ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ
ಬೆಂಗಳೂರು:ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದು ಕಿಡಿಕಾರಿದ್ದಾರೆ.ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ […]







































































































































































































































































































































































































































































































































































































































































































































































































































































































































































































































































































































