ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ಹೇಳಿಕೆಬಿಕೆ ಹರಿಪ್ರಸಾದ್ ವಿಚಾರಣೆ ನಡೆಸಿದ ಸಿಸಿಬಿ
ಬೆಂಗಳೂರು:ಕರ್ನಾಟಕದಲ್ಲಿ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಅವರನ್ನು ಶುಕ್ರವಾರ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು. ಕೆಕೆ ಗೆಸ್ಟ್ಹೌಸ್‌ನಲ್ಲಿ ಹರಿಪ್ರಸಾದ್ ವಿಚಾರಣೆ ನಡೆಸಲಾಯಿತು. ಇದೇ ವೇಳೆ, ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ ಹರಿಪ್ರಸಾದ್, ನನಗೆ ವಿವಿಐಪಿ ಟ್ರೀಟ್‌ಮೆಂಟ್ ಬೇಡ, ಬೇಕಿದ್ದರೆ ಅರೆಸ್ಟ್ ಮಾಡಿ ಎಂದರು.ಸಿಸಿಬಿ ವಿಚಾರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹರಿಪ್ರಸಾದ್, ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್‌ಎಸ್‌ಎಸ್ ಸರ್ಕಾರವೇ ಎಂದು […]







































































































































































































































































































































































































































































































































































































































































































































































































































































































































































































































































































































