ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿ
ರಾಯಚೂರು: ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಜಿಲ್ಲೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬರ ಪರಿಹಾರ, ಅತೀವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನ್ಯತೆಗಳಿದ್ದವು. ಎಷ್ಟೋ ಜನ ಬೆಳೆಯನ್ನೇ ಇಡದಿದ್ದರೂ ಅವರಿಗೂ ಪರಿಹಾರ ಸಿಗುತ್ತಿತ್ತು. ಬೆಳೆ ಹಾನಿಯಾದವರಿಗೆ ಪರಿಹಾರ ಸಿಗುತ್ತಿರಲಿಲ್ಲ ಎಂದರು. ಹಿಂದಿನ ಸರ್ಕಾರ ಇದ್ದಾಗ, ನಾನು ಕೃಷಿ ಸಚಿವನಿದ್ದಾಗಲೂ ನೋಡಿದ್ದೇನೆ. ಯಾರದ್ದೋ ಜಮೀನು ಮತ್ತೊಬ್ಬರಿಗೆ ಹಣ ಪಾವತಿಯಾಗಿತ್ತಿತ್ತು. ರೈತರ ಬೆಳೆಯೇ ಬೇರೆ ಪರಿಹಾರ ಬರುವುದೇ ಬೇರೆ […]







































































































































































































































































































































































































































































































































































































































































































































































































































































































































































































































































































































