಗಳನ್ನು ನೀಡಿದ ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ. ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ […]

ಏಕಾಏಕಿ ನಾಯಕತ್ವದಿಂದ ಕೆಳಗಿಳಿದ ಗ್ಲೆನ್ ಮ್ಯಾಕ್ಸ್‌ವೆಲ್..!

ಆಸ್ಟ್ರೇಲಿಯದಲ್ಲಿ ನಡೆಯುತ್ತಿರುವ ಈ ಆವೃತ್ತಿಯ ಬಿಗ್ ಬ್ಯಾಷ್ ಟಿ20 ಲೀಗ್ ಇದೀಗ ಅಂತಿಮ ಹಂತವನ್ನು ತಲುಪಿದೆ. ಏತನ್ಮಧ್ಯೆ, ಮೆಲ್ಬೋರ್ನ್ ಸ್ಟಾರ್ಸ್ ತಂಡದ ನಾಯಕರಾಗಿದ್ದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್ ತಂಡದ ಅವಮಾನಕರ ಪ್ರದರ್ಶನದ ನಂತರ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. 2018ರಲ್ಲಿ ಈ ತಂಡದ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಮ್ಯಾಕ್ಸ್ವೆಲ್ ತಂಡದ ಕಳಪೆ ಪ್ರದರ್ಶನದ ಹೊಣೆ ಹೊತ್ತು ನಾಯಕತ್ವದಿಂದ ಕೆಳಗಿಳಿಯಲು ಮುಂದಾಗಿದ್ದಾರೆ. ಈ ಸೀಸನ್​ನ ಲೀಗ್ ಹಂತದಲ್ಲಿ ಮ್ಯಾಕ್ಸ್ವೆಲ್ ತಂಡವು ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನವನ್ನು ಗಳಿಸಿದ್ದು, […]

ವಿಂಡೀಸ್ ವಿರುದ್ಧ 10 ವಿಕೆಟ್​ಗಳ ಸುಲಭ ಜಯ ಸಾಧಿಸಿದ ಆಸ್ಟ್ರೇಲಿಯಾ

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿರುವ ವೆಸ್ಟ್ ಇಂಡೀಸ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್​ಗಳ ಹೀನಾಯ ಸೋಲು ಅನುಭವಿಸಿದೆ. ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 188 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದರೆ, ಆತಿಥೇಯ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 283 ರನ್ ಕಲೆಹಾಕಿತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ವಿಂಡೀಸ್ ಪಡೆ ಕೇವಲ 120 ರನ್​ಗಳಿಗೆ ಆಲೌಟ್ ಆಗಿ ಆಸೀಸ್​ಗೆ 26 ರನ್​ಗಳ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ ಗೆಲುವಿನ […]

ಬೋಯಿಂಗ್ ಸುಕನ್ಯಾ ಯೋಜನೆ ಲೋಕಾರ್ಪಣೆ

ಬೆಂಗಳೂರು:ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿ.ಮಾರೇನಹಳ್ಳಿ ಗ್ರಾಮದಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿAಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್‌ನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದೆ. 43 ಎಕರೆ ಪ್ರದೇಶದಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ಈ ವೇಳೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು, ದೇಶದ ಹೆಣ್ಣುಮಕ್ಕಳನ್ನು ಏವಿಯೇಷನ್ ಸೆಕ್ಟರ್‌ನತ್ತ ಆಕರ್ಷಿಸುವ ಮತ್ತು ಮಹಿಳೆಯರಿಗೆ ತರಬೇತಿ ನೀಡಲು ಉತ್ತೇಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, […]

ಪ್ರಾಣಪ್ರತಿಷ್ಠೆ ಹಿನ್ನೆಲೆ ಹೈಅಲರ್ಟ್

ಬೆಂಗಳೂರು: ಜನವರಿ 22ರಂದು ಸೋಮವಾರ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಬಿಗಿ ಭದ್ರತೆ ನಿಯೋಜಿಸಲಾಗುತ್ತಿದೆ. ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜ.22ರಂದು ಯಾವುದೇ ಪೊಲೀಸ್ (Police) ಸಿಬ್ಬಂದಿಗೆ ರಜೆ ನೀಡದಂತೆ ಸೂಚಿಸಲಾಗಿದೆ. ಒಂದು ವೇಳೆ ರಜೆಯಲ್ಲಿರುವವರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲೇಬೇಕು ಎಂದು ಹಿರಿಯ ಅಧಿಕಾರಿಗಳು ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.  ಈ ಹಿಂದಿನ ಕೋಮುಗಲಭೆಗಳ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಜೊತೆಗೆ ಆಯಾ ರೌಡಿಶೀಟರ್‌ಗಳ […]

ಬಿಲ್ಕಿಸ್‌ ಬಾನೊ ಕೇಸ್; ಶರಣಾಗತಿಗೆ ಕಾಲಾವಕಾಶ ಕೋರಿದ್ದ ಅಪರಾಧಿಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ

ನವದೆಹಲಿ: ಶರಣಾಗತಿಗೆ ಕಾಲಾವಕಾಶ ಕೋರಿ ಬಿಲ್ಕಿಸ್‌ ಬಾನೊ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಭಾನುವಾರದ ಒಳಗೆ ಶರಣಾಗುವಂತೆ ಸೂಚನೆ ನೀಡಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಿತು. ಕುಟುಂಬದವರ ವಿವಾಹ, ಪೋಷಕರ ಜವಾಬ್ದಾರಿ ಕಾರಣ ನೀಡಿ ಸಲ್ಲಿಸಿರುವ ಅರ್ಜಿಗಳನ್ನು ಕೋರ್ಟ್‌ ಪರಿಗಣಿಸಿಲ್ಲ. ಪ್ರಕರಣದ 11 ಅಪರಾಧಿಗಳು ಅಧಿಕಾರಿಗಳ ಮುಂದೆ ಶರಣಾಗುವಂತೆ ತಿಳಿಸಿದೆ.  ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಸದಸ್ಯರನ್ನು ಹತ್ಯೆ […]

ಯುವತಿ ನೇಣಿಗೆ ಶರಣು- ಕಾರಣ ನಿಗೂಢ

ಶಿವಮೊಗ್ಗ:ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.ಈ ಸಂಬAಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]