ಬಿಜೆಪಿ ಅಭಿಪ್ರಾಯ ಸಂಗ್ರಹಣೆ ಸಭೆ:ಮುಖಂಡರಿAದ ಭಿನ್ನ ಅಭಿಪ್ರಾಯಗಳು
ಬೆಂಗಳೂರು:ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ ನಾಯಕರು ಬೆಂಗಳೂರು ನಗರದ ಯಲಹಂಕದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆದರೆ, ಸಭೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಅರುಣ್ ಕುಮಾರ್ ಪುತ್ತಿಲ ಬಂಡಾಯದ ಸ್ಪರ್ಧೆಯಿಂದ ಬಿಜೆಪಿ ಹೊಡೆತ ತಿಂದ ಬಗ್ಗೆ ಹೆಚ್ಚು ಚರ್ಚೆಯಾಗಿದೆ. ಇಂತಹ ತಪ್ಪು ನಿರ್ಧಾರ ಕೈಗೊಳ್ಳದಂತೆ ಮುಖಂಡರು ಎಚ್ಚರಿಕೆಯ ಸಲಹೆಯನ್ನು ನೀಡಿದ್ದಾರೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭಿಪ್ರಾಯ ಸಂಗ್ರಹದ ವೇಳೆ ವಿಧಾನಸಭಾ ಚುನಾವಣೆಯಲ್ಲಿನ ಪುತ್ತೂರು […]







































































































































































































































































































































































































































































































































































































































































































































































































































































































































































































































































































































