ಕಾಂಗ್ರೆಸ್ ಗ್ಯಾರಂಟಿಗಳಿಗೆ ಬಿಜೆಪಿ ಕೌಂಟರ್ ಕೊಡಲು ಸಿದ್ಧತೆ; ಮೋದಿ ಗ್ಯಾರಂಟಿ ಪ್ರಚಾರಕ್ಕೆ ಸೂಚನೆ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಪ್ಲಾನ್ ಮಾಡಿಕೊಳ್ಳುತ್ತಿದೆ. ಕರ್ನಾಟಕದಲ್ಲಿ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲಲು ತಂತ್ರಗಾರಿಕೆ ಮಾಡಲಾಗುತ್ತಿದ್ದು, ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ನಿನ್ನೆ ನಡೆದ ಸಭೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಕೌಂಟರ್ ಮಾಡುವುದು ಹೇಗೆ ಎಂಬ ಬಗ್ಗೆಯೂ ಚರ್ಚೆ ನಡೆದಿದೆ. ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಗ್ಯಾರಂಟಿ ವರ್ಸಸ್ ಮೋದಿ ಗ್ಯಾರಂಟಿ ನಡೆಯುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯಾದ್ಯಂತ ಕಾಂಗ್ರೆಸ್ ಗ್ಯಾರಂಟಿಗಳ ಜೊತೆಗೆ ಮೋದಿ ಗ್ಯಾರಂಟಿ ಜಾಹೀರಾತುಗಳು ಕೂಡ ಕಾಣಸಿಗುತ್ತಿವೆ. ಅಲ್ಲದೆ, ಕೇಂದ್ರ ಸರ್ಕಾರದ ಯೋಜನೆಗಳನ್ನೇ […]







































































































































































































































































































































































































































































































































































































































































































































































































































































































































































































































































































































